TVS: ಶ್ರೀ ಗುರುವಾಯೂರಪ್ಪನಿಗೆ ದುಬಾರಿ ಕಾಣಿಕೆ: TVS: ಶ್ರೀ ಗುರುವಾಯೂರಪ್ಪನಿಗೆ ದುಬಾರಿ ಕಾಣಿಕೆ: 6 ಲಕ್ಷ ಮೌಲ್ಯದ ಸ್ಕೂಟರ್‌ಗಳು
ಗುರುವಾಯೂರು ಶ್ರೀ ಕೃಷ್ಣ ದೇವಾಲಯವು ಅತ್ಯಂತ ಪ್ರಮುಖ ಮತ್ತು ಪವಿತ್ರ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ. ಈ ದೇವಾಲಯವು ಕೇರಳದ ತ್ರಿಶೂರ್ ಜಿಲ್ಲೆಯ ಗುರುವಾಯೂರು ಎಂಬ ಸಣ್ಣ ಪಟ್ಟಣದಲ್ಲಿದೆ. ಇದು ಹಿಂದೂಗಳಿಗೆ ಅತ್ಯಂತ ಪ್ರಮುಖವಾದ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿದ್ದು, ಇದನ್ನು ಭೂಲೋಕ ವೈಕುಂಠಂ (ಭೂಮಿಯ ಮೇಲಿನ ವಿಷ್ಣುವಿನ ಪವಿತ್ರ ನಿವಾಸ) ಎಂದು ಕರೆಯಲಾಗುತ್ತದೆ. ಹಲವರು ಗಣ್ಯರು, ನಟ-ನಟಿಯರು, ಉದ್ಯಮಿಗಳು, ರಾಜಕಾರಣಿಗಳು ಈ ದೇವಾಲಯಕ್ಕೆ ಭೇಟಿ ನೀಡುತ್ತಿರುತ್ತಾರೆ. ಇಂತಹ ಪವಿತ್ರ ದೇವಾಲಯಕ್ಕೆ ಟಿವಿಎಸ್ (TVS) ಕಡೆಯಿಂದ ಐದು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಕಾಣಿಕೆಯಾಗಿ ನೀಡಲಾಗಿದೆ.
ಟಿವಿಎಸ್ ಮೋಟಾರ್ ಕಂಪನಿಯ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಆಗಿರುವ ಟಿವಿಎಸ್ ಐಕ್ಯೂಬ್ ಅನ್ನು ಗುರುವಾಯೂರಪ್ಪನಿಗೆ ಕಾಣಿಕೆಯಾಗಿ ನೀಡಲಾಗಿದೆ. ಟಿವಿಎಸ್ ಮೋಟಾರ್ ಕಂಪನಿಯ ಪರವಾಗಿ ತ್ರಿಶೂರ್‌ನ ಡೀಲರ್ ಎಎಜೆ ಸೆಂಚುರಿ ಟಿವಿಎಸ್ ಈ ವಾಹನಗಳನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ. ಈ ಬಗ್ಗೆ ಡೀಲರ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡು ಒಂದು ಸ್ಕೂಟರ್ ಬೆಲೆ 1,20,659 ರೂ. ಎಂದು ಹೇಳಿದೆ.

ದೇವಾಲಯದ ಬಗ್ಗೆ: ಇಲ್ಲಿನ ಪ್ರಧಾನ ದೇವರು ಮಹಾವಿಷ್ಣು, ನಾಲ್ಕು ಕೈಗಳಲ್ಲಿ ಶಂಖು (ಶಂಖ), ಸುದರ್ಶನ ಚಕ್ರ, ಕಮಲ ಮತ್ತು ಗದೆಯನ್ನು ಹಿಡಿದು ನಿಂತ ಭಂಗಿಯಲ್ಲಿ ನೆಲೆಸಿದ್ದಾರೆ. ಮಹಾವಿಷ್ಣುವಿನ ಪೂರ್ಣ ಅವತಾರ ಬಾಲಕೃಷ್ಣ ಎಂದು ಪೂಜಿಸಲಾಗುತ್ತದೆ. ಈ ವಿಗ್ರಹವನ್ನು ಪಾತಾಳ ಅಂಜನ ಎಂದು ಕರೆಯಲ್ಪಡುವ ಅಪರೂಪದ ಕಲ್ಲಿನಿಂದ ಮಾಡಲಾಗಿದೆ.
ಐಕ್ಯೂಬ್ ಸ್ಕೂಟರ್ ವಿಶೇಷತೆಗಳು: ಇದು ಸ್ಟ್ಯಾಂಡರ್ಡ್ ಮತ್ತು ಎಸ್‌ಟಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ದೊರೆಯುತ್ತದೆ. ಈ ಸ್ಟ್ಯಾಂಡರ್ಡ್ ಐಕ್ಯೂಬ್ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 75 ರಿಂದ 100 ಕಿಲೋಮೀಟರ್‌ವರೆಗೆ ರೇಂಜ್ ನೀಡುತ್ತದೆ. ಐಕ್ಯೂಬ್ ಎಸ್‌ಟಿ ಮಾಡೆಲ್ ಪೂರ್ಣ ಚಾರ್ಜ್‌ನಲ್ಲಿ 100 ರಿಂದ 150 ಕಿಲೋಮೀಟರ್ ಓಡುತ್ತದೆ.

ಇದರ ಸ್ಟ್ಯಾಂಡರ್ಡ್ ಐಕ್ಯೂಬ್ ಮಾಡೆಲ್, ರೂ.1.07 ಲಕ್ಷದಿಂದ ರೂ.1.37 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.2 ಕೆಡಬ್ಲ್ಯೂಹೆಚ್ ಹಾಗೂ 3.4 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಟಿವಿಎಸ್ ಐಕ್ಯೂಬ್ ಎಸ್‌ಟಿ ಮಾಡೆಲ್, ರೂ.1.56 ಲಕ್ಷದಿಂದ ರೂ.1.85 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 3.4 ಕೆಡಬ್ಲ್ಯೂಹೆಚ್ ಹಾಗೂ 5.1 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ.
ಟಿಎಫ್‌ಟಿ ಸ್ಕ್ರೀನ್, ಟರ್ನ್ - ಬೈ - ಟರ್ನ್ ನ್ಯಾವಿಗೇಷನ್, ವೆಹಿಕಲ್ ಕ್ರ್ಯಾಶ್-ಟೌ ಅಲರ್ಟ್ ಮತ್ತು 30 ಲೀ. ಸೀಟ್ ಬೂಟ್ ಸ್ಪೇಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸ್ಟಾರ್‌ಲೈಟ್ ಬ್ಲೂ ಗ್ಲೋಸ್ಸಿ ಹಾಗೂ ಟೈಟಾನಿಯಂ ಗ್ರೇ ಮ್ಯಾಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಪ್ರೀಮಿಯಂ ಮಾಡಲ್ ಆಗಿರುವ 'ಟಿವಿಎಸ್ ಎಕ್ಸ್' ರೂ.2.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 4.44 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಪೂರ್ತಿ ಚಾರ್ಜ್‌ನಲ್ಲಿ 140 ಕಿಲೋಮೀಟರ್ ರೇಂಜ್ ನೀಡುತ್ತದೆ. ಟಿಎಫ್‌ಟಿ ಕನ್ಸೋಲ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಇದರಲ್ಲಿ ವಿಶೇಷವಾಗಿ ಡಿಸ್ಕ್ ಬ್ರೇಕ್‌ಗಳನ್ನು ಸಹ ನೀಡಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








