Honda Activa e: ಕಡಿಮೆ ಬೆಲೆ.. ಹೋಂಡಾ ಆಕ್ಟಿವಾ ಇ-ಸ್ಕೂಟರ್ ಖರೀದಿಸಲು ಪ್ರಮುಖ 5 ಕಾರಣಗಳಿವು!
ಹೋಂಡಾ ಆಕ್ಟಿವಾ ಇ (Honda Activa e) ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ಇದನ್ನು ನಗರ ಪದೇಶದಲ್ಲಿ ಸುಲಭವಾಗಿ ಬಳಕೆ ಮಾಡುವಂತೆ ಸಿದ್ಧಪಡಿಲಾಗಿದ್ದು, ಬೆಜೆಟ್ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಅದಕ್ಕೆ ತಕ್ಕಂತೆ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನೀವು ದಿನನಿತ್ಯದ ಉಪಯೋಗಕ್ಕಾಗಿ ಹೊಚ್ಚ ಹೊಸ 'ಆಕ್ಟಿವಾ' ಇ-ಸ್ಕೂಟರ್‌ನ್ನು ತೆಗೆದುಕೊಳ್ಳಲು ಪ್ಲ್ಯಾನ್ ಮಾಡಿದ್ದೀರಾ.. ಈ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಏಕೆ ಖರೀದಿ ಮಾಡಬೇಕು ಎಂಬುದರ ಕುರಿತಾದ ಪ್ರಮುಖ 5 ಕಾರಣಗಳು ಇಲ್ಲಿವೆ.
ಕೈಗೆಟುಕುವ ಬೆಲೆಯಲ್ಲಿ ಲಭ್ಯ: ಬೇರೆ ಕಂಪನಿ ಎಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಹೋಲಿಕೆ ಮಾಡಿದರೆ, ನೂತನ 'ಹೋಂಡಾ ಆಕ್ಟಿವಾ ಇ' ಕಡಿಮೆ ದರದಲ್ಲೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರ ಸ್ಟ್ಯಾಂಡರ್ಡ್ ಮಾಡೆಲ್ ರೂ.1.17 ಲಕ್ಷ ಮತ್ತು ರೋಡ್‌ಸಿಂಕ್ ಮಾಡೆಲ್ ರೂ.1.52 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಮನೆಯಲ್ಲಿ ಚಾರ್ಜಿಂಗ್ ಮಾಡುವ ಕಿರಿಕಿರಿ ಇಲ್ಲ: ವಿಶೇಷವಾಗಿ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಚಾರ್ಜಿಂಗ್ ಸ್ಟೇಷನ್‌ನಲ್ಲಿ ಖಾಲಿಯಾದ ಬ್ಯಾಟರಿ ಇಟ್ಟು, ಭರ್ತಿಯಾಗಿರುವ ಬ್ಯಾಟರಿ ಪ್ಯಾಕ್‌ನ್ನು ಸ್ಕೂಟರ್‌ಗೆ ಅಳವಡಿಕೆ ಮಾಡಬಹುದು. ಇದರಿಂದ ಮನೆಯಲ್ಲಿ ಚಾರ್ಜಿಂಗ್ ಮಾಡುವ ಪ್ರಮೇಯವೇ ಬರುವುದಿಲ್ಲ. ಈ ಹಿನ್ನೆಲೆ, ಆಕ್ಟಿವಾ ಇ ಮಾಡೆಲ್‌ನ್ನು ಬೆಂಗಳೂರು, ನವದೆಹಲಿ ಹಾಗೂ ಮುಂಬೈನಲ್ಲಿ ಮಾತ್ರ ಮಾರಾಟ ಮಾಡಲಾಗುತ್ತದೆ.
ನೋಡುಗರ ಕಣ್ಣುಕುಕ್ಕುವ ವಿನ್ಯಾಸ: ಈ ಸ್ಕೂಟರ್ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಬಹುಮುಖ್ಯವಾಗಿ ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್-ಲ್ಯಾಂಪ್‌ಗಳು, ಸಿಂಗಲ್-ಪೀಸ್ ಸೀಟ್ & ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ಪರ್ಲ್ ಶಾಲೋ ಬ್ಲೂ, ಪರ್ಲ್ ಮಿಸ್ಟಿ ವೈಟ್, ಪರ್ಲ್ ಸೆರಿನಿಟಿ ಬ್ಲೂ ಮತ್ತು ಮ್ಯಾಟ್ ಫಾಗಿ ಸಿಲ್ವರ್ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಸಾಟಿಯಿಲ್ಲದ ಕಾರ್ಯಕ್ಷಮತೆ & ಭರ್ಜರಿ ವೈಶಿಷ್ಟ್ಯಗಳು: ನೂತನ ಹೋಂಡಾ ಆಕ್ಟಿವಾ ಇ, 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ 2 ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 102 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 7.0-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಇಕಾನ್, ಸ್ಟ್ಯಾಂಡರ್ಡ್ ಮತ್ತು ಸ್ಪೋರ್ಟ್ ಎಂಬ ರೈಡಿಂಗ್ ಮೋಡ್‌ಗಳನ್ನು ಪಡೆದಿದೆ.
ಸುರಕ್ಷತೆಗೂ ಬೆಸ್ಟ್: ಹೊಸ ಆಕ್ಟಿವಾ ಇ ಸವಾರರಿಗೆ ಗರಿಷ್ಠ ರಕ್ಷಣೆ ಒದಗಿಸಬಲ್ಲದು. ಇದಕ್ಕಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಡುಯಲ್ ಸ್ಪ್ರಿಂಗ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಜೊತೆಗೆ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಒಟ್ಟಾರೆಯಾಗಿ, ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮಹಾನಗರಗಳ ನಾಗರಿಕರು ಸುಲಭವಾಗಿ ಬಳಕೆ ಮಾಡಬಹುದು. ಕಚೇರಿಗೆ ಹೋಗುವುದು ಸೇರಿದಂತೆ ಇನ್ನಿತರೇ ಕೆಲಸಗಳಿಗೆ ಹೆಚ್ಚು ಉಪಯುಕ್ತವಾಗಲಿದೆ. ಇದು ಅತ್ಯಾಕರ್ಷಕ ವಿನ್ಯಾಸ ಹಾಗೂ ನವೀನ ಶೈಲಿಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುವ ನಿರೀಕ್ಷೆಯಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications