ಬಡವರು ಮನೆಗೆ ತರಬಹುದು: ಸಪ್ತ ಮೈಲೇಜ್ ಬೈಕ್‌ಗಳಿವು, ಬೆಲೆಯೂ ಅಗ್ಗ.. ರೂ.5 9,000ದಿಂದ ಶುರು!

ಹಳ್ಳಿಯೇ ಇರಲಿ.. ನಗರವೇ ಆಗಿರಲಿ ದಿನಬಳಕೆಗಾಗಿ ಮೋಟಾರ್‌ಸೈಕಲ್‌ಗಳು ತೀರಾ ಅನಿವಾರ್ಯವಾಗಿವೆ. ಬಹುತೇಕರು ಬಜೆಟ್ ಬೆಲೆಯಲ್ಲಿ ಗರಿಷ್ಠ ಮೈಲೇಜ್ ನೀಡುವ ಬೈಕ್ ಯಾವುದೆಂದು ಹುಡುಕಾಟ ನಡೆಸುತ್ತಿರುತ್ತಾರೆ ಅಂತಹವರಿಗೆ ಟಿವಿಎಸ್ ರೇಡಿಯನ್, ಹೀರೋ ಸ್ಪ್ಲೆಂಡರ್ ಪ್ಲಸ್, ಬಜಾಜ್ ಪ್ಲಾಟಿನಾ 110, ಟಿವಿಎಸ್ ಸ್ಪೋರ್ಟ್, ಹೋಂಡಾ ಎಸ್‌ಪಿ 125, ಹೀರೋ ಹೆಚ್ಎಫ್ ಡಿಲಕ್ಸ್ ಹಾಗೂ ಹೋಂಡಾ ಶೈನ್ 100 ಬೈಕ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಟಿವಿಎಸ್ ರೇಡಿಯನ್ (TVS Radeon):

ಇದು ಜನಪ್ರಿಯ ಮೋಟಾರ್‌ಸೈಕಲ್‌ ಆಗಿದ್ದು, ಅತ್ಯಂತ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಈ ಬೈಕ್ ರೂ.59,000 ರಿಂದ ರೂ.83,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 73 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡುಯಲ್ ಪಾಡ್ ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Top 7 Mileage Bikes India Radeon Splendor Platina Sport SP 125 HF 100 Shine 100

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus):

ಈ ಬೈಕ್‌ನ್ನು ಹಳ್ಳಿ ಹಾಗೂ ನಗರ ಪ್ರದೇಶಗಳಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ಅದಕ್ಕೆ ತಕ್ಕಂತೆ ಅಗ್ಗದ ದರದಲ್ಲೂ ಲಭ್ಯವಿದ್ದು, ರೂ.77,000 ರಿಂದ ರೂ.79,000 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಬಜಾಜ್ ಪ್ಲಾಟಿನಾ 110 (Bajaj Platina 110):

ಇದನ್ನು ಶ್ರೀಸಾಮನ್ಯರ ಬಂಡಿ ಎಂದು ಕರೆದರೂ ತಪ್ಪಾಗುವುದಿಲ್ಲ. ಈ ಮೋಟಾರ್‌ಸೈಕಲ್‌ 71,000 ರಿಂದ ರೂ.74,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 115 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಪಡೆದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Top 7 Mileage Bikes India Radeon Splendor Platina Sport SP 125 HF 100 Shine 100

ಟಿವಿಎಸ್ ಸ್ಪೋರ್ಟ್ (TVS Sport):

ಈ ಮೋಟಾರ್‌ಸೈಕಲ್‌ ದಿನಬಳಕೆಗೆ ಹೆಚ್ಚು ಸೂಕ್ತವಾಗಲಿದ್ದು, ರೂ.69,000 ರಿಂದ 72,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 109 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.ಅನಲಾಗ್ ಸ್ಪೀಡೋಮೀಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಎಸ್‌ಪಿ 125 (Honda SP 125):

ಇದು ಪ್ರಖ್ಯಾತ ಬೈಕ್ ಆಗಿದ್ದು, ರೂ.92,000 ರಿಂದ ರೂ.1 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 123 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 60 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸೈಲೆಂಟ್ ಸ್ಟಾರ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Top 7 Mileage Bikes India Radeon Splendor Platina Sport SP 125 HF 100 Shine 100

ಹೀರೋ ಎಚ್ಎಫ್ 100 (Hero HF 100):

ಈ ಬೈಕ್‌ನ್ನು ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಇದು ರೂ.60,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97 ಸಿಸಿ ಪೆಟ್ರೋಲ್ ಎಂಜಿನ್‌ ಹೊಂದಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಎಲೆಕ್ಟ್ರಿಕ್ ಸ್ಟಾರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

Top 7 Mileage Bikes India Radeon Splendor Platina Sport SP 125 HF 100 Shine 100

ಹೋಂಡಾ ಶೈನ್ 100 (Honda Shine 100):

ಇದನ್ನು ವಿಶ್ವಾಸಾರ್ಹ ಬೈಕ್ ಎಂದು ಪರಿಗಣಿಸಲಾಗುತ್ತದೆ. ಈ ಮೋಟಾರ್‌ಸೈಕಲ್‌ ರೂ.68,000 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 98 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 65 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟ್ವಿನ್ ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಸಿಂಗಲ್ ಪೀಸ್ ಸೀಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Article Published On: Sunday, June 15, 2025, 8:30 [IST]
English summary
Top 7 mileage bikes india radeon splendor platina sport sp 125 hf 100 shine 100
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+