ಹೋಂಡಾ ಆಕ್ಟಿವಾ ಪ್ರತಿಸ್ಪರ್ಧಿ.. ಟಿವಿಎಸ್ ಜುಪಿಟರ್ ಮಾರಾಟದಲ್ಲಿ ದೊಡ್ಡ ದಾಖಲೆ.. ಏನದು?
ಟಿವಿಎಸ್ ಮೋಟಾರ್ (TVS Motor) ವಿಶ್ವಾಸಾರ್ಹತೆಗೆ ಹೆಸರುವಾಸಿಯಾಗಿರುವ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಬೈಕ್ ಹಾಗೂ ಸ್ಕೂಟರ್‌ಗಳು ಆಕರ್ಷಕವಾದ ವಿನ್ಯಾಸವನ್ನು ಹೊಂದಿವೆ. ಈ ಕಾರಣಕ್ಕೆ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ಸದ್ಯ, ಟಿವಿಎಸ್ ಕಂಪನಿಯು ಜುಪಿಟರ್ (Jupiter) ಸ್ಕೂಟರ್ ಮಾರಾಟದಲ್ಲಿ ಹೊಸ ಇತಿಹಾಸವನ್ನು ಬರೆದಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಭಾರತದ ಮಾರುಕಟ್ಟೆಯಲ್ಲಿ ಟಿವಿಎಸ್ ಮೋಟಾರ್, 2013ರ ಸೆಪ್ಟೆಂಬರ್ ತಿಂಗಳಲ್ಲಿ ಹೊಚ್ಚ ಹೊಸ 'ಜುಪಿಟರ್' ಸ್ಕೂಟರ್‌ನ್ನು ಬಿಡುಗಡೆಗೊಳಿಸಿತ್ತು. ಹೋಂಡಾ ಆಕ್ಟಿವಾಗೆ ಪ್ರಬಲವಾದ ಪ್ರತಿಸ್ಪರ್ಧಿಯಾಗಿದ್ದ ಈ ಸ್ಕೂಟರ್‌ಗೆ ಮಾರಾಟಕ್ಕೆ ಬಂದ ದಿನದಿಂದಲೇ ಗ್ರಾಹಕರಿಂದ ಕೂಡ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಪ್ರಸ್ತುತ 70 ಲಕ್ಷ ಯುನಿಟ್ ಮಾರಾಟ ಮೈಲಿಗಲ್ಲನ್ನು ಮುಟ್ಟಲಾಗಿದೆ.

ನೂತನ ಟಿವಿಎಸ್ ಜುಪಿಟರ್ (TVS Jupiter) ಸ್ಕೂಟರ್‌ನ್ನು ಪರಿಚಯಿಸಲಾದ ಎರಡು ವರ್ಷಗಳಲ್ಲಿ ಅಂದರೆ 2015ರ ಮೇ ವರೆಗೆ 5 ಲಕ್ಷ ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. 2016ರ ಜೂನ್ ತಿಂಗಳವರೆಗೆ 10 ಲಕ್ಷ ಯುನಿಟ್ ಸ್ಕೂಟರ್‌ಗಳನ್ನು ಮಾರಲಾಗಿತ್ತು. 2017ರಲ್ಲಿ 20 ಲಕ್ಷ ಯುನಿಟ್ ಹಾಗೂ 2022 ರವರೆಗೆ 50 ಲಕ್ಷ ಯುನಿಟ್ ಜುಪಿಟರ್ ಸ್ಕೂಟರ್‌ಗಳನ್ನು ಕಂಪನಿಯು ಯಶಸ್ವಿಯಾಗಿ ಮಾರಾಟ ಮಾಡಿತ್ತು.
ದೇಶೀಯ ಗ್ರಾಹಕರ ಖರೀದಿಗೆ 'ಟಿವಿಎಸ್ ಜುಪಿಟರ್' ಎರಡು ರೂಪದಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಜುಪಿಟರ್ 125 ಮಾಡೆಲ್, ಕನಿಷ್ಠ ರೂ.89,396 ಹಾಗೂ ಗರಿಷ್ಠ ರೂ.99,805 ಎಕ್ಸ್ ಶೋರೂಂ ದರವನ್ನು ಪಡೆದಿದೆ. 124.8 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 57.27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ನೂತನ ಟಿವಿಎಸ್ ಜುಪಿಟರ್ 125 ಸ್ಕೂಟರ್ ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಸಾಕೆಟ್, ಟರ್ನ್-ಬೈ-ಟರ್ನ್ ನ್ಯಾವಿಗೇಶನ್ ಹಾಗೂ ವಾಯ್ಸ್ ಅಸಿಸ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು 108 ಕೆಜಿ ತೂಕವಿದ್ದು, 5.1 ಲೀ. ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. ಸವಾರರ ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಟಿವಿಎಸ್ ಜುಪಿಟರ್ 110 (TVS Jupiter 110) ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ರೂ.78,391 ದಿಂದ ರೂ.90,691 (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. 113 ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 53.84 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಡ್ರಮ್, ಡ್ರಮ್ ಅಲಾಯ್, ಡ್ರಮ್ ಎಸ್‌ಎಕ್ಸ್‌ಸಿ & ಡಿಸ್ಕ್ ಎಸ್‌ಎಕ್ಸ್‌ಸಿ ಎಂಬ 4 ವೇರಿಯೆಂಟ್‌ಗಳನ್ನು ಪಡೆದಿದೆ.

ಹೊಸ ಟಿವಿಎಸ್ ಜುಪಿಟರ್ 110 ಸ್ಕೂಟರ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 33-ಲೀಟರ್ ಸಾಮರ್ಥ್ಯದ ಅಂಡರ್-ಸೀಟ್ ಸೋರೇಜ್ ಅನ್ನು ಪಡೆದಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) 220 ಎಂಎಂ ಪೆಟಲ್ ಡಿಸ್ಕ್ ಹಾಗೂ ಹಿಂಭಾಗ (ರೇರ್) 130 ಎಂಎಂ ಡ್ರಮ್ ಬ್ರೇಕ್‌ನ್ನು ತನ್ನದಾಗಿಸಿಕೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








