ಬಡವರ ಬಂಡಿ: 2025ರ ಹೊಸ 'ಹೀರೋ ಸ್ಪ್ಲೆಂಡರ್ ಪ್ಲಸ್' ಬೈಕ್‌ನ್ನು ಖರೀದಿಸಬೇಕೇ.. 5 ಪ್ರಮುಖ ಕಾರಣಗಳಿವು!

ಹೀರೋ ಸ್ಪ್ಲೆಂಡರ್ (Hero Splendor) ಜನಪ್ರಿಯ ಮೋಟಾರ್‌ಸೈಕಲ್‌ ಆಗಿದ್ದು, ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ಗುರುವಾರ 2025ರ ಹೊಸ 'ಸ್ಪ್ಲೆಂಡರ್ ಪ್ಲಸ್' ಬೈಕ್‌ನ್ನು ಆದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಈ ಮೋಟಾರ್‌ಸೈಕಲ್‌ ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದೆ. ನೀವು ನೂತನ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್‌ನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ನಾವಿಲ್ಲಿ ಈ ಮೋಟಾರ್‌ಸೈಕಲ್‌ನ್ನು ಏಕೆ ತೆಗೆದುಕೊಳ್ಳಬೇಕು ಎಂಬುದರ ಕುರಿತಂತೆ 5 ಪ್ರಮುಖ ಕಾರಣಗಳನ್ನು ತಿಳಿಸಿಕೊಟ್ಟದ್ದೇವೆ.

ಬೆಲೆ & ರೂಪಾಂತರಗಳು (Price & Variants): ನೂತನ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್‌, ಅತಿ ಕಡಿಮೆ ಬೆಲೆಗೆ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.79,096 ರಿಂದ ರೂ.85,001 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. ಇದು ಸ್ಟ್ಯಾಂಡರ್ಡ್ ಆಗಿ ಸ್ಪ್ಲೆಂಡರ್ ಪ್ಲಸ್ ರೂಪಾಂತರದೊಂದಿಗೆ (ವೇರಿಯೆಂಟ್) ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ & ಸ್ಪ್ಲೆಂಡರ್ ಪ್ಲಸ್ ಎಕ್ಸ್‌ಟೆಕ್ 2.0 ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Top 5 Reasons To Buy 2025 New Hero Splendor Plus Bike Details

ವಿನ್ಯಾಸ & ಬಣ್ಣಗಳು (Design & Colors): ಹೊಸ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ಸೈಕಲ್‌ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್ ಮತ್ತು ಎಲ್ಇಡಿ ಡಿಆರ್‌ಎಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಬ್ಲ್ಯೂ ಬ್ಲ್ಯಾಕ್, ಬ್ಲ್ಯಾಕ್ ರೆಡ್ ಪರ್ಪಲ್, ಸ್ಪೋರ್ಟ್ಸ್ ರೆಡ್ ಬ್ಲ್ಯಾಕ್ ಮತ್ತು ಫೋರ್ಸ್ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ಕಾರ್ಯಕ್ಷಮತೆ (Performance): ಈ ಬೈಕ್ ಶಕ್ತಿಯುತವಾದ 97.2 ಸಿಸಿ ಒಬಿಡಿ 2ಬಿ ಏರ್-ಕೂಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 7.91 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.05 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Top 5 Reasons To Buy 2025 New Hero Splendor Plus Bike Details

ವೈಶಿಷ್ಟ್ಯಗಳು (Features): ನೂತನ ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ಸೈಕಲ್‌ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಸ್ಮಾರ್ಟ್‌ಫೋನ್ ಅಪ್ಲಿಕೇಶನ್ ಸಪೋರ್ಟ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಸೈಡ್-ಸ್ಟ್ಯಾಂಡ್ ಎಂಜಿನ್ ಕಿಲ್ ಫಂಕ್ಷನ್ ಹಾಗೂ ಐಡಲ್ ಸ್ಟಾಪ್-ಸ್ಟಾರ್ಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಈ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ ಪ್ರಿಲೋಡ್ ಅಡ್ಜಸ್ಟಬಲ್ ಶಾಕ್ ಅಬ್ಸಾರ್ಬರ್ಸ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Top 5 Reasons To Buy 2025 New Hero Splendor Plus Bike Details

ಒಟ್ಟಾರೆಯಾಗಿ ನೂತನ 2025ರ ಹೊಸ 'ಹೀರೋ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ಸೈಕಲ್‌ ಬಿಡುಗಡೆಯಾಗಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಮುಂಬರುವ ದಿನಗಳಲ್ಲಿ ಈ ಬೈಕ್‌ಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, April 13, 2025, 18:09 [IST]
English summary
Top 5 reasons to buy 2025 new hero splendor plus bike details
Read more on hero motocorp india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+