TVS: ಟಿವಿಎಸ್ ಜುಪಿಟರ್‌ಗಾಗಿ ಕ್ಯೂ ನಿಂತ ಗ್ರಾಹಕರು.. 57.27 ಕಿ.ಮೀ ಮೈಲೇಜ್.. ರೂ.78,391 ಆರಂಭಿಕ ಬೆಲೆ!

ಟಿವಿಎಸ್ ಮೋಟಾರ್ (TVS Motor) ನಂಬಿಕೆಗೆ ಹೆಸರುವಾಸಿಯಾಗಿರುವ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯವಾಗಿ ಕಂಪನಿಯು ಮಾರಾಟಗೊಳಿಸುವ ಜುಪಿಟರ್ (Jupiter) ಗೇಮ್ ಚೇಂಜರ್ ಸ್ಕೂಟರ್ ಆಗಿ ಹೊರಹೊಮ್ಮಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ, ಬಹುತೇಕ ಎಲ್ಲ ದ್ವಿಚಕ್ರ ವಾಹನಗಳ ಮಾರಾಟದ ಅಂಕಿಅಂಶಗಳ ವರದಿಯೂ ಪ್ರಕಟಗೊಂಡಿದೆ. ಅದರಲ್ಲೂ ಜುಪಿಟರ್ ಸ್ಕೂಟರ್‌ಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಕಳೆದ ತಿಂಗಳು (ಜನವರಿ - 2025) ಟಿವಿಎಸ್ ಮೋಟಾರ್, ಸರಿ ಸುಮಾರು 1,07,847 ಯುನಿಟ್ ಜುಪಿಟರ್ ಸ್ಕೂಟರ್‌ಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 74,225 ಯುನಿಟ್‌ಗಳಿಗೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 45.30% ಪ್ರಗತಿ ಸಾಧಿಸಲಾಗಿದೆ.

Tvs Jupiter Sales In January 2025 Good Growth Details

ದೇಶೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಜುಪಿಟರ್ (TVS Jupiter) ಎರಡು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಅವುಗಳೆಂದರೆ, ಜುಪಿಟರ್ 110 ಹಾಗೂ ಜುಪಿಟರ್ ಜುಪಿಟರ್ 125. ನೂತನ ಜುಪಿಟರ್ 110 ಸ್ಕೂಟರ್ ರೂ.78,391 ರಿಂದ ರೂ.90,691 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 113 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ.

ಈ ಟಿವಿಎಸ್ ಜುಪಿಟರ್ 110 ಸ್ಕೂಟರ್, 48 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಇಂಟಲಿಜೆಂಟ್ ಸ್ಟಾರ್ಟ್/ ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್, ಡಿಜಿಟಲ್ - ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಮತ್ತು ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Tvs Jupiter Sales In January 2025 Good Growth Details

ನೂತನ ಜುಪಿಟರ್ 110 ಸ್ಕೂಟರ್ ಡ್ರಮ್, ಡ್ರಮ್ ಅಲಾಯ್, ಡ್ರಮ್ ಎಸ್‌ಎಕ್ಸ್‌ಸಿ ಮತ್ತು ಡಿಸ್ಕ್ ಎಸ್‌ಎಕ್ಸ್‌ಸಿ ಎಂಬ 4 ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್, ಹಿಂಭಾಗ (ರೇರ್) ಗ್ಯಾಸ್ ಫೀಲ್ಡ್ ಡ್ಯಾಂಪರ್ ಸಸ್ಪೆನ್ಷನ್ ಆಯ್ಕೆಯನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ನ್ನು ತನ್ನದಾಗಿಸಿಕೊಂಡಿದೆ.

ಟಿವಿಎಸ್ ಜುಪಿಟರ್ 125 ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ರೂ.89 396 ಆರಂಭಿಕ ಬೆಲೆಯನ್ನು ಹೊಂದಿದೆ. 124.8 ಸಿಸಿ ಸಿಂಗಲ್- ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 8.2 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 57.27 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಈ ಟಿವಿಎಸ್ ಜುಪಿಟರ್ 125 ಸ್ಕೂಟರ್ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್, ಫುಲ್- ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಶನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸವಾರರ ಸುರಕ್ಷತೆಯ ದೃಷ್ಟಿಯಿಂದ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. 33-ಲೀ. ಅಂಡರ್ ಸೀಟ್ ಸ್ಟೋರೇಜ್ ಅನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, February 20, 2025, 22:31 [IST]
English summary
Tvs jupiter sales in january 2025 good growth details
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+