ನಮ್ಮೂರಿಗೆ ಜೈ.. ನಿಮ್ಮೂರಿಗೆ ಸೈ.. 47 ರಿಂದ 56 ಕಿ.ಮೀವರೆಗೆ ಮೈಲೇಜ್, 70 ಸಾವಿರದಿಂದ ಶುರು.. 5 ಬೆಸ್ಟ್ 110 ಸಿಸಿ ಸ್ಕೂಟರ್‌ಗಳು
ಪ್ರತಿನಿತ್ಯ ಆಫೀಸ್‌ಗೆ ಹೋಗುವುದು ಸೇರಿದಂತೆ ದಿನಬಳಕೆಗೆ ದ್ವಿಚಕ್ರ ವಾಹನಗಳು (Two Wheelers) ತೀರಾ ಅಗತ್ಯವಾಗಿವೆ. ಅದರಲ್ಲೂ ಸ್ಕೂಟರ್‌ಗಳನ್ನು ಮಹಿಳೆಯರು ಹಾಗೂ ಪುರುಷರು ಸುಲಭವಾಗಿ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಟಿವಿಎಸ್ ಜೆಸ್ಟ್ 110, ಹೋಂಡಾ ಆಕ್ಟಿವಾ, ಹೀರೋ ಪ್ಲೆಷರ್ ಪ್ಲಸ್, ಟಿವಿಎಸ್ ಜುಪಿಟರ್ ಹಾಗೂ ಹೀರೋ ಜೂಮ್ 110ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಟಿವಿಎಸ್ ಜೆಸ್ಟ್ 110 (TVS Zest 110):
ಇದು ಜನಪ್ರಿಯ ಸ್ಕೂಟರ್ ಆಗಿದೆ. ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಖರೀದಿಬಹುದು. ರೂ.70,600 ರಿಂದ ರೂ.75,500 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಬೋಲ್ಡ್ ಬ್ಲ್ಯಾಕ್, ಗ್ರ್ಯಾಫೈಟ್ ಗ್ರೇ, ಮ್ಯಾಟ್ ಬ್ಲ್ಯಾಕ್, ಮ್ಯಾಟ್ ಬ್ಲೂ, ಪರ್ಪಲ್, ಮ್ಯಾಟ್ ರೆಡ್ ಮತ್ತು ಪರ್ಲ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 150 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1,250 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಟಿವಿಎಸ್ ಜೆಸ್ಟ್ 110' ಸ್ಕೂಟರ್ ಶಕ್ತಿಶಾಲಿಯಾದ 109.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 50 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೋಂಡಾ ಆಕ್ಟಿವಾ 110 (Honda Activa 110):
ಈ ಸ್ಕೂಟರ್‌ನ್ನು ಖರೀದಿದಾರರು ಮೆಚ್ಚಿಕೊಂಡಿದ್ದಾರೆ. ರೂ.75,182 ರಿಂದ ರೂ.88,507 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಪ್ರೆಷಿಯಸ್ ವೈಟ್, ಡೀಸೆಂಟ್ ಬ್ಲೂ ಮೆಟಾಲಿಕ್, ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್ ಹಾಗೂ ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 162 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,260 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ಆಕ್ಟಿವಾ 110' ಬಲಿಷ್ಠವಾದ 109.51 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 47 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 4.2 ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್, ಹೋಂಡಾ ರೋಡ್‌ಸಿಂಕ್ ಫೋನ್ ಅಪ್ಲಿಕೇಶನ್ ಹಾಗೂ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೀರೋ ಡೆಸ್ಟಿನಿ 110 (Hero Destini 110):
ಇದೊಂದು ಪ್ರಖ್ಯಾತ ಸ್ಕೂಟರ್ ಆಗಿದೆ. ರೂ.72,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 110.9 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 56 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬೂಟ್ ಲ್ಯಾಂಪ್ ಹಾಗೂ ಫ್ರಂಟ್ ಗ್ಲೋವ್ ಬಾಕ್ಸ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಟಿವಿಎಸ್ ಜುಪಿಟರ್ 110 (TVS Jupiter 110):
ಈ ಸ್ಕೂಟರ್ ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.76,150 ರಿಂದ ರೂ.88,350 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 113 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 48 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಇಂಟಲಿಜೆಂಟ್ ಸ್ಟಾರ್ಟ್/ಸ್ಟಾಪ್ ಮತ್ತು ಯುಎಸ್‌ಬಿ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೀರೋ ಜೂಮ್ 110 (Hero Xoom 110):
ಇದು ಪ್ರಮುಖ ಸ್ಕೂಟರ್ ಆಗಿದೆ. ರೂ.72,351 ರಿಂದ ರೂ.77,836 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 10.9 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 53 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ತನ್ನದಾಗಿಸಿಕೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








