ಹೊಸ ಟಿವಿಎಸ್ ಜೂಪಿಟರ್ ಸಿಎನ್‌ಜಿ & ಸುಜುಕಿ ಇ ಆಕ್ಸೆಸ್ ಸ್ಕೂಟರ್‌ಗಳ ಬಿಡುಗಡೆ ಯಾವಾಗ.. ಅತಿ ಕಡಿಮೆ ಬೆಲೆ?
ಭಾರತದಲ್ಲಿ ದ್ವಿಚಕ್ರ ವಾಹನ ಮಾರುಕಟ್ಟೆ (two wheeler) ವೇಗವಾಗಿ ಬೆಳೆಯುತ್ತಿದ್ದು, ಹತ್ತಾರು ಬೈಕ್ ಹಾಗೂ ಸ್ಕೂಟರ್‌ಗಳು ಖರೀದಿ ಲಭ್ಯವಿವೆ. ವಿಶೇಷವಾಗಿ ಸ್ಕೂಟರ್ ಎಂಬುದು ಮಹಿಳಾ ಹಾಗೂ ಪುರುಷ ಗ್ರಾಹಕರಿಬ್ಬರಿಗೂ ಹೆಚ್ಚು ಸೂಕ್ತವಾಗಲಿವೆ. ಕಳೆದ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಹೊಚ್ಚ ಹೊಸ ಟಿವಿಎಸ್ ಜೂಪಿಟರ್ ಸಿಎನ್‌ಜಿ (TVS Jupiter CNG) ಹಾಗೂ ಸುಜುಕಿ ಇ ಆಕ್ಸೆಸ್ (Suzuki e Access) ಸ್ಕೂಟರ್‌ಗಳನ್ನು ಅದ್ದೂರಿಯಾಗಿ ಅನಾವರಣಗೊಳಿಸಲಾಗಿದೆ. ನೀವು ನೂತನ ಸ್ಕೂಟರ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಈ ಸ್ಕೂಟರ್‌ಗಳು ಅತಿ ಶೀಘ್ರದಲ್ಲಿಯೇ ಬಿಡುಗಡೆಯಾಗಲಿವೆ. ಬನ್ನಿ.. ಇವುಗಳ ವಿಶೇಷತೆ ಕುರಿತಂತೆ ಒಂದಷ್ಟು ಮಾಹಿತಿಯನ್ನು ತಿಳಿಯೋಣ.
ಟಿವಿಎಸ್ ಜೂಪಿಟರ್ ಸಿಎನ್‌ಜಿ: ಈ ಸ್ಕೂಟರ್ ಅತ್ಯಂತ ಕಡಿಮೆ ಬೆಲೆಯನ್ನು ಹೊಂದಿರಲಿದ್ದು, ರೂ.90,000 ರಿಂದ 1 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಇದು ಬಹುತೇಕ ದಸರಾ ಹಾಗೂ ದೀಪಾವಳಿಗೆ ಅಂದರೆ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗಿದೆ.

ಈ ನೂತನ ಟಿವಿಎಸ್ ಜೂಪಿಟರ್ ಸಿಎನ್‌ಜಿ ಸ್ಕೂಟರ್, 124.8 - ಸಿಸಿ ಸಾಮರ್ಥ್ಯದ ಸಿಂಗಲ್-ಸಿಲಿಂಡರ್ ಎಂಜಿನ್‌ನ್ನು ಒಳಗೊಂಡಿದೆ. 7.1 ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.4 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ. 80.5 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.
ಹೊಸ ಸ್ಕೂಟರ್ 2-ಲೀ. ಪೆಟ್ರೋಲ್ ಹಾಗೂ 1.4-ಕೆಜಿ ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಸರಿ ಸುಮಾರು 226 ಕಿ.ಮೀ ಮೈಲೇಜ್ ನೀಡುತ್ತದೆ. ಎಲ್‌ಇಡಿ ಹೆಡ್‌ಲೈಟ್, ಮೊಬೈಲ್ ಚಾರ್ಜಿಂಗ್ ಪೋರ್ಟ್, ಆಲ್-ಇನ್-ಒನ್ ಲಾಕ್, ಸೈಡ್ ಸ್ಟ್ಯಾಂಡ್ ಇಂಡಿಕೇಟರ್, ಎಂಜಿನ್ ಇಕೋ-ಥ್ರಸ್ಟ್ ಫ್ಯುಯೆಲ್-ಇಂಜೆಕ್ಷನ್ ಮತ್ತು ಇಂಟೆಲಿಗೊ ಟೆಕ್ನಾಲಜಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಸುಜುಕಿ ಇ ಆಕ್ಸೆಸ್: ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಅತಿ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ರೂ.1 ಲಕ್ಷದಿಂದ ರೂ.1.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. ಈ ಸ್ಕೂಟರ್ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ನೂತನ ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್, 3.07 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 95 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಇದರ ಬ್ಯಾಟರಿ ಪ್ಯಾಕ್, ಹೋಂ ಚಾರ್ಜರ್ ಉಪಯೋಗ ಮಾಡಿದಾಗ 0 ರಿಂದ 100% ಚಾರ್ಜ್ ಆಗಲು 6 ಗಂಟೆ 42 ನಿಮಿಷಗಳು ತೆಗೆದುಕೊಳ್ಳುತ್ತದೆ.
ಈ ಸುಜುಕಿ ಇ ಆಕ್ಸೆಸ್ ಸ್ಕೂಟರ್ ಎಲ್‌ಇಡಿ ಲೈಟಿಂಗ್ ಸೆಟಪ್, ಟಿಎಫ್‌ಟಿ ಡಿಸ್‌ಪ್ಲೇ, ಸುಜುಕಿ ರೈಡ್ ಕನೆಕ್ಟ್ ಇ-ಆ್ಯಪ್, ನ್ಯಾವಿಗೇಷನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇಕೋ, ರೈಡ್ ಎ & ರೈಡ್ ಬಿ ಎಂಬ ರೈಡಿಂಗ್ ಮೋಡ್‌ಗಳನ್ನು ಪಡೆದಿದೆ. ಟ್ಯೂಬ್‌ಲೆಸ್ ಟೈರ್‌ಗಳನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications