ಬಜಾಜ್, ಓಲಾಗೆ ಶುರುವಾಯ್ತು ನಡುಕ.. ಭಾರೀ ಬೇಡಿಕೆ, ಟಿವಿಎಸ್ ಐಕ್ಯೂಬ್ ಸ್ಕೂಟರ್‌ಗೆ ಮನಸೋತ ಗ್ರಾಹಕರು!
ಟಿವಿಎಸ್ ಮೋಟಾರ್ (TVS Motor) ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಬೈಕ್ ಹಾಗೂ ಸ್ಕೂಟರ್‌ಗಳು ಹೆಚ್ಚು ಆಕರ್ಷಕವಾಗಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ಇತ್ತೀಚೆಗೆ ಟಿವಿಎಸ್ ಫೆಬ್ರವರಿ ತಿಂಗಳ ಒಟ್ಟಾರೆ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ಬರೋಬ್ಬರಿ 403,976 ಯುನಿಟ್ ವಾಹನಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 368,424 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 10% ಬೆಳವಣಿಗೆ ಸಾಧಿಸಿದೆ.
ದೇಶೀಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿಯೂ ಟಿವಿಎಸ್ ಹೊಸ ಇತಿಹಾಸ ಬರೆದಿದೆ. ಕಳೆದ ತಿಂಗಳು (ಫೆಬ್ರವರಿ - 2025) ಬರೋಬ್ಬರಿ 24,017 ಯುನಿಟ್ ದ್ವಿಚಕ್ರ ವಾಹನಗಳನ್ನು ಯಶಸ್ವಿಯಾಗಿ ಮಾರಾಟ ಮಾಡಿದೆ. 2024 ಫೆಬ್ರವರಿಯಲ್ಲಿ ಮಾರಾಟಗೊಳಿಸಿದ 17,959 ಯುನಿಟ್‌ಗಳಿಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 34% ಬೆಳವಣಿಗೆ ಸಾಧಿಸಿದೆ.

ಟಿವಿಎಸ್ ಈ ಪರಿಪ್ರಮಾಣದಲ್ಲಿ ಯಶಸ್ಸು ಕಾಣಲು ಐಕ್ಯೂಬ್ (iQube) ಎಲೆಕ್ಟ್ರಿಕ್ ಸ್ಕೂಟರ್ ಬಹುಮುಖ್ಯ ಕಾರಣವಾಗಿದೆ. ಇದು ರೂ.1.07 ಲಕ್ಷದಿಂದ ರೂ.1.37 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಒಳಗೊಂಡಿದೆ. 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 3.04 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 5.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 75 ರಿಂದ 150 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.
ನೂತನ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್, 75 ರಿಂದ 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 7-ಇಂಚಿನ ಫುಲ್ ಕಲರ್ ಟಿಎಫ್‌ಟಿ ಸ್ಕ್ರೀನ್, ವಾಯ್ಸ್ ಅಸಿಸ್ಟ್ ಅಲೆಕ್ಸಾ ಸ್ಕಿಲ್‌ಸೆಟ್, ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಡಿಜಿಟಲ್ ಡಾಕ್ಯುಮೆಂಟ್ ಸ್ಟೋರೇಜ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಟೈಟಾನಿಯಂ ಗ್ರೇ ಮ್ಯಾಟ್ ಮತ್ತು ಸ್ಟಾರ್‌ಲೈಟ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಟಿವಿಎಸ್ ಎಕ್ಸ್ (TVS X) ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಕೂಡ ಖರೀದಿಗೆ ಲಭ್ಯ: ಇದು ರೂ.2.50 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 4.44 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 140 ಕಿಲೋಮೀಟರ್ ಓಡುತ್ತದೆ.
ಈ ಟಿವಿಎಸ್ ಎಕ್ಸ್ ಇ-ಸ್ಕೂಟರ್ 105 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 2.6 ಸೆಕೆಂಡುಗಳಲ್ಲಿ 0-40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಟಿಎಫ್‌ಟಿ ಕನ್ಸೋಲ್ (10.25-ಇಂಚು), ಕ್ರೂಸ್ ಕಂಟ್ರೋಲ್, ನವ್‌ಪ್ರೊ ನ್ಯಾವಿಗೇಷನ್ & ಜಿಯೋಫೆನ್ಸಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಇನ್ನು, ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ 'ಟಿವಿಎಸ್' ಭಾರೀ ವೇಗದಲ್ಲಿ ಮುಂದುವರಿಯುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ. ಅದರಲ್ಲೂ ಐಕ್ಯೂಬ್ ಇ-ಸ್ಕೂಟರ್‌ನ್ನು ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಟಿವಿಎಸ್ ಕಂಪನಿಯು ಓಲಾ ಎಲೆಕ್ಟ್ರಿಕ್ ಹಾಗೂ ಬಜಾಜ್ ಆಟೋವನ್ನು ಹಿಂದಿಕ್ಕಿ, ಮೊದಲ ಸ್ಥಾನಕ್ಕೂ ಬಂದರೂ ಅಚ್ಚರಿಯಿಲ್ಲ ಎಂದು ಹೇಳಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








