121 ಕಿ.ಮೀ ಕ್ರಮಿಸುತ್ತೆ.. ಅಗ್ಗದ TVS iQube ಎಲೆಕ್ಟ್ರಿಕ್ ಸ್ಕೂಟರ್‌ನ ಹೊಸ ವೇರಿಯೆಂಟ್ ಕುರಿತ ಪ್ರಮುಖಾಂಶಗಳಿವು!
ಟಿವಿಎಸ್ ಐಕ್ಯೂಬ್ (TVS iQube) ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಎಂದೇ ಹೆಸರುವಾಸಿಯಾಗಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸದ್ಯ 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 3.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 5.3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಎಂಬ ಬ್ಯಾಟರಿ ಪ್ಯಾಕ್ ಹೊಂದಿರುವ ರೂಪಾಂತರಗಳ ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತಿದೆ. ಇತ್ತೀಚೆಗೆ ನೂತನ 3.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ರೂಪಾಂತರವನ್ನು (ವೇರಿಯೆಂಟ್) ಬಿಡುಗಡೆಗೊಳಿಸಲಾಗಿದೆ. ಬನ್ನಿ, ಹೊಸ ರೂಪಾಂತರದ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.
ಬೆಲೆ (Price):
ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ನ ನೂತನ 3.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಒಳಗೊಂಡಿರುವ ರೂಪಾಂತರವನ್ನು ಅತಿ ಕಡಿಮೆ ಬೆಲೆಯಲ್ಲೂ ಪರಿಚಯಿಸಲಾಗಿದೆ. ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಇದು ರೂ.1.05 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

ಕಾರ್ಯಕ್ಷಮತೆ (Performance):
ಈ ಹೊಸ ರೂಪಾಂತರವು ಭರ್ತಿ ಚಾರ್ಜ್‌ನಲ್ಲಿ ಬರೋಬ್ಬರಿ 121 ಕಿಲೋಮೀಟರ್‌ವರೆಗೆ ಓಡುತ್ತದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇದರಲ್ಲಿರುವ ಬ್ಯಾಟರಿ ಪ್ಯಾಕ್, ಸರಿ ಸುಮಾರು 4 ಗಂಟೆ 30 ನಿಮಿಷಗಳಲ್ಲಿ 0 ರಿಂದ 80 ಚಾರ್ಜ್ ಆಗುತ್ತದೆ.
ವಿನ್ಯಾಸ & ಬಣ್ಣಗಳು (Design & Colors):
ಟಿವಿಎಸ್ ಐಕ್ಯೂಬ್ ಇ-ಸ್ಕೂಟರ್‌ನ ನೂತನ 3.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ರೂಪಾಂತರವು, ಸಾಮಾನ್ಯ ರೂಪಾಂತರಗಳಂತೆ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಹೈಡ್‌ಲೈಟ್ ಹಾಗೂ ಡಿಆರ್‌ಎಲ್‌ಗಳನ್ನು ಪಡೆದಿದೆ. ಪರ್ಲ್ ವೈಟ್ & ಟೈಟಾನಿಯಂ ಗ್ರೇ ಎಂಬ ಸಿಂಗಲ್ ಟೋನ್, ಬೀಜ್ ವಿತ್ ಸ್ಟಾರ್‌ಲೈಟ್ ಬ್ಲೂ & ಬೀಜ್ ವಿತ್ ಕಾಪರ್ ಎಂಬ ಡುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ವೈಶಿಷ್ಟ್ಯಗಳು (Features):
ಇದು ಹಲವು ಆಕರ್ಷಕ ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಟಿಎಫ್‌ಟಿ ಸ್ಕ್ರೀನ್, ಹಿಲ್ ಹೋಲ್ಡ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯನ್ನು ಒಳಗೊಂಡಿದೆ. ಈ ಸ್ಕೂಟರ್ 117 ಕೆಜಿ ತೂಕವಿದೆ. ಜೊತೆಗೆ ದೊಡ್ಡ ಗಾತ್ರದ 32-ಲೀಟರ್ ಸಾಮರ್ಥ್ಯದ ಬೂಟ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):
ಈ ಹೊಸ ರೂಪಾಂತರವು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಟ್ವಿನ್ ಟ್ಯೂಬ್ ಶಾಕ್ಸ್ ಸಸ್ಪೆನ್ಸನ್ ಸೆಟಪ್ ಒಳಗೊಂಡಿದೆ. ಹಾಗೆಯೇ 220 ಎಂಎಂ ಡಿಸ್ಕ್ & 130 ಎಂಎಂ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ಐಕ್ಯೂಬ್ ಎಸ್ & ಐಕ್ಯೂಬ್ ಎಸ್‌ಟಿ ಎಲೆಕ್ಟ್ರಿಕ್ ಸ್ಕೂಟರ್‌ಗಳು ಕೂಡ ಖರೀದಿಗೆ ಲಭ್ಯ:
ಇವು ರೂ.1.39 ಲಕ್ಷದಿಂದ ರೂ.1.71 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿವೆ. 3.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 5.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿವೆ. ಸಂಪೂರ್ಣ ಚಾರ್ಜ್‌ನಲ್ಲಿ 145 ರಿಂದ 212 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತವೆ. ಜೊತೆಗೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿವೆ.
ಒಟ್ಟಾರೆಯಾಗಿ, ಟಿವಿಎಸ್ ಐಕ್ಯೂಬ್ ಇ-ಸ್ಕೂಟರ್‌ನ ನೂತನ 3.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ರೂಪಾಂತರ ಮಾರಾಟಕ್ಕೆ ಬಂದಿರುವುದು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಹೆಚ್ಚು ಅತ್ಯುತ್ತಮವಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಮುಂಬರುವ ದಿನಗಲ್ಲಿ ಈ ಎಲೆಕ್ಟ್ರಿಕ್ ಸ್ಕೂಟರ್‌ಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.


Click it and Unblock the Notifications








