ಚಿಂತೆ ಯಾಕೆ ಗೆಳೆಯ.. ಆಫೀಸ್‌ಗೆ ಹೋಗಲು ಈ ಟಿವಿಎಸ್ ಸ್ಕೂಟರ್ ಸೂಕ್ತ.. ರೂ.89,000 ಬೆಲೆ, 57 ಕಿ.ಮೀ ಮೈಲೇಜ್!

ಬೆಂಗಳೂರಿನಂತಹ ಮಹಾನಗರಗಳಲ್ಲಿ ದಿನನಿತ್ಯದ ಆಫೀಸ್‌ ಕೆಲಸಕ್ಕೆ ಹೋಗಲು ದ್ವಿಚಕ್ರ ವಾಹನಗಳು ತೀರಾ ಅನಿವಾರ್ಯವಾಗಿವೆ. ಬೈಕ್‌ಗಳಿಗೆ ಹೋಲಿಕೆ ಮಾಡಿದರೆ, ಸಂಚಾರ ದಟ್ಟಣೆಯಿಂದ ಕೂಡಿದ ರಸ್ತೆಯಲ್ಲಿ ಸ್ಕೂಟರ್‌ಗಳು ಉತ್ತಮವೆನಿಸುತ್ತವೆ. ನೀವು ಹೊಚ್ಚ ಹೊಸ ಸ್ಕೂಟರ್ ಖರೀದಿಸಲು ಆಲೋಚಿಸಿದ್ದರೆ.. ಟಿವಿಎಸ್ ಜುಪಿಟರ್ 125 (TVS Jupiter 125) ಹೆಚ್ಚು ಸೂಕ್ತವಾಗಲಿದೆ. ಬನ್ನಿ.. ಈ ಸ್ಕೂಟರ್ ಬೆಲೆ (Price), ಕಾರ್ಯಕ್ಷಮತೆ (Performance) ಹಾಗೂ ವಿಶೇಷತೆ (Specification) ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

ಬೆಲೆ & ರೂಪಾಂತರಗಳು: ನೂತನ ಟಿವಿಎಸ್ ಜುಪಿಟರ್ 125 ಸ್ಕೂಟರ್ ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.89,396 ರಿಂದ ರೂ.99,805 (ಎಕ್ಸ್ ಶೋರೂಂ - ಬೆಂಗಳೂರು) ದರವನ್ನು ಹೊಂದಿದೆ. ಡ್ರಮ್, ಡಿಸ್ಕ್ & ಸ್ಮಾರ್ಟ್‌ ಕನೆಕ್ಟ್ ಎಂಬ ಮೂರು ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಪ್ರಿಸ್ಟೈನ್ ವೈಟ್, ಇಂಡಿಬ್ಲೂ, ಡಾನ್ ಆರೆಂಜ್ & ಟೈಟಾನಿಯಂ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

Tvs Jupiter 125 Good Scooter For Daily Use Price Mileage And Features Details

ಕಾರ್ಯಕ್ಷಮತೆ: ಈ ಸ್ಕೂಟರ್ ಶಕ್ತಿಯುತವಾದ 124.8 ಸಿಸಿ ಸಿಂಗಲ್ - ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6500 ಆರ್‌ಪಿಎಂನಲ್ಲಿ 8.2 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4500 ಆರ್‌ಪಿಎಂನಲ್ಲಿ 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 57.27 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯಗಳು: ಹೊಚ್ಚ ಹೊಸ ಟಿವಿಎಸ್ ಜುಪಿಟರ್ 125 ಸ್ಕೂಟರ್ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್, ಫುಲ್ - ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್ ಮತ್ತು ವಾಯ್ಸ್ ಅಸಿಸ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮತ್ತೇನಿದೆ ವಿಶೇಷತೆಗಳು: ಈ ಸ್ಕೂಟರ್ 108 ಕೆಜಿ ತೂಕವಿದ್ದು, 5.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಹೆಚ್ಚಿನ ಸಾಗಿಸಲು 33-ಲೀಟರ್ ಅಂಡರ್ ಸೀಟ್ ಸ್ಟೋರೇಜ್ ಅನ್ನು ಪಡೆದಿದೆ. 12-ಇಂಚಿನ ಅಲಾಯ್ ವೀಲ್‌ಗಳು ಮತ್ತು 90/90-12 ಅಳತೆಯ ಟ್ಯೂಬ್‌ಲೆಸ್ ಟೈರ್‌ಗಳನ್ನು ತನ್ನದಾಗಿಸಿಕೊಂಡಿದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್: ನೂತನ ಟಿವಿಎಸ್ ಜುಪಿಟರ್ 125 ಸ್ಕೂಟರ್, ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಗ್ಯಾಸ್ - ಚಾರ್ಜ್ಡ್ ಕಾಯಿಲ್ ಸ್ಪ್ರಿಂಗ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದೆ. ಸವಾರರ ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್‌ ಕೂಡ ಖರೀದಿಗೆ ಲಭ್ಯ: ಇದು ರೂ.78,391 ರಿಂದ 90,691 (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. 113 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 48 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇಂಟೆಲಿಜೆಂಟ್ ಸ್ಟಾರ್ಟ್-ಸ್ಟಾಪ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, January 11, 2025, 15:45 [IST]
English summary
Tvs jupiter 125 good scooter for daily use price mileage and features details
Read more on tvs motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+