TVS: ನಾಳೆ ಹೊಚ್ಚ ಹೊಸ ಎಲೆಕ್ಟ್ರಿಕ್ ಟಿವಿಎಸ್ ಜುಪಿಟರ್ & ಸಿಎನ್‌ಜಿ ಸ್ಕೂಟರ್ ಪರಿಚಯ?

ಟಿವಿಎಸ್ ಮೋಟಾರ್ (TVS Motor) ವಿಶ್ವಾಸಾರ್ಹತೆಗೆ ಹೆಸರುವಾಸಿಯಾಗಿರುವ ದ್ವಿಚಕ್ರ ವಾಹನ (Two Wheelers) ತಯಾರಕ ಕಂಪನಿಯಾಗಿದೆ. ಭಾರತದ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಬೈಕ್ ಹಾಗೂ ಸ್ಕೂಟರ್‌ಗಳು ಹೆಚ್ಚು ಜನಪ್ರಿಯತೆ ಗಳಿಸಿವೆ. ನಾಳೆ (ಜ.17) ನವದೆಹಲಿಯ ಭಾರತ ಮಂಟಪದಲ್ಲಿ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ (Bharat Mobility global Expo) ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಈ ಸಮಾರಂಭದಲ್ಲಿ ಕಂಪನಿಯು ವಿವಿಧ ನೂತನ ಸ್ಕೂಟರ್‌ಗಳನ್ನು ಪ್ರದರ್ಶಿಸಲು ಸಿದ್ದವಾಗಿದೆ ಎಂದು ವರದಿಯಾಗಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಮೋಟಾರ್, ಐಕ್ಯೂಬ್ (iQube) ಎಲೆಕ್ಟ್ರಿಕ್ ಸ್ಕೂಟರ್‌ನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಇದರೊಟ್ಟಿಗೆ ಅತಿ ಶೀಘ್ರದಲ್ಲಿಯೇ ಹೊಚ್ಚ ಹೊಸ ಜುಪಿಟರ್ ಇ-ಸ್ಕೂಟರ್‌ನ್ನು ಮಾರಾಟಕ್ಕೆ ತರಲಿದೆ ಎನ್ನಲಾಗಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಈ 'ಜುಪಿಟರ್ ಇವಿ' ನಾಳಿನ ಕಾರ್ಯಕ್ರಮದಲ್ಲಿ ಅನಾವರಣಗೊಳ್ಳಲಿದೆ. ಆದರೆ, ಈ ಕುರಿತಂತೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

TVS May-Be Unveil Jupiter Ev And CNG Scooter At Auto Expo 2025 Details

2024ರ ಆಗಸ್ಟ್ ತಿಂಗಳಲ್ಲಿ ಟಿವಿಎಸ್ ಕಂಪನಿಯು ನವೀಕರಿಸಿದ ಜುಪಿಟರ್ 110 (Jupiter 110) ಸ್ಕೂಟರ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಈ ಸ್ಕೂಟರ್‌ನ್ನು ಇವಿಗಳಿಗೆ ಬಳಸುವ 'ಪ್ಲಾಟ್‌ಫಾರಂ' ಆಧರಿಸಿಯೇ ಸಿದ್ಧಪಡಿಸಲಾಗಿತ್ತು. ಫ್ಯುಯೆಲ್ ಟ್ಯಾಂಕ್‌ನ್ನು ಫ್ಲೋರ್‌ಬೋರ್ಡ್‌ನಲ್ಲಿ ಅಳವಡಿಕೆ ಮಾಡಲಾಗಿತ್ತು. ಅದೇ ಜಾಗದಲ್ಲಿ ಬ್ಯಾಟರಿಗಳನ್ನು ಸುಲಭವಾಗಿಯೂ ಇರಿಸಬಹುದು. ಈ ಹಿನ್ನೆಲೆ, ಜುಪಿಟರ್ ಕೂಡ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಬಹುದು ಎನ್ನಲಾಗಿದೆ.

ಟಿವಿಎಸ್ ಮೋಟಾರ್, ಸಿಎನ್‌ಜಿ ಚಾಲಿತ ಬೈಕ್ ಅಥವಾ ಸ್ಕೂಟರ್‌ವೊಂದನ್ನು ಅಭಿವೃದ್ಧಿಪಡಿಸುತ್ತಿದೆ ಎಂಬುದು ಸಹ ಮೂಲಗಳಿಂದ ತಿಳಿದುಬಂದಿದೆ. ಈಗಾಗಲೇ ಬಜಾಜ್ ಕಂಪನಿ ಫ್ರೀಡಂ (Freedom) ಹೆಸರಿನ ಸಿಎನ್‌ಜಿ ಮೋಟಾರ್‌ಸೈಕಲ್‌ನ್ನು ಮಾರಾಟಕ್ಕೆ ತಂದಿದೆ. ಇದರಿಂದಾಗಿ ಟಿವಿಎಸ್, ಈ ಟೆಕ್ನಾಲಜಿಯನ್ನು ನೂತನ ಸ್ಕೂಟರ್‌ನಲ್ಲಿ ಬಳಕೆ ಮಾಡಬಹುದು. ಅದನ್ನು ನಾಳಿನ ಸಮಾರಂಭದಲ್ಲಿ ಪ್ರದರ್ಶನವು ಮಾಡಬಹುದು ಎಂದು ಹೇಳಲಾಗಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಟಿವಿಎಸ್ ಜುಪಿಟರ್ (TVS Jupiter) ಎರಡು ವಿಧದಲ್ಲಿ ಖರೀದಿಗೆ ದೊರೆಯುತ್ತದೆ. ಇದರ ಜುಪಿಟರ್ 125 ಮಾಡೆಲ್, ರೂ.89,396 ರಿಂದ ರೂ.99,805 ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 124.8 ಪೆಟ್ರೋಲ್ ಎಂಜಿನ್ ಹೊಂದಿದ್ದು, 57.27 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಟಿವಿಎಸ್ ಜುಪಿಟರ್ 110 ಮಾಡೆಲ್ ಕುರಿತಂತೆ ಹೇಳುವುದಾದರೆ, ಇದು ರೂ.78,391 ದಿಂದ ರೂ.90,691 ಎಕ್ಸ್ ಶೋರೂಂ ದರವನ್ನು ಹೊಂದಿದೆ. 113 ಸಿಸಿ ಸಾಮರ್ಥ್ಯದ ಎಂಜಿನ್ ಒಳಗೊಂಡಿದ್ದು, 53.84 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟಿವಿಎಸ್ ಐಕ್ಯೂಬ್ ಬಗ್ಗೆ ಮಾತನಾಡುವುದಾದರೆ, ಈ ಎಲೆಕ್ಟ್ರಿಕ್ ಸ್ಕೂಟರ್, ಕನಿಷ್ಠ ರೂ.1.07 ಲಕ್ಷ ಹಾಗೂ ಗರಿಷ್ಠ ರೂ.1.37 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್), 3.04 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 5.1 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 75 ರಿಂದ 150 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, January 16, 2025, 14:22 [IST]
English summary
Tvs may be unveil jupiter ev and cng scooter at auto expo 2025 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+