TVS Jupiter Electric: ಅತಿ ಶೀಘ್ರದಲ್ಲೇ ಟಿವಿಎಸ್ ಜುಪಿಟರ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ.. ಬೆಲೆಗೂ ಅಗ್ಗ?

ಟಿವಿಎಸ್ ಜುಪಿಟರ್ (TVS Jupiter) ಪ್ರಮುಖ ಸ್ಕೂಟರ್ ಆಗಿ ಹೊರಹೊಮ್ಮಿದೆ. ಹೋಂಡಾ ಆಕ್ಟಿವಾಗೆ ಪ್ರಬಲವಾಗಿ ಸ್ಪರ್ಧೆಯೊಡ್ಡುತ್ತಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಕೆಲವೇ ದಿನಗಳಲ್ಲಿ ಜುಪಿಟರ್ ಸಿಎನ್‌ಜಿ (Jupiter CNG) ಮಾಡೆಲ್ ಕೂಡ ಬಿಡುಗಡೆಯಾಗಲಿದೆ. ಸದ್ಯ ಕಂಪನಿಯು ಹೊಚ್ಚ ಹೊಸ 'ಜುಪಿಟರ್' ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮಾರಾಟಕ್ಕೆ ತರಲು ಎಲ್ಲ ರೀತಿಯ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಮೋಟಾರ್, ಐಕ್ಯೂಬ್ (iQube) ಹಾಗೂ ಎಕ್ಸ್ (X) ಹೆಸರಿನ ಎರಡು ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಾಟಗೊಳಿಸುತ್ತಿದೆ. ಅದರಲ್ಲೂ 'ಐಕ್ಯೂಬ್' ಗೇಮ್ ಚೇಂಜರ್ ಸ್ಕೂಟರ್ ಆಗಿದ್ದು, ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ.

TVS Jupiter Electric Scooter Expected Launch Soon Details

ಆದರೀಗ ಟಿವಿಎಸ್ ಮೋಟಾರ್ ಕಂಪನಿಯು ಮತ್ತಷ್ಟು ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಮಾರಾಟಗೊಳಿಸಲು ಉದ್ದೇಶಿಸಿದೆ. ಹೀಗಾಗಿ ಹೆಚ್ಚು ಜನಜನಿತವಾದವಾಗಿರುವ 'ಜುಪಿಟರ್'ನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸಲು ಯೋಜಿಸಿದೆ. ಇದು ರೂ.1.2 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ಆದರೆ, ನೂತನ 'ಜುಪಿಟರ್' ಎಲೆಕ್ಟ್ರಿಕ್ ಸ್ಕೂಟರ್‌ನ್ನು ಪರಿಚಯಿಸುವ ಬಗ್ಗೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

ಒಂದೆರಡು ತಿಂಗಳಲ್ಲಿ 'ಟಿವಿಎಸ್ ಜುಪಿಟರ್' ಸಿಎನ್‌ಜಿ ಸ್ಕೂಟರ್ ಬಿಡುಗಡೆ..

ಈ ಸ್ಕೂಟರ್ ಹಬ್ಬದ ಋತುವಿನಲ್ಲಿ ಅಂದರೆ ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ, ರೂ.90,000 ರಿಂದ ರೂ.1 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಬಿಡುಗಡೆಯಾಗಬಹುದು ಎಂದು ಹೇಳಲಾಗಿದೆ. ಇದು 2 ಲೀಟರ್‌ನ ಪೆಟ್ರೋಲ್ ಹಾಗೂ 1.4 ಕೆಜಿ ಸಾಮರ್ಥ್ಯದ ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

TVS Jupiter Electric Scooter Expected Launch Soon Details

ಹಾಗೆಯೇ ನೂತನ ಸಿಎನ್‌ಜಿ ಸ್ಕೂಟರ್, ಹೆಚ್ಚು ಬಲಿಷ್ಠವಾದ 124.8 ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್‌ನ್ನು ಪಡೆದಿದೆ. 226 ಕಿಲೋಮೀಟರ್ ಮೈಲೇಜ್ ನೀಡುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್ ಸ್ಟ್ಯಾಂಡ್ ಇಂಡಿಕೇಟರ್, ಎಲ್‌ಇಡಿ ಹೆಡ್‌ಲ್ಯಾಂಪ್, ಯುಎಸ್‌ಬಿ ಚಾರ್ಜರ್ ಮತ್ತು ಟಿವಿಎಸ್ ಕನೆಕ್ಟ್ ಅಪ್ಲಿಕೇಶನ್‌ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

'ಟಿವಿಎಸ್ ಜುಪಿಟರ್' ಎರಡು ವಿಧದಲ್ಲಿ ಖರೀದಿಗೆ ಲಭ್ಯ..

ಹೊಸ 'ಜುಪಿಟರ್ 125 ' ಮಾಡೆಲ್, ರೂ.89,000 ರಿಂದ ರೂ.1 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ಇದು 124 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 57 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ & ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

TVS Jupiter Electric Scooter Expected Launch Soon Details

ನೂತನ ಜುಪಿಟರ್ 110 ಮಾಡೆಲ್, ರೂ.81,000 ರಿಂದ 93,000 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 113 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ & ಯುಎಸ್‌‍ಬಿ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, June 9, 2025, 13:00 [IST]
English summary
Tvs jupiter electric scooter expected launch soon details
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+