TVS: ಒಬಿಡಿ-2ಬಿ ಹೊಸ 'ಟಿವಿಎಸ್ ಜುಪಿಟರ್ 110' ಸ್ಕೂಟರ್ ಬಿಡುಗಡೆ.. ರೂ.76,691 ಬೆಲೆ, ಹೇಗಿದೆ?
ಟಿವಿಎಸ್ ಮೋಟಾರ್ (TVS Motor) ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ತನ್ನದೆಯಾದ ಛಾಪನ್ನು ಮೂಡಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ವಿವಿಧ ಮೋಟಾರ್‌ಸೈಕಲ್ ಹಾಗೂ ಸ್ಕೂಟರ್‌ಗಳನ್ನು ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಳಿಸುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಟಿವಿಎಸ್ ಕಂಪನಿಯು ಒಬಿಡಿ-2ಬಿ (OBD-2B) ಮಾನದಂಡಗಳನ್ನು ಪೂರೈಸಿರುವ ಹೊಚ್ಚ ಹೊಸ 'ಜುಪಿಟರ್ 110' ಸ್ಕೂಟರ್‌ನ್ನು ಬಿಡುಗಡೆಗೊಳಿಸಿದೆ. ಅದರ ಹೊರತಾಗಿ ನೂತನ ಸ್ಕೂಟರ್ ವೈಶಿಷ್ಟ್ಯಗಳ ವಿಚಾರದಲ್ಲಿ ಯಾವುದೇ ಬದಲಾವಣೆ ಪಡೆದುಕೊಂಡಿಲ್ಲ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಒಬಿಡಿ-2ಬಿ ಅಂದರೆ ಏನು: ಇದೊಂದು ರೀತಿಯ ತಂತ್ರಜ್ಞಾನವಾಗಿದ್ದು, ವಾಹನದ ಎಂಜಿನ್ ಸಾಮರ್ಥ್ಯವನ್ನು ವೃದ್ಧಿಸುತ್ತದೆ. ಇದು ಥ್ರೊಟಲ್ ರೆಸ್ಪಾನ್ಸ್, ಏರ್-ಫ್ಯುಯೆಲ್ ರೇಶಿಯೋ, ಎಂಜಿನ್ ಟೆಂಪರೇಚರ್, ಫ್ಯುಯೆಲ್ ಲೆವೆಲ್ ಹಾಗೂ ಎಂಜಿನ್ ಸ್ಪೀಡ್ ಕುರಿತ ಡೇಟಾವನ್ನು ಸಂಗ್ರಹಿಸುವ ಸೆನ್ಸಾರ್‌ಗಳನ್ನು ಒಳಗೊಂಡಿದೆ. ಜೊತೆಗೆ ದೀರ್ಘಾವಧಿ ಪರಿಸರ ಸ್ನೇಹಿ ಚಾಲನೆಯನ್ನು ಬೆಂಬಲಿಸುತ್ತದೆ. ಮಾರ್ಚ್ ಅಂತ್ಯದೊಳಗೆ ಕಂಪನಿಯು ಎಲ್ಲ ದ್ವಿಚಕ್ರ ವಾಹನಗಳನ್ನು ಒಬಿಡಿ-2ಬಿ ಮಾನದಂಡಗಳ ಅನ್ವಯ ಮೇಲ್ದರ್ಜೆರಿಸಲು ತೀರ್ಮಾನಿಸಿದೆ.

ಟಿವಿಎಸ್ ಜುಪಿಟರ್ 110 (Tvs Jupiter 110) ವಿಶೇಷತೆಗಳೇನು: ಈ ಸ್ಕೂಟರ್ 113.3 ಸಿಸಿ, 4-ಸ್ಟ್ರೋಕ್, ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್ ಒಬಿಡಿ-2ಬಿ ಎಂಜಿನ್ ಹೊಂದಿದೆ. ಇದು 7.91 ಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 9.8 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇದರೊಟ್ಟಿಗೆ 53 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ಅಂದಾಜಿಸಲಾಗಿದೆ.
ಈ ಸ್ಕೂಟರ್ ಡ್ರಮ್, ಡ್ರಮ್ ಅಲಾಯ್, ಡ್ರಮ್ ಎಸ್‌ಎಕ್ಸ್‌ಸಿ ಮತ್ತು ಡಿಸ್ಕ್ ಎಸ್‌ಎಕ್ಸ್‌ಸಿ ಎಂಬ 4 ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಸ್ಟಾರ್‌ಲೈಟ್ ಬ್ಲೂ ಗ್ಲಾಸ್, ಡಾನ್ ಬ್ಲೂ ಮ್ಯಾಟ್, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್, ಲೂನಾರ್ ವೈಟ್ ಗ್ಲಾಸ್, ಮೀಟಿಯರ್ ರೆಡ್ ಗ್ಲಾಸ್ ಮತ್ತು ಟೈಟಾನಿಯಂ ಗ್ರೇ ಮ್ಯಾಟ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ನೂತನ ಟಿವಿಎಸ್ ಜುಪಿಟರ್ 110 ಸ್ಕೂಟರ್ 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಡಿಜಿಟಲ್ - ಇನ್ಸ್ಟ್ರುಮೆಂಟ್ ಕ್ಲಸ್ಟರ್, ಇಂಟಲಿಜೆಂಟ್ ಸ್ಟಾರ್ಟ್/ ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್, ಯುಎಸ್‌ಬಿ ಚಾರ್ಜರ್, 2 ಲೀ. ಗ್ಲೋವ್ ಬಾಕ್ಸ್ ಮತ್ತು 33 ಲೀ. ಸಾಮರ್ಥ್ಯದ ಅಂಡರ್ ಸೀಟ್ ಸೋರೇಜ್ ಅನ್ನು ತನ್ನದಾಗಿಸಿಕೊಂಡಿದೆ.
ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್ ಗ್ಯಾಸ್ ಫೀಲ್ಡ್ ಡ್ಯಾಂಪರ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಮುಂದೆ 220 ಎಂಎಂ ಪೆಟಲ್ ಡಿಸ್ಕ್ ಹಾಗೂ ಹಿಂದೆ 130 ಎಂಎಂ ಡ್ರಮ್ ಬ್ರೇಕ್‌ನ್ನು ಒಳಗೊಂಡಿದೆ.

ಟಿವಿಎಸ್ ಜುಪಿಟರ್ 125 ಸ್ಕೂಟರ್ ಕೂಡ ಖರೀದಿಗೆ ಲಭ್ಯ: ಇದು ರೂ.89,396 ರಿಂದ ರೂ.99,805 ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 124 ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್ - ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಶನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








