ಯುವಕರು ಲೈಕ್ ಮಾಡುವ ಬೈಕ್‌ಗಳಿವು.. ಪ್ರೀಮಿಯಂ ಲುಕ್, ರೂ.2 ಲಕ್ಷದೊಳಗೆ ಲಭ್ಯ!

ಸಾಮಾನ್ಯವಾಗಿ ಯುವಕರಿಗೆ ಪ್ರೀಮಿಯಂ ಬೈಕ್‌ವೊಂದನ್ನು ಖರೀದಿ ಮಾಡಬೇಕೆಂಬ ಬಹುದೊಡ್ಡ ಆಸೆಯಿರುತ್ತದೆ. ಆದರೆ, ಯಾವ ಮೋಟಾರ್‌ಸೈಕಲ್ ತೆಗೆದುಕೊಂಡರೆ, ಹೆಚ್ಚು ಉತ್ತಮವಾಗಬಲ್ಲದು. ಅದು ದೀರ್ಘಕಾಲ ಬಾಳಿಕೆ ಬರಲಿದೆಯೇ ಎಂಬ ಹಲವು ಗೊಂದಲವಿರುತ್ತದೆ. ನೀವು ರೂ.2 ಲಕ್ಷದೊಳಗೆ ಹೆಚ್ಚು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ಹೊಚ್ಚ ಹೊಸ ಬೈಕ್‌ನ್ನು ಖರೀದಿಸಲು ಹುಡುಕಾಟ ನಡೆಸುತ್ತಿದ್ದೀರಾ.. ಹಾಗಾದರೆ ಟಿವಿಎಸ್ ರೈಡರ್ 125, ಹೀರೋ ಎಕ್ಸ್‌ಟ್ರೀಮ್ 125ಆರ್, ಬಜಾಜ್ ಪಲ್ಸರ್ ಎನ್160, ಹೋಂಡಾ ಎಸ್‌ಪಿ160 ಮತ್ತು ಯಮಹಾ ಎಫ್‌ಝಡ್‌-ಎಸ್ ಫೈ ಹೈಬ್ರಿಡ್ ಮಾಡೆಲ್‌ಗಳು ಹೆಚ್ಚು ಸೂಕ್ತವಾಗಲಿವೆ. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

ಟಿವಿಎಸ್ ರೈಡರ್ 125 (TVS Raider 125): ಈ ಮೋಟಾರ್‌ಸೈಕಲ್ ರೂ.85,010 ರಿಂದ ರೂ.1.04 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 124.8 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 11.38 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 11.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

Top 5 Premium Bikes Under Rs 2 Lakh Raider Xtreme Pulsar SP160 and FZ-S Fi Hybrid

ಈ ಟಿವಿಎಸ್ ರೈಡರ್ 125 ಬೈಕ್ 67 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲೈಟ್, ಹ್ಯಾಲೊಜೆನ್ ಇಂಡಿಕೇಟರ್‌ಗಳು, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಐಡಲ್ ಸ್ಟಾಪ್/ಸ್ಟಾರ್ಟ್ ಬಟನ್, ಎಲ್‌ಸಿಡಿ- ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ನೂತನ ರೈಡರ್ 125 ಮೋಟಾರ್‌ಸೈಕಲ್ ಇಕೋ, ಸ್ಪೋರ್ಟ್ ಎಂಬ ರೈಡಿಂಗ್ ಮೋಡ್‌ನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಹೊಂದಿದೆ. ಸ್ಟ್ರೈಕಿಂಗ್ ರೆಡ್ & ಬ್ಲೇಜಿಂಗ್ ಬ್ಲೂ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದು 123 ಕೆಜಿ ತೂಕವಿದ್ದು, 10 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ತನ್ನದಾಗಿಸಿಕೊಂಡಿದೆ.

Top 5 Premium Bikes Under Rs 2 Lakh Raider Xtreme Pulsar SP160 and FZ-S Fi Hybrid

ಹೀರೋ ಎಕ್ಸ್‌ಟ್ರೀಮ್ 125ಆರ್ (Hero Xtreme 125R): ಇದು ಕೂಡ ಜನಪ್ರಿಯ ಬೈಕ್ ಆಗಿದೆ. ರೂ.96,425 ರಿಂದ ರೂ.1 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ದೊರೆಯುತ್ತದೆ. 124.7 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 11.55 ಪಿಎಸ್ ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.5 11.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಹೊಸ ಹೀರೋ ಎಕ್ಸ್‌ಟ್ರೀಮ್ 125ಆರ್ ಮೋಟಾರ್‌ಸೈಕಲ್ 66 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಬೈಕ್ ಸ್ಪೋರ್ಟಿ ವಿನ್ಯಾಸವನ್ನು ಹೊಂದಿದ್ದು, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು ಎಲ್ಇಡಿ ಡಿಆರ್‌ಎಲ್‌ಗಳನ್ನು ಪಡೆದಿದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Top 5 Premium Bikes Under Rs 2 Lakh Raider Xtreme Pulsar SP160 and FZ-S Fi Hybrid

ಈ ಎಕ್ಸ್‌ಟ್ರೀಮ್ 125ಆರ್ ಬೈಕ್ ಕೋಬಾಲ್ಟ್ ಬ್ಲೂ, ಫೈರ್‌ಸ್ಟಾರ್ಮ್ ರೆಡ್ ಹಾಗೂ ಸ್ಟಾಲಿಯನ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ. ನೂತನ ಮೋಟಾರ್‌ಸೈಕಲ್ 136 ಕೆಜಿ ತೂಕವಿದ್ದು, 10 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ಬಜಾಜ್ ಪಲ್ಸರ್ ಎನ್160 (Bajaj Pulsar N160): ಈ ಬೈಕ್ ರೂ.1.23 ಲಕ್ಷದಿಂದ ರೂ.1.37 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 164. 82 ಸಿಸಿ ಏರ್-/ಆಯಿಲ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 16 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 14.65 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಈ ಬಜಾಜ್ ಪಲ್ಸರ್ ಎನ್160 ಮೋಟಾರ್‌ಸೈಕಲ್ 59.11 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು ಮತ್ತು ಎಲ್ಇಡಿ ಡಿಆರ್‌ಎಲ್‌ಗಳು, ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟರ್ನ್-ಬೈ-ಟರ್ನ್ ನಾವಿಗೇಷನ್, ಸ್ವಿಚ್‌ಗೇರ್ ಕಂಟ್ರೋಲ್‌ಗಳು ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Top 5 Premium Bikes Under Rs 2 Lakh Raider Xtreme Pulsar SP160 and FZ-S Fi Hybrid

ನೂತನ ಬಜಾಜ್ ಪಲ್ಸರ್ ಎನ್160 ಬೈಕ್ ಬ್ರೂಕ್ಲಿನ್ ಬ್ಲ್ಯಾಕ್, ರೇಸಿಂಗ್ ರೆಡ್ ಮತ್ತು ಕೆರಿಬಿಯನ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಾಗುತ್ತದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ರೋಡ್, ರೈನ್ ಹಾಗೂ ಆಫ್‌ರೋಡ್ ಎಂಬ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೋಂಡಾ ಎಸ್‌ಪಿ160 (Honda SP160): ಇದೊಂದು ಪ್ರಖ್ಯಾತ ಮೋಟಾರ್‌ಸೈಕಲ್ ಆಗಿದೆ. ರೂ.1.22 ಲಕ್ಷದಿಂದ ರೂ.1.28 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 162. 71 ಸಿಸಿ, ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 13 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 14.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಈ ಹೋಂಡಾ ಎಸ್‌ಪಿ160 ಬೈಕ್ 50 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 4.2-ಇಂಚಿನ ಟಿಎಫ್‌ಟಿ ಸ್ಕ್ರೀನ್, ಹೋಂಡಾ ರೋಡ್‌ಸಿಂಕ್ ಅಪ್ಲಿಕೇಶನ್, ಬ್ಲೂಟೂತ್ ಕನೆಕ್ಟಿವಿಟಿ, ಯುಎಸ್‌ಬಿ-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ & ಅಥ್ಲೆಟಿಕ್ ಬ್ಲೂ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ ಹೋಂಡಾ ಎಸ್‌ಪಿ160 ಮೋಟಾರ್‌ಸೈಕಲ್ ಸಿಂಗಲ್ - ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಸವಾರರ ರಕ್ಷಣೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಈ ಬೈಕ್ 138 ಕೆಜಿ ತೂಕವಿದ್ದು, 12 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಜೊತೆಗೆ ಗ್ರೌಂಡ್ ಕ್ಲಿಯರೆನ್ಸ್ 177 ಎಂಎಂ ಇದೆ.

ಯಮಹಾ ಎಫ್‌ಝಡ್‌-ಎಸ್ ಫೈ ಹೈಬ್ರಿಡ್ (Yamaha FZ-S Fi Hybrid): ಈ ಬೈಕ್ ರೂ.1.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಶಕ್ತಿಯುತವಾದ 149 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಒಳಗೊಂಡಿದೆ. 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಯಮಹಾ ಎಫ್‌ಝಡ್‌-ಎಸ್ ಫೈ ಹೈಬ್ರಿಡ್ ಮೋಟಾರ್‌ಸೈಕಲ್ 4.2-ಇಂಚಿನ ಫುಲ್-ಕಲರ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ಬ್ಲೂಟೂತ್ ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಈ ಬೈಕ್ 138 ಕೆಜಿ ತೂಕವಿದ್ದು, 13 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, April 6, 2025, 17:55 [IST]
English summary
Top 5 premium bikes under rs 2 lakh raider xtreme pulsar sp160 and fz s fi hybrid
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+