ಈಚೆಗೆ ಬಿಡುಗಡೆ.. 'Suzuki Access 125'ನ ಹೊಸ ಮಾಡೆಲ್‌ನ್ನು ಖರೀದಿಸಬೇಕೇ.. ಇಲ್ಲಿವೆ ಪ್ರಮುಖ 5 ಕಾರಣಗಳು
ಸುಜುಕಿ ಆಕ್ಸೆಸ್ 125 (Suzuki Access 125) ವಿಶ್ವಾಸಾರ್ಹ ಸ್ಕೂಟರ್ ಆಗಿದೆ. ಇದು ಹೆಚ್ಚು ಅತ್ಯಾಧುನಿಕವಾಗಿದ್ದು, ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ಅದರಲ್ಲೂ ಮಧ್ಯಮ ವರ್ಗದ ಗ್ರಾಹಕರು ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಶನಿವಾರ ಈ ಸ್ಕೂಟರ್‌ನ ನೂತನ ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ (Ride Connect TFT Edition) ಮಾಡೆಲ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ನಾವಿಲ್ಲಿ ಹೊಸ ಮಾಡೆಲ್‌ನ್ನು ಖರೀದಿದಾರರು ಏಕೆ ಕೊಳ್ಳಬೇಕು ಎಂಬುದರ ಕುರಿತಂತೆ ಪ್ರಮುಖ 5 ಕಾರಣಗಳನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ (Price): ಹೊಚ್ಚ ಹೊಸ ಸುಜುಕಿ ಆಕ್ಸೆಸ್ 125 ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ ಮಾಡೆಲ್ ಅತಿ ಕಡಿಮೆ ಬೆಲೆಗೆ ಮಾರಾಟಕ್ಕೆ ಬಂದಿದ್ದು, ಸಾಮಾನ್ಯ ವರ್ಗದ ಗ್ರಾಹಕರು ಸುಲಭವಾಗಿ ಕೊಳ್ಳಬಹುದು. ಇದು ರೂ.1.02 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ವಿನ್ಯಾಸ & ಬಣ್ಣಗಳು (Design & Colors): ನೂತನ ಸ್ಕೂಟರ್ ಆಕರ್ಷಕವಾಗಿರುವ ವಿನ್ಯಾಸವನ್ನು ಹೊಂದಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್ & ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ. ಮೆಟಾಲಿಕ್ ಮ್ಯಾಟ್ ಸ್ಟೆಲ್ಲಾರ್ ಬ್ಲೂ, ಪರ್ಲ್ ಗ್ರೇಸ್ ವೈಟ್, ಸಾಲಿಡ್ ಐಸ್ ಗ್ರೀನ್ & ಪರ್ಲ್ ಮ್ಯಾಟ್ ಆಕ್ವಾ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ವೈಶಿಷ್ಟ್ಯಗಳು (Features): ಹೊಸ ಸುಜುಕಿ ಆಕ್ಸೆಸ್ 125 ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ ಮಾಡೆಲ್ ಹಲವು ನವೀನ ವೈಶಿಷ್ಟ್ಯಗಳನ್ನು ಹೊಂದಿದೆ. ಬ್ಲೂಟೂತ್ ಕನೆಕ್ಟಿವಿಟಿಯೊಂದಿಗೆ 4.2-ಇಂಚು ಅಳತೆಯ ಟಿಎಫ್‌ಟಿ ಡಿಸ್ಪ್ಲೇಯನ್ನು ಒಳಗೊಂಡಿದೆ. ಇದು ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ವೆದರ್ ಅಪ್ಡೇಟ್ಸ್, ಮೊಬೈಲ್ ಚಾರ್ಜರ್ ಲೆವೆಲ್ ಇಂಡಿಕೇಟರ್ ಮತ್ತು ಫ್ಯುಯೆಲ್ ಲೆವೆಲ್ ಇಂಡಿಕೇಟರ್‌ನಂತಹ ಹಲವು ಅಂಶಗಳನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance): ಈ ಸ್ಕೂಟರ್ ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 125 ಸಿಸಿ ಸಿಂಗಲ್ - ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 8.3 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 45 ಕೆಎಂಪಿಎಲ್‌ವರೆಗೂ ಅಧಿಕ ಮೈಲೇಜ್ ನೀಡುತ್ತದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಸುರಕ್ಷತೆಯ ದೃಷ್ಟಿಯಿಂದ ಮುಂದೆ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂದೆ (ರೇರ್) ಸಿಂಗಲ್ ಶಾಕ್-ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಹಾಗೆಯೇ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ. 106 ಕೆಜಿ ತೂಕವಿದ್ದು, 5.6 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.
ಇನ್ನು, ಹೋಂಡಾ ಆಕ್ಟಿವಾ 125 ಹಾಗೂ ಟಿವಿಎಸ್ ಜುಪಿಟರ್ 125ಕ್ಕೆ ಬದಲಿ ಸ್ಕೂಟರ್‌ನ್ನು ಹುಡುಕುತ್ತಿರುವವರಿಗೆ ಈ ಸುಜುಕಿ ಆಕ್ಸೆಸ್ 125 ರೈಡ್ ಕನೆಕ್ಟ್ ಟಿಎಫ್‌ಟಿ ಎಡಿಷನ್ ಮಾಡೆಲ್ ಹೆಚ್ಚು ಸೂಕ್ತವಾಗಲಿದೆ. ಇದು ದಿನಬಳಕೆಗೆ ತುಂಬಾನೇ ಸೂಕ್ತವಾಗಿದೆ. ಮುಂಬರುವ ದಿನಗಳಲ್ಲಿ ಮಹಿಳಾ ಹಾಗೂ ಪುರುಷ ಗ್ರಾಹಕರ ಆಯ್ಕೆಯ ದ್ವಿಚಕ್ರ ವಾಹನವಾಗಿ ಹೊರಹೊಮ್ಮುವುದರಲ್ಲಿ ಎರಡು ಮಾತಿಲ್ಲ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








