226 ಕಿ.ಮೀ ಮೈಲೇಜ್.. ಶೀಘ್ರದಲ್ಲೇ ವಿಶ್ವದ ಮೊದಲ TVS Jupiter CNG ಸ್ಕೂಟರ್ ಬಿಡುಗಡೆ.. ಬೆಲೆ ಎಷ್ಟು, ಹೇಗಿರಲಿದೆ?
ಭಾರತದ ಮಾರುಕಟ್ಟೆಯಲ್ಲಿ ಟಿವಿಎಸ್ ಮೋಟಾರ್ (TVS Motor), ತನ್ನ ಮೊಟ್ಟ ಮೊದಲ ಸಿಎನ್‌ಜಿ ಸ್ಕೂಟರ್‌ನ್ನು (CNG Scooter) ಅದ್ದೂರಿಯಾಗಿ ಬಿಡುಗಡೆಗೊಳಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸದ್ಯ, 'ಬಜಾಜ್' ಕಂಪನಿಯು 'ಫ್ರೀಡಂ 125' ಸಿಎನ್‌ಜಿ ಮೋಟಾರ್‌ಸೈಕಲ್‌ನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಕೆಲವೇ ತಿಂಗಳಲ್ಲಿ 'ಟಿವಿಎಸ್' ಕೂಡ ದೇಶೀಯ ಸಿಎನ್‌ಜಿ ದ್ವಿಚಕ್ರ ವಾಹನ ವಿಭಾಗವನ್ನು ಪ್ರವೇಶಿಸುವ 2ನೇ ಕಂಪನಿಯಾಗಿಯೂ ಹೊರಹೊಮ್ಮಲಿದೆ. ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ನೂತನ 'ಜೂಪಿಟರ್ ಸಿಎನ್‌ಜಿ' ಮಾಡೆಲ್‌ನ್ನು ಪ್ರದರ್ಶಿಸಲಾಗಿತ್ತು. ಇದು ವಿಶ್ವದ ಮೊದಲ ಸಿಎನ್‌ಜಿ ಚಾಲಿತ ಸ್ಕೂಟರ್ ಎಂಬ ಹಿರಿಮೆಗೂ ಪಾತ್ರವಾಗಿದೆ.
ಎಲ್ಲವು ಅಂದುಕೊಂಡಂತೆ ನಡೆದರೆ, ಹೊಚ್ಚ ಹೊಸ ಟಿವಿಎಸ್ ಜೂಪಿಟರ್ ಸಿಎನ್‌ಜಿ (TVS Jupiter CNG) ಸ್ಕೂಟರ್, ಈ ವರ್ಷದ ದ್ವಿತೀಯಾರ್ಧದಲ್ಲಿ ಮಾರಾಟಕ್ಕೆ ಬರಲಿದೆ. ನೂತನ ಜೂಪಿಟರ್ ಸಿಎನ್‌ಜಿ ಸ್ಕೂಟರ್ ವಿನ್ಯಾಸದಲ್ಲೂ ಅಷ್ಟಾಗಿಯೂ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇದು ಸಾಮಾನ್ಯ ಜೂಪಿಟರ್ ಮಾಡೆಲ್‌ಗೆ ಹೋಲಿಕೆಯಾಗಲಿದೆ. ಹೆಚ್ಚುವರಿಯಾಗಿ 'ಸಿಎನ್‌ಜಿ' ಬ್ಯಾಡ್ಜಿಂಗ್‌ನ್ನು ಒಳಗೊಂಡಿಡೆ.

ನೂತನ ಟಿವಿಎಸ್ ಜೂಪಿಟರ್ ಸಿಎನ್‌ಜಿ ಸ್ಕೂಟರ್ ಅತಿ ಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಾಗಲಿದ್ದು, ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಕೊಂಡುಕೊಳ್ಳಬಹುದು ಇದು ರೂ.90 ಸಾವಿರದಿಂದ ರೂ.1 ಲಕ್ಷ (ಎಕ್ಸ್-ಶೋರೂಂ) ದರದಲ್ಲೂ ಮಾರಾಟಕ್ಕೆ ಬರುವ ಸಾಧ್ಯತೆಯಿದೆ.
ಹೊಸ ಟಿವಿಎಸ್ ಜೂಪಿಟರ್ ಸಿಎನ್‌ಜಿ ಸ್ಕೂಟರ್, ಕೊಂಚ ಮಟ್ಟಿಗೆ ದೊಡ್ಡ ಗಾತ್ರದ 2 ಲೀಟರ್‌ನ ಪೆಟ್ರೋಲ್ ಮತ್ತು 1.4 ಕೆಜಿಯ ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದುಕೊಂಡಿದೆ. ಸೀಟ್‌ನ ಕೆಲಭಾಗದಲ್ಲಿ ಸಿಎನ್‌ಜಿ ಟ್ಯಾಂಕ್ ಇದ್ದರೆ, ಫ್ಲೋರ್ ಬೋರ್ಡ್‌ನಲ್ಲಿ ಪೆಟ್ರೋಲ್ ಟ್ಯಾಂಕ್‌ನ್ನು ಇರಿಸಲಾಗಿದೆ.

ಈ ಸಿಎನ್‌ಜಿ ಸ್ಕೂಟರ್ ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದು 124.8 ಸಿಸಿ ಸಾಮರ್ಥ್ಯದ ಸಿಂಗಲ್-ಸಿಲಿಂಡರ್ ಎಂಜಿನ್‌ನ್ನು ಒಳಗೊಂಡಿದೆ. 7.1 ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.4 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ. 226 ಕಿಲೋಮೀಟರ್ ಮೈಲೇಜ್ ಕೊಡುತ್ತದೆ. 80.5 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.
ನೂತನ ಟಿವಿಎಸ್ ಜೂಪಿಟರ್ ಸಿಎನ್‌ಜಿ ಸ್ಕೂಟರ್, ಸಾಮಾನ್ಯ ಪೆಟ್ರೋಲ್ ಚಾಲಿತ ಜೂಪಿಟರ್ ಮಾಡೆಲ್‌ನಂತೆ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ ಸೆಮಿ - ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್ ಸ್ಟ್ಯಾಂಡ್ ಇಂಡಿಕೇಟರ್, ಎಲ್‌ಇಡಿ ಹೆಡ್‌ಲ್ಯಾಂಪ್, ಯುಎಸ್‌ಬಿ ಚಾರ್ಜರ್ ಹಾಗೂ ಟಿವಿಎಸ್ ಕನೆಕ್ಟ್ ಅಪ್ಲಿಕೇಶನ್‌ನ್ನು ಹೊಂದಿದೆ.

ಇನ್ನು, ಹೊಚ್ಚ ಹೊಸ ಟಿವಿಎಸ್ ಜೂಪಿಟರ್ ಸಿಎನ್‌ಜಿ ಸ್ಕೂಟರ್ ಬಿಡುಗಡೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಇದು ಹೆಚ್ಚು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದ್ದು, ಈ ಸ್ಕೂಟರ್ ಮಾರಾಟಕ್ಕೆ ಬಂದ ಮೇಲೆ ದೇಶೀಯ ಗ್ರಾಹಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








