121 Km ರೇಂಜ್.. ಜನಪ್ರಿಯ TVS iQube ಇ-ಸ್ಕೂಟರ್‌ನ ಹೊಸ ವೇರಿಯೆಂಟ್ ಬಿಡುಗಡೆ, ಬೆಲೆಯೂ ಅಗ್ಗ!

ಟಿವಿಎಸ್ ಐಕ್ಯೂಬ್ (TVS iQube) ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಹೆಚ್ಚು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಇದು 2.2, 3.5 ಮತ್ತು 5.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ಗಳನ್ನು ಒಳಗೊಂಡಿರುವ ರೂಪಾಂತರಗಳೊಂದಿಗೆ ಗ್ರಾಹಕರ ಖರೀದಿಗೆ ಲಭ್ಯವಿದೆ. ಸದ್ಯ ಈ ಎಲೆಕ್ಟ್ರಿಕ್ ಸ್ಕೂಟರ್‌ನ ಹೊಚ್ಚ ಹೊಸ ರೂಪಾಂತರವನ್ನು (ವೇರಿಯೆಂಟ್) ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿದ್ದು, ಹಲವು ವಿಶೇಷತೆಗಳಿಗೂ ಸಾಕ್ಷಿಯಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಟಿವಿಎಸ್ ಐಕ್ಯೂಬ್ ಸ್ಕೂಟರ್‌ನ ನೂತನವಾದ 3.1 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ ಹೊಂದಿರುವ ರೂಪಾಂತರವನ್ನು ಮಾರಾಟಕ್ಕೆ ತರಲಾಗಿದೆ. ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿದಾರರಿಗೆ ದೊರೆಯಲಿದ್ದು, ರೂ.1.05 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ಬೆಲೆಯನ್ನು ಒಳಗೊಂಡಿದೆ.

TVS iQube New 3 1 kWh Variant Launched Price And Features Details

ಈ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್‌ನ ಹೊಸ ರೂಪಾಂತರವು, ಸಂಪೂರ್ಣ ಚಾರ್ಜ್‌ನಲ್ಲಿ 121 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇದೇ ಬ್ಯಾಟರಿಯು 0 ರಿಂದ 80 ಚಾರ್ಜ್ ಆಗಲು 4 ಗಂಟೆ 30 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ.

ನೂತನ ಟಿವಿಎಸ್ ಐಕ್ಯೂಬ್ ಇ-ಸ್ಕೂಟರ್, ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. 4 ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಪರ್ಲ್ ವೈಟ್ ಮತ್ತು ಟೈಟಾನಿಯಂ ಗ್ರೇ ಎಂಬ ಸಿಂಗಲ್ ಟೋನ್, ಬೀಜ್‌ ವಿತ್ ಸ್ಟಾರ್‌ಲೈಟ್ ಬ್ಲೂ ಹಾಗೂ ಬೀಜ್‌ ವಿತ್ ಕಾಪರ್ ಎಂಬ ಡುಯಲ್ ಟೋನ್ ಬಣ್ಣಗಳೊಂದಿಗೂ ಸಿಗುತ್ತದೆ.

TVS iQube New 3 1 kWh Variant Launched Price And Features Details

ಹೊಸ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ ಟಿಎಫ್‌ಟಿ ಸ್ಕ್ರೀನ್, ಹಿಲ್ ಹೋಲ್ಡ್, ಬ್ಲೂಟೂತ್ ಕನೆಕ್ಟಿವಿಟಿಯನ್ನು ಹೊಂದಿದೆ. ಈ ಸ್ಕೂಟರ್ 117 ಕೆಜಿ ತೂಕವು ಇದೆ. ಜೊತೆಗೆ ದೊಡ್ಡದಾಗಿರುವ 32 - ಲೀಟರ್ ಸಾಮರ್ಥ್ಯದ ಬೂಟ್ ಸ್ಟೋರೇಜ್ ಅನ್ನು ಹೊಂದಿದೆ.

ಈ ಐಕ್ಯೂಬ್ ಇ-ಸ್ಕೂಟರ್ ಸವಾರರ ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಟ್ವಿನ್ - ಟ್ಯೂಬ್ ಶಾಕ್ಸ್ ಸಸ್ಪೆನ್ಸನ್ ಸೆಟಪ್ ಹೊಂದಿದೆ. ಅದೇ ರೀತಿಯಲ್ಲಿ 220 ಎಂಎಂ ಡಿಸ್ಕ್ ಹಾಗೂ 130 ಎಂಎಂ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

TVS iQube New 3 1 kWh Variant Launched Price And Features Details

ಟಿವಿಎಸ್ ಐಕ್ಯೂಬ್ ಎಸ್ (TVS iQube S) ಕೂಡ ಖರೀದಿಗೆ ಲಭ್ಯ:

ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.39 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 3.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 145 ಕಿಲೋಮೀಟರ್ ಓಡುತ್ತದೆ. 78 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದ್ದು, ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತದೆ.

ಟಿವಿಎಸ್ ಐಕ್ಯೂಬ್ ಎಸ್‌ಟಿ (TVS iQube ST) ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮನೆಗೆ ತರಬಹುದು:

ಇದು 1.57 ಲಕ್ಷದಿಂದ ರೂ.1.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಶಕ್ತಿಯುತವಾದ 3.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 5.1 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ ಬರೋಬ್ಬರಿ 145 ರಿಂದ 212 ಕಿಲೋಮೀಟರ್ ಓಡುತ್ತದೆ. ಜೊತೆಗೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ.

More from DriveSpark

Article Published On: Wednesday, July 2, 2025, 16:22 [IST]
English summary
Tvs iqube new 3 1 kwh variant launched price and features details
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+