ಕಡಿಮೆ ಬೆಲೆ, 70 Km ಮೈಲೇಜ್.. ಬಡವನು ಕೊಳ್ಳಬಹುದು: 'TVS Sport' ಬೈಕ್ ಖರೀದಿಸಲು ಪ್ರಮುಖ 5 ಕಾರಣಗಳಿವು!

ಟಿವಿಎಸ್ ಸ್ಪೋರ್ಟ್ (TVS Sport) ಜನಪ್ರಿಯ ಮೋಟಾರ್‌ಸೈಕಲ್ ಆಗಿದೆ. ಇದನ್ನು ದಿನಬಳಕೆಗೆ ಸುಲಭವಾಗಿ ಬಳಕೆ ಮಾಡಲು ಸಾಧ್ಯವಾಗುವಂತೆ ತಯಾರಿಸಲಾಗಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಸಿಗುವುದರಿಂದ ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಈ ಬೈಕ್‌ನ್ನು ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲೂ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ 'ಟಿವಿಎಸ್ ಸ್ಪೋರ್ಟ್' ಮೋಟಾರ್‌ಸೈಕಲ್‌ನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಪ್ರಮುಖ 5 ಕಾರಣಗಳು ಇಲ್ಲಿವೆ.

ತುಂಬಾ ಸಿಂಪಲ್ ವಿನ್ಯಾಸ: ಈ ಬೈಕ್ ನೋಡುಗರನ್ನು ಸೆಳೆಯುವಂತಿದೆ. ಅದಕ್ಕೆ ತಕ್ಕಂತೆ ಸರಳವಾದ ವಿನ್ಯಾಸವನ್ನು ಹೊಂದಿದ್ದು, ಹಳ್ಳಿ ಹಾಗೂ ನಗರಗಳಲ್ಲಿ ಬಳಕೆ ಮಾಡುವಂತೆ ಅಚ್ಚುಕಟ್ಟಾಗಿ ಸಿದ್ದಪಡಿಸಲಾಗಿದೆ. ಇದು ಬಲ್ಬ್ - ಟೈಪ್ ಹೆಡ್‌ಲೈಟ್‌ನ್ನು ಹೊಂದಿದೆ. ಇದರೊಟ್ಟಿಗೆ ಎಲ್‌ಇಡಿ ಡಿಆರ್‌ಎಲ್‌ಗಳನ್ನು ಒಳಗೊಂಡಿದೆ.

Top 5 Reasons To Buy TVS Sport Bike Details

ಸಾಟಿಯಿಲ್ಲದ ಕಾರ್ಯಕ್ಷಮತೆ: ನೂತನ ಟಿವಿಎಸ್ ಸ್ಪೋರ್ಟ್ ಮೋಟಾರ್‌ಸೈಕಲ್‌ 109. 7 ಸಿಸಿ ಸಿಂಗಲ್ ಸಿಲಿಂಡರ್, ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 8.19 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಸವಾರರು ದೂರದ ಊರುಗಳಿಗೆ ಆರಾಮದಾಯಕವಾಗಿ ಪ್ರಯಾಣಿಸಲು ಸಾಧ್ಯವಾಗುವಂತೆ ಈ ಬೈಕ್ 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಹೊಸ ಟಿವಿಎಸ್ ಸ್ಪೋರ್ಟ್ ಮೋಟಾರ್‌ಸೈಕಲ್‌ ಬರೋಬ್ಬರಿ 112 ಕೆಜಿ ತೂಕವಿದ್ದು, 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಹಾಗೆಯೇ ಗ್ರೌಂಡ್ ಕ್ಲಿಯರೆನ್ಸ್ 175 ಎಂಎಂ ಇದೆ.

ಆಕರ್ಷಕ ಬಣ್ಣಗಳು & ವೈಶಿಷ್ಟ್ಯಗಳು: ನೂತನ ಟಿವಿಎಸ್ ಸ್ಪೋರ್ಟ್ ಬೈಕ್ ಬ್ಲ್ಯಾಕ್ - ಬ್ಲೂ, ಬ್ಲ್ಯಾಕ್ - ರೆಡ್ ಹಾಗೂ ವೈಟ್ - ಪರ್ಪಲ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ. ಟೂ-ಪಾಡ್ ಅನಲಾಗ್ ಇನ್ಸ್ಟ್ರುಮೆಂಟ್ ಪ್ಯಾನೆಲ್‌ನಂತಹ ವೈಶಿಷ್ಟ್ಯವನ್ನು ಹೊಂದಿದೆ. ಇದು ಸ್ಪೀಡ್, ಫ್ಯುಯೆಲ್ ಗೇಜ್, ಲೊ-ಫ್ಯುಯೆಲ್ ಇಂಡಿಕೇಟರ್ ಸೇರಿದಂತೆ ವಿವಿಧ ಮಾಹಿತಿಯನ್ನು ಒದಗಿಸುತ್ತದೆ.

ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳು: ಈ ಬೈಕ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಇದು ಮಾತ್ರವಲ್ಲದೆ, ಡ್ರಮ್ ಬ್ರೆಕ್‌ಗಳನ್ನು ಪಡೆದಿದೆ. 17-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ.

ಅತಿ ಕಡಿಮೆ ಬೆಲೆ & ಸಾಲು - ಸಾಲು ಪ್ರತಿಸ್ಪರ್ಧಿಗಳು: ಹೊಸ ಟಿವಿಎಸ್ ಸ್ಪೋರ್ಟ್ ಬೈಕ್ ಅಗ್ಗದ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಗ್ರಾಹಕರು ಕೂಡ ಸುಲಭವಾಗಿ ಖರೀದಿ ಮಾಡಬಹುದು. ಇದು ರೂ.59,881 ರಿಂದ ರೂ.71,785 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಮೋಟಾರ್‌ಸೈಕಲ್‌ಗೆ ಹೀರೋ ಹೆಚ್ಎಫ್ ಡಿಲಕ್ಸ್, ಬಜಾಜ್ ಸಿಟಿ 110ಎಕ್ಸ್, ಹೋಂಡಾ ಶೈನ್ 100, ಬಜಾಜ್ ಪ್ಲಾಟಿನಾ 110 ಹಾಗೂ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Sunday, April 6, 2025, 10:35 [IST]
English summary
Top 5 reasons to buy tvs sport bike details
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+