50 Km ಮೈಲೇಜ್.. ರೂ.78,000, ಆಕ್ಟಿವಾ ಎದುರಾಳಿ ಟಿವಿಎಸ್ ಜುಪಿಟರ್‌ನ ಅಬ್ಬರದ ಮಾರಾಟ: ನಂ.1 ಸ್ಕೂಟರ್ ಆಗುತ್ತಾ?

ಟಿವಿಎಸ್ ಜುಪಿಟರ್ (TVS Jupiter) ಜನಪ್ರಿಯ ಸ್ಕೂಟರ್ ಆಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ ಬಹುತೇಕ ಎಲ್ಲ ದ್ವಿಚಕ್ರ ವಾಹನ ತಯಾರಕ ಕಂಪನಿಗಳು, ಈ ಫೆಬ್ರವರಿ ತಿಂಗಳ ಪ್ರಮುಖ ಬೈಕ್ ಹಾಗೂ ಸ್ಕೂಟರ್‌ಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ಅದರಲ್ಲೂ 'ಜುಪಿಟರ್‌' ಸ್ಕೂಟರ್ ಸ್ಥಾನ ಪಡೆದಿದ್ದು, 'ಹೋಂಡಾ ಆಕ್ಟಿವಾ'ಗೆ ಪ್ರಬಲ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮುತ್ತಿದೆ.

ಕಳೆದ ತಿಂಗಳು (ಫೆಬ್ರವರಿ-2025) ಟಿವಿಎಸ್ ಮೋಟಾರ್ (TVS Motor), 1,03,576 ಯುನಿಟ್ 'ಜುಪಿಟರ್‌' ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 73,860 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 40.23% ಬೆಳವಣಿಗೆಯನ್ನು ಸಾಧಿಸಲಾಗಿದೆ.

Honda Activa Rival Tvs Jupiter February 2025 Sales Report Details

ದೇಶೀಯವಾಗಿಯೂ 'ಟಿವಿಎಸ್ ಜುಪಿಟರ್' ಸ್ಕೂಟರ್ ವರ್ಷಗಳಿಂದ ಪಾರುಪತ್ಯ ಮೆರೆಯುತ್ತಿದೆ. 2013ರ ಸೆಪ್ಟೆಂಬರ್‌ನಲ್ಲಿ ಮೊದಲ ಜುಪಿಟರ್‌ನ್ನು ಬಿಡುಗಡೆಗೊಳಿಸಲಾಗಿತ್ತು. ಅಂದಿನಿಂದ ಇಲ್ಲಿವರೆಗೆ ಈ ಸ್ಕೂಟರ್‌ಗೆ ಭಾರೀ ಬೇಡಿಕೆಯಿದ್ದು, ಜನವರಿವರೆಗೆ 70 ಲಕ್ಷ ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. 2022 ರವರೆಗೆ 50 ಲಕ್ಷ ಯುನಿಟ್ ಜುಪಿಟರ್ ಸ್ಕೂಟರ್‌ಗಳನ್ನು ಮಾರಾಟಗೊಳಿಸಲಾಗಿತ್ತು.

ಟಿವಿಎಸ್ ಜುಪಿಟರ್‌ಗೆ 'ಹೋಂಡಾ ಆಕ್ಟಿವಾ' ನೇರ ಎದುರಾಳಿಯಾಗಿದೆ. ಆದರೆ, ಹೋದ ತಿಂಗಳು ಈ ಸ್ಕೂಟರ್ ಮಾರಾಟ ಪ್ರಮಾಣ ಒಂದಷ್ಟು ಮಟ್ಟಿಗೆ ಕುಸಿತವಾಗಿದೆ. ಈ ಫೆಬ್ರವರಿಯಲ್ಲಿ 1,74,009 ಯುನಿಟ್ ಆಕ್ಟಿವಾಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 2,00,134 ಯುನಿಟ್‌ಗಳನ್ನು ಮಾರಲಾಗಿತ್ತು. ಅದಕ್ಕೆ ಹೋಲಿಸಿದರೆ ಶೇಕಡ -13.05% ಇಳಿಕೆಯಾಗಿದೆ.

Honda Activa Rival Tvs Jupiter February 2025 Sales Report Details

ಹೊಸ ಟಿವಿಎಸ್ ಜುಪಿಟರ್‌ ಎರಡು ವಿಧದಲ್ಲಿ ಖರೀದಿಗೆ ಲಭ್ಯ..

ಟಿವಿಎಸ್ ಜುಪಿಟರ್‌ 125: ಈ ಸ್ಕೂಟರ್ ರೂ.88174 ರಿಂದ ರೂ.99015 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 124.8 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, ಸರಾಸರಿ 50 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ ಹಾಗೂ ಟರ್ನ್-ಬೈ-ಟರ್ನ್ ನ್ಯಾವಿಗೇಶನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಿವಿಎಸ್ ಜುಪಿಟರ್ 110: ಇದು ರೂ.78,391 ರಿಂದ ರೂ.92,366 (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ಸಿಗುತ್ತದೆ. 113 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, ಸರಾಸರಿ 53.84 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದುಕೊಂಡಿದೆ.

ಈ ವರ್ಷವೇ ಟಿವಿಎಸ್ ಜೂಪಿಟರ್ ಸಿಎನ್‌ಜಿ ಮಾರಾಟಕ್ಕೆ: ಈ ಸ್ಕೂಟರ್ ರೂ.1 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರಲಿದ್ದು, ಅಕ್ಟೋಬರ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಇದು 124.8 ಸಿಸಿ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಹೊಂದಿದ್ದು, 226 ಕಿ.ಮೀ ಮೈಲೇಜ್ ಕೊಡಲಿದೆ. 80.5 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಎಲ್‌ಇಡಿ ಹೆಡ್‌ಲೈಟ್, ಮೊಬೈಲ್ ಚಾರ್ಜಿಂಗ್ ಪೋರ್ಟ್ ಹಾಗೂ ಸೈಡ್ ಸ್ಟ್ಯಾಂಡ್ ಇಂಡಿಕೇಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, March 20, 2025, 13:02 [IST]
English summary
Tvs jupiter february 2025 sales report details
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+