70 ಕಿ.ಮೀವರೆಗೆ ಮೈಲೇಜ್.. ಬೆಲೆಯೂ ಅಗ್ಗ! ಈ ಸ್ಕೂಟರ್‌ಗಳು ಆಫೀಸ್‌ಗೆ ಹೋಗುವವರಿಗೆ ಬೆಸ್ಟ್ ಚಾಯ್ಸ್
ಬೆಂಗಳೂರು, ಮೈಸೂರು, ಮಂಗಳೂರು ಹಾಗೂ ಬೆಳಗಾವಿಯಂತಹ ನಗರಗಳಲ್ಲಿ ಆಫೀಸ್ ಕೆಲಸಕ್ಕೆ ತೆರಳುವವರಿಗೆ ದ್ವಿಚಕ್ರ ವಾಹನಗಳು (Two Wheelers) ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಪ್ರತಿಯೊಬ್ಬರಿಗೂ ಸ್ಕೂಟರ್‌ಗಳು (Scooters) ಬೇಕೇ ಬೇಕು. ಇವುಗಳನ್ನು ಮಹಿಳೆ ಹಾಗೂ ಪುರುಷರು ಸುಲಭವಾಗಿ ಓಡಿಸಬಹುದು. ನೀವು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗದರೆ, ಗರಿಷ್ಠ ಮೈಲೇಜ್ ನೀಡಬಲ್ಲ ಹೋಂಡಾ ಆಕ್ಟಿವಾ 125, ಟಿವಿಎಸ್ ಜೂಪಿಟರ್ 110, ಸುಜುಕಿ ಆಕ್ಸೆಸ್ 125, ಹೀರೋ ಡೆಸ್ಟಿನಿ 125 ಹಾಗೂ ಯಮಹಾ ರೇಝಡ್ಆರ್ 125 ಎಫ್ಐ ಹೈಬ್ರಿಡ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಹೋಂಡಾ ಆಕ್ಟಿವಾ 125 (Honda Activa 125):
ಇದು ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ಕನಿಷ್ಠ ರೂ.88,589 ಹಾಗೂ ಗರಿಷ್ಠ ರೂ.92,233 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಡಿಎಲ್ಎಕ್ಸ್ (DLX) ಮತ್ತು ಹೆಚ್-ಸ್ಮಾರ್ಟ್ (H-SMART) ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಸೈರನ್ ಬ್ಲೂ ಮತ್ತು ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಎಂಬ ಬಣ್ಣಗಳನ್ನು ಹೊಂದಿದೆ.

ನೂತನ 'ಆಕ್ಟಿವಾ 125' ಹೆಚ್ಚು ವಿಶಾಲ ಗಾತ್ರದಲ್ಲಿದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,260 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. 123.92-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 50 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಟಿಎಫ್‌ಟಿ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಟಿವಿಎಸ್ ಜುಪಿಟರ್ 110 (Tvs Jupiter 110):
ಈ ಸ್ಕೂಟರ್ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ರೂ.75,900 ರಿಂದ 88,100 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಡ್ರಮ್, ಡ್ರಮ್ ಅಲಾಯ್, ಡ್ರಮ್ ಎಸ್ಎಕ್ಸ್‌ಸಿ ಹಾಗೂ ಡಿಕ್ಸ್ ಎಸ್ಎಕ್ಸ್‌ಸಿ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಸ್ಟಾರ್‌ಲೈಟ್ ಬ್ಲೂ ಗ್ಲಾಸ್, ಡಾನ್ ಬ್ಲೂ ಮ್ಯಾಟ್, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್ & ಮೀಟಿಯರ್ ರೆಡ್ ಗ್ಲಾಸ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಹೊಸ 'ಜುಪಿಟರ್' ಸ್ಕೂಟರ್ 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,275 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. 113.3-ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 53 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್ ಹಾಗೂ ಯುಎಸ್‌ಬಿ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಸುಜುಕಿ ಆಕ್ಸೆಸ್ 125 (Suzuki Access 125):
ಇದು ಕನಿಷ್ಠ ರೂ.80,572 ಮತ್ತು ಗರಿಷ್ಠ ರೂ.97,166 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 124 ಸಿಸಿ ಸಿಂಗಲ್-ಸಿಲಿಂಡರ್, 4-ಸ್ಟ್ರೋಕ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 45 ರಿಂದ 64 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 4.2 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೀರೋ ಡೆಸ್ಟಿನಿ 125 (Hero Destini 125):
ಈ ಸ್ಕೂಟರ್ ರೂ.77,805 ರಿಂದ ರೂ.86,886 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 124-ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 59 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಡಿಸ್‌ಪ್ಲೇ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಯಮಹಾ ರೇಝಡ್ಆರ್ 125 ಎಫ್ಐ ಹೈಬ್ರಿಡ್ (Yamaha RAYZR 125 FI Hybrid):
ಇದೊಂದು ಪ್ರಮುಖ ಸ್ಕೂಟರ್ ಆಗಿದೆ. ರೂ.73,430 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 125-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 71.33 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಎಂಜಿನ್ ಕಿಲ್ ಸ್ವಿಚ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








