ಬ್ರೋ: 69 ಕಿಲೋಮೀಟರ್‌ವರೆಗೆ ಮೈಲೇಜ್, ನೋಡಲು ಬಲು ಸುಂದರ.. 1 ಲಕ್ಷದೊಳಗೆ ಸಿಗುವ 5 ಪಾಪ್ಯುಲರ್ ಬೈಕ್‌ಗಳಿವು!
ಹೊಸ ಬೈಕ್‌ವೊಂದನ್ನು ಖರೀದಿ ಮಾಡಬೇಕೆಂದು ಪ್ರತಿಯೊಬ್ಬ ಯುವಕರ ಕನಸಾಗಿರುತ್ತದೆ. ಆದರೆ ಯಾವುದನ್ನು ತೆಗೆದುಕೊಂಡಿದರೆ, ಹೆಚ್ಚು ಒಳಿತು ಎಂಬ ಗೊಂದಲದಲ್ಲಿರುತ್ತಾರೆ. ಅಂತಹವರಿಗೆ ಈ ಜನಪ್ರಿಯ ಮೋಟಾರ್‌ಸೈಕಲ್‌ಗಳಾದ ಬಜಾಜ್ ಪಲ್ಸರ್ 125, ಹೀರೋ ಎಕ್ಸ್‌ಟ್ರೀಮ್ 125ಆರ್, ಹೋಂಡಾ ಎಸ್‌ಪಿ 125, ಹೀರೋ ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ ಹಾಗೂ ಹೀರೋ ಗ್ಲಾಮರ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಬಜಾಜ್ ಪಲ್ಸರ್ 125 (Bajaj Pulsar 125):
ಇದೊಂದು ವಿಶ್ವಾಸಾರ್ಹ ಬೈಕ್ ಆಗಿದೆ. ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ರೂ.85,633 (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಬ್ಲ್ಯಾಕ್-ಗ್ರೀನ್, ಬ್ಲ್ಯಾಕ್-ಬ್ಲೂ, ಬ್ಲ್ಯಾಕ್-ಸಿಲ್ವರ್, ಬ್ಲ್ಯಾಕ್-ರೆಡ್, ರೆಡ್ ಕಾರ್ಬನ್ ಫೈಬರ್ & ಬ್ಲೂ ಕಾರ್ಬನ್ ಫೈಬರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,320 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಪಲ್ಸರ್ 125' ಮೋಟಾರ್‌ಸೈಕಲ್, 124.4-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 55 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಡಿಜಿಟಲ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೀರೋ ಎಕ್ಸ್‌ಟ್ರೀಮ್ 125ಆರ್ (Hero Xtreme 125R):
ಈ ಬೈಕ್‌ನ್ನು ಯುವ ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.91,500 ರಿಂದ ರೂ.1.07 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಫೈರ್‌ಸ್ಟಾರ್ಮ್ ರೆಡ್, ಕೋಬಾಲ್ಟ್ ಬ್ಲೂ ಹಾಗೂ ಸ್ಟಾಲಿಯನ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1319 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಎಕ್ಸ್‌ಟ್ರೀಮ್ 125ಆರ್' ಮೋಟಾರ್‌ಸೈಕಲ್, 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 66 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 4.2 ಇಂಚಿನ ಕಲರ್ ಎಲ್‍ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಎಂಜಿನ್ ಕಿಲ್ ಸ್ವಿಚ್ ಮತ್ತು ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಹೋಂಡಾ ಎಸ್‌ಪಿ 125 (Honda SP 125):
ಇದು ಜನಪ್ರಿಯ ಬೈಕ್ ಆಗಿದೆ. ರೂ.86,378 ರಿಂದ ರೂ.93,965 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. 123.94-ಸಿಸಿ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 60 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 60 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಸೈಲೆಂಟ್ ಸ್ಟಾರ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಸೂಪರ್ ಸ್ಪ್ಲೆಂಡರ್ ಎಕ್ಸ್‌ಟೆಕ್ (Hero Super Splendor XTEC):
ಈ ಮೋಟಾರ್‌ಸೈಕಲ್‌ನ್ನು ಎಲ್ಲ ವರ್ಗದ ಗ್ರಾಹಕರು ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ರೂ. 81,998 ರಿಂದ ರೂ.85,594 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 124.7-ಸಿಸಿ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 69 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೀರೋ ಗ್ಲಾಮರ್ (Hero Glamour):
ಇದೊಂದು ನಂಬಿಕಾರ್ಹ ಬೈಕ್ ಆಗಿದೆ. ರೂ.82,967 ರಿಂದ ರೂ. 92,186 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124.7-ಸಿಸಿ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








