ಅಣ್ತಮ್ಮಸ್: ಇವೇ 5 ಸ್ಟೈಲಿಶ್ ಬೈಕ್‌ಗಳು.. 1.ಲೀ ಪೆಟ್ರೋಲ್ ಹಾಕಿಸಿದ್ರೆ 47 ಕಿ.ಮೀವರೆಗೆ ಮೈಲೇಜ್, ಬೆಲೆ ಇಷ್ಟೇನಾ?
ದುಡಿಯುವ ವಯಸ್ಸಿಗೆ ಬಂದ ಗಂಡು ಹೈಕಳಿಗೆ ಸ್ಟೈಲಿಶ್ ಬೈಕ್‌ಗಳ ಮೇಲೆ ಸ್ವಲ್ಪ ಮಟ್ಟಿಗೆ ಹೆಚ್ಚಿನ ಕ್ರೇಜ್ ಇರುತ್ತದೆ. ಆದರೆ, ಯಾವ ಮೋಟಾರ್‌ಸೈಕಲ್ ತೆಗೆದುಕೊಳ್ಳಬೇಕೆಂದು ಥಿಂಕ್ ಮಾಡುತ್ತಿರುತ್ತಾರೆ. ಅಂತಹವರಿಗೆ ರಾಯಲ್ ಎನ್‌ಫೀಲ್ಡ್ ಹಂಟರ್ 350, ಯಮಹಾ ಆರ್15 ವಿ4, ಟಿವಿಎಸ್ ಅಪಾಚೆ ಆರ್‌ಟಿಆರ್ 160, ಹಾರ್ಲೆ-ಡೇವಿಡ್ಸನ್ ಎಕ್ಸ್440 ಹಾಗೂ ಕೆಟಿಎಂ 200 ಡ್ಯೂಕ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ರಾಯಲ್ ಎನ್‌ಫೀಲ್ಡ್ ಹಂಟರ್ 350 (Royal Enfield Hunter 350):
ಇದು ಜನಪ್ರಿಯ ಬೈಕ್ ಆಗಿದ್ದು, ಯುವ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.1.37 ಲಕ್ಷದಿಂದ ರೂ.1.66 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಫ್ಯಾಕ್ಟರಿ ಬ್ಲ್ಯಾಕ್, ರಿಯೋ ವೈಟ್, ಡ್ಯಾಪರ್ ಗ್ರೇ, ಟೋಕಿಯೋ ಬ್ಲ್ಯಾಕ್, ಲಂಡನ್ ರೆಡ್ ಮತ್ತು ರೆಬೆಲ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 160 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,370 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಹಂಟರ್ 350' ಮೋಟಾರ್‌ಸೈಕಲ್, 349-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 36 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಟೈಪ್-ಸಿ ಯುಎಸ್‌ಬಿ ಫಾಸ್ಟ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಯಮಹಾ ಆರ್15 ವಿ4 (Yamaha R15 V4):
ಈ ಬೈಕ್‌ನ್ನು ಖರೀದಿದಾರರು ಮೆಚ್ಚಿಕೊಂಡಿದ್ದಾರೆ. ರೂ.1 74 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ರೆಡ್, ಮೆಟಾಲಿಕ್ ಬ್ಲ್ಯಾಕ್, ಡಾರ್ಕ್ ನೈಟ್, ಇಂಟೆನ್ಸಿಟಿ ವೈಟ್, ಮ್ಯಾಟ್ ಪರ್ಲ್ ವೈಟ್ ಹಾಗೂ ರೇಸಿಂಗ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,325 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ 'ಯಮಹಾ ಆರ್15 ವಿ4' ಮೋಟಾರ್‌ಸೈಕಲ್, 155-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 45 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಟಿವಿಎಸ್ ಅಪಾಚೆ ಆರ್‌ಟಿಆರ್ 160 (TVS Apache RTR 160):
ಇದು ಪ್ರಮುಖ ಬೈಕ್ ಆಗಿದೆ. ರೂ.1.02 ಲಕ್ಷದಿಂದ ರೂ.1.24 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 159.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 47 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸ್ಮಾರ್ಟ್‌ಕ್ಸನೆಕ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಹಾರ್ಲೆ-ಡೇವಿಡ್ಸನ್ ಎಕ್ಸ್440 (Harley Davidson X440):
ಈ ಮೋಟಾರ್‌ಸೈಕಲ್ ರೂ.2.79 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 440-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 35 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಕೆಟಿಎಂ 200 ಡ್ಯೂಕ್ (KTM 200 Duke):
ಇದೊಂದು ಜಗಮೆಚ್ಚಿದ ಬೈಕ್ ಎಂದೇ ಹೆಸರುವಾಸಿಯಾಗಿದೆ. 1.91 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 199.5-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 35 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5-ಇಂಚಿನ ಕಲರ್ ಟಿಎಫ್‌ಟಿ ಡಿಸ್‌ಪ್ಲೇ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








