TVS: ಪ್ರಖ್ಯಾತ 'ಟಿವಿಎಸ್ ಅಪಾಚೆ' ಬೈಕ್‌ಗಾಗಿ ಕ್ಯೂ ನಿಂತ ಗ್ರಾಹಕರು, ಬಿಸಿ 'ಜಾಮೂನ್'ನಂತೆ ಸೇಲ್ಸ್!

ಟಿವಿಎಸ್ ಅಪಾಚೆ (TVS Apache) ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಆಗಿ ಹೊರಹೊಮ್ಮಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಈ ಏಪ್ರಿಲ್ ತಿಂಗಳಲ್ಲೂ ಇದೇ 'ಅಪಾಚೆ' ಬೈಕ್ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಅದಕ್ಕೆ ಸಾಕ್ಷಿ ಎಂಬಂತೆ ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾದ ಪ್ರಮುಖ 10 ಮೋಟಾರ್‌ಸೈಕಲ್‌ಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮೊದಲ ಸ್ಥಾನದಲ್ಲಿ ಹೀರೋ ಸ್ಪ್ಲೆಂಡರ್, ಎರಡನೇ ಸ್ಥಾನದಲ್ಲಿ ಹೋಂಡಾ ಶೈನ್ ಹಾಗೂ ಮೂರನೇ ಸ್ಥಾನದಲ್ಲಿ ಪಲ್ಸರ್ ಬೈಕ್ ಇದೆ.

ಹೋದ ತಿಂಗಳು (ಏಪ್ರಿಲ್‌ - 2025) ಟಿವಿಎಸ್ ಮೋಟಾರ್, ಬರೋಬ್ಬರಿ 45,633 ಯುನಿಟ್ 'ಅಪಾಚೆ' ಮೋಟಾರ್‌ಸೈಕಲ್‌ಗಳನ್ನು ಮಾರಾಟ ಮಾಡಿದೆ. 2024ರ ಏಪ್ರಿಲ್‌ನಲ್ಲಿ 45,520 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಅದಕ್ಕೆ ಹೋಲಿಸಿದರೆ ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ (YoY) ಶೇಕಡ +0.25% ಹೆಚ್ಚಳಗೊಂಡಿದೆ.

TVS Apache Bike April 2025 Sales Details

ಈ ಅಂಕಿಸಂಖ್ಯೆಯಲ್ಲಿ ಗಮನಿಸದಾಗ 'ಟಿವಿಎಸ್ ಅಪಾಚೆ' ಬೈಕ್ ಸ್ಥಿರ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಇದು ಅತ್ಯಾಧುನಿಕ ವಿನ್ಯಾಸ ಹಾಗೂ ಐಷಾರಾಮಿ ವೈಶಿಷ್ಟ್ಯಗಳನ್ನು ಹೊಂದಿರುವ ಹಿನ್ನೆಲೆ, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮಾರಾಟಗೊಳ್ಳಲು ಸಾಧ್ಯವಾಗಿದೆ. ಇದೇ 'ಮೇ' ತಿಂಗಳಲ್ಲೂ 'ಟಿವಿಎಸ್ ಅಪಾಚೆ' ಭಾರೀ ಸಂಖ್ಯೆಯಲ್ಲಿ ಮಾರಾಟವಾಗಿರುವ ನಿರೀಕ್ಷೆಯಿದೆ.

ಟಿವಿಎಸ್ ಅಪಾಚೆ ಬೈಕ್ ಹಲವು ವಿಧದಲ್ಲಿ ಖರೀದಿಗೆ ಲಭ್ಯ..

ಟಿವಿಎಸ್ ಅಪಾಚೆ ಆರ್‌ಟಿಆರ್ 160 (TVS Apache RTR 160): ಇದು ರೂಪಾಂತರಗಳನ್ನು (ವೇರಿಯೆಂಟ್) ಅವಲಂಭಿಸಿ, ರೂ.1.11 ಲಕ್ಷದಿಂದ ರೂ.1.31 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 159.7 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಪುಲ್ ಡಿಜಿಟಲ್ ಕನ್ಸೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

TVS Apache Bike April 2025 Sales Details

ಟಿವಿಎಸ್ ಅಪಾಚೆ ಆರ್‌ಟಿಆರ್ 200 4ವಿ (TVS Apache RTR 200 4V): ಈ ಮೋಟಾರ್‌ಸೈಕಲ್ ರೂ.1.46 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 197.75 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 37 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಪ್ಯಾನಲ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟಿವಿಎಸ್ ಅಪಾಚೆ ಆರ್‌ಆರ್ 310 (TVS Apache RR 310): ಇದು ರೂ.2.78 ಲಕ್ಷದಿಂದ ರೂ.3 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 312.2 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 34 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡಬಲ್ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.

ಟಿವಿಎಸ್ ಅಪಾಚೆ ಆರ್‌ಟಿಆರ್ 310 (TVS Apache RTR 310): ಈ ಬೈಕ್ ರೂ.2.50 ಲಕ್ಷದಿಂದ ರೂ.2.72 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ಸಿಗುತ್ತದೆ. 312.12 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 35 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದು ಟಿಎಫ್‌ಟಿ ಕನ್ಸೋಲ್ ಮತ್ತು ಸೈಡ್-ಸ್ಟ್ಯಾಂಡ್ ಇಂಡಿಕೇಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, May 30, 2025, 8:30 [IST]
English summary
Tvs apache bike april 2025 sales details
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+