TVS: ಟಿವಿಎಸ್‌ಗೆ ವರವಾದ ಐಕ್ಯೂಬ್ ಇ-ಸ್ಕೂಟರ್.. ಬಿಸಿ - ಬಿಸಿ ಜಿಲೇಬಿಯಂತೆ ಮಾರಾಟ, ಏನಿದರ ವಿಶೇಷತೆ?
ಟಿವಿಎಸ್ ಮೋಟಾರ್ (TVS Motor), ನಂಬಿಕಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಬೈಕ್ ಹಾಗೂ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಕಳೆದ ತಿಂಗಳು (ಮಾರ್ಚ್-2025), ಒಟ್ಟಾರೆ 400,120 ಯುನಿಟ್ ದ್ವಿಚಕ್ರ ವಾಹನಗಳನ್ನು (Two Wheelers) ಯಶಸ್ವಿಯಾಗಿ ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 344,446 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 16% ಬೆಳವಣಿಗೆಯನ್ನು ಕಂಡಿದೆ.
ವಿಶೇಷವಾಗಿ ಎಲೆಕ್ಟ್ರಿಕ್ ವಾಹನ (Electric Vehicle) ಮಾರಾಟದಲ್ಲಿ ಟಿವಿಎಸ್ ಮೋಟಾರ್ ನಿರೀಕ್ಷೆಗೂ ಮೀರಿದ ಪ್ರಗತಿಯನ್ನು ಸಾಧಿಸಿದೆ. ಹೋದ ತಿಂಗಳು 26,935 ಎಲೆಕ್ಟ್ರಿಕ್ ವಾಹನಗಳನ್ನು ಮಾರಿದೆ. 2024ರ ಮಾರ್ಚ್‌ನಲ್ಲಿ ಮಾರಾಟಗೊಳಿಸಲಾದ 15,250 ಯುನಿಟ್‌ಗಳಿಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 77% ಅಭಿವೃದ್ಧಿಯಾಗಿದೆ.

ಟಿವಿಎಸ್ ಮೋಟಾರ್ ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿ ಈ ಮಟ್ಟಿಗೆ ಯಶಸ್ಸು ಕಾಣಲು ಐಕ್ಯೂಬ್ (iQube) ಹಾಗೂ ಪ್ರೀಮಿಯಂ ಎಕ್ಸ್ (X) ಎಲೆಕ್ಟ್ರಿಕ್ ಸ್ಕೂಟರ್‌ಗಳು ಪ್ರಮುಖವಾದ ಕಾರಣವಾಗಿವೆ. ಬಹುಮುಖ್ಯವಾಗಿ ಉತ್ತಮ ನಿರ್ಮಾಣ ಗುಣಮಟ್ಟ ಮತ್ತು ಅತ್ಯುತ್ತಮ ಕಾರ್ಯಕ್ಷಮತೆ ಹೊಂದಿರುವ ಹಿನ್ನೆಲೆ, 'ಐಕ್ಯೂಬ್' ಇ-ಸ್ಕೂಟರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ.
ಟಿವಿಎಸ್ ಐಕ್ಯೂಬ್ ವಿಶೇಷತೆಗಳೇನು: ಇದು ಸ್ಟ್ಯಾಂಡರ್ಡ್ ಮತ್ತು ಎಸ್‌ಟಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ದೊರೆಯುತ್ತದೆ. ಇದರ ಸ್ಟ್ಯಾಂಡರ್ಡ್ ಐಕ್ಯೂಬ್ ಮಾಡೆಲ್, ರೂ.1.07 ಲಕ್ಷದಿಂದ ರೂ.1.37 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.2 ಕೆಡಬ್ಲ್ಯೂಹೆಚ್ ಹಾಗೂ 3.4 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ.

ಈ ಸ್ಟ್ಯಾಂಡರ್ಡ್ ಐಕ್ಯೂಬ್ ಮಾಡೆಲ್, ಸಂಪೂರ್ಣ ಚಾರ್ಜ್‌ನಲ್ಲಿ 75 ರಿಂದ 100 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಟಿಎಫ್‌ಟಿ ಸ್ಕ್ರೀನ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ವೆಹಿಕಲ್ ಕ್ರ್ಯಾಶ್-ಟೌ ಅಲರ್ಟ್ ಮತ್ತು 30 ಲೀ. ಸೀಟ್ ಬೂಟ್ ಸ್ಪೇಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಟಿವಿಎಸ್ ಐಕ್ಯೂಬ್ ಎಸ್‌ಟಿ ಮಾಡೆಲ್, ರೂ.1.56 ಲಕ್ಷದಿಂದ ರೂ.1.85 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 3.4 ಕೆಡಬ್ಲ್ಯೂಹೆಚ್ ಹಾಗೂ 5.1 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್‌ನ್ನು ಹೊಂದಿದ್ದು, ಭರ್ತಿ ಚಾರ್ಜ್‌ನಲ್ಲಿ 100 ರಿಂದ 150 ಕಿಲೋಮೀಟರ್ ಓಡುತ್ತದೆ. ಸ್ಟಾರ್‌ಲೈಟ್ ಬ್ಲೂ ಗ್ಲೋಸ್ಸಿ ಹಾಗೂ ಟೈಟಾನಿಯಂ ಗ್ರೇ ಮ್ಯಾಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
'ಟಿವಿಎಸ್ ಎಕ್ಸ್' ಇ-ಸ್ಕೂಟರ್ ಸಹ ಗ್ರಾಹಕರ ಖರೀದಿಗೆ ಲಭ್ಯ: ಇದು ರೂ.2.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 4.44 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಪೂರ್ತಿ ಚಾರ್ಜ್‌ನಲ್ಲಿ 140 ಕಿಲೋಮೀಟರ್ ಕ್ರಮಿಸುತ್ತದೆ. 105 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಟಿಎಫ್‌ಟಿ ಕನ್ಸೋಲ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








