TVS: ಬಡವರ ಬಂಡಿಯಿದು.. 83 ಕಿ.ಮೀ ಮೈಲೇಜ್, 72,000 ಬೆಲೆ.. ಈ ಟಿವಿಎಸ್ ಬೈಕ್ ಕುರಿತ ಪ್ರಮುಖಾಂಶಗಳು!

ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ (TVS Star City Plus) ಪ್ರಮುಖ ಮೋಟಾರ್‌ಸೈಕಲ್‌ ಆಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನೀವು ದಿನಬಳಕೆಗಾಗಿ ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, 'ಸ್ಟಾರ್ ಸಿಟಿ ಪ್ಲಸ್' ಅತ್ಯುತ್ತಮವಾದ ಆಯ್ಕೆಯಾಗಲಿದೆ. ನಾವಿಲ್ಲಿ, ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ & ರೂಪಾಂತರಗಳು (Price & Variants):

ನೂತನ 'ಟಿವಿಎಸ್ ಸ್ಟಾರ್ ಸಿಟಿ ಪ್ಲಸ್' ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ಕನಿಷ್ಠ ರೂ.72,200 ಹಾಗೂ ಗರಿಷ್ಠ ರೂ.74,900 (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ. ಡ್ರಮ್ (Drum) ಹಾಗೂ ಡಿಸ್ಕ್ (Disc) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.

TVS Star City Plus Bike Price Design Mileage Features And All Top Things

ವಿನ್ಯಾಸ & ಬಣ್ಣಗಳು (Design & Colors):

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌, ಇಂಡಿಕೇಟರ್‌ಗಳು, ಡುಯಲ್-ಟೋನ್ ಮಫ್ಲರ್ ಗಾರ್ಡ್ ಮತ್ತು ಟೈಲ್‌ಲೈಟ್‌ನ್ನು ಪಡೆದಿದೆ. ಬ್ಲ್ಯಾಕ್ ರೆಡ್, ಬ್ಲ್ಯಾಕ್ ಬ್ಲ್ಯೂ, ಬ್ಲ್ಯೂ ಸಿಲ್ವರ್, ಗ್ರೇ ಬ್ಲ್ಯಾಕ್ ಹಾಗೂ ಬ್ಲ್ಯಾಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಸುತ್ತಳತೆ (Dimensions):

ಈ ಬೈಕ್ ಹೆಚ್ಚು ವಿಶಾಲ ಗಾತ್ರದಲ್ಲಿದೆ. 1,984 ಮಿ.ಮೀ ಉದ್ದ, 750 ಮಿ.ಮೀ ಅಗಲ ಮತ್ತು 1,080 ಮಿ.ಮೀ ಎತ್ತರವಿದೆ. 172 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,260 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 115 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):

ಹೊಸ 'ಟಿವಿಎಸ್ ಸ್ಟಾರ್ ಸಿಟಿ ಪ್ಲಸ್' ಮೋಟಾರ್‌ಸೈಕಲ್‌, ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 109.7-ಸಿಸಿ ಸಿಂಗಲ್-ಸಿಲಿಂಡರ್, 4-ಸ್ಟೋಕ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 7,350 ಆರ್‌ಪಿಎಂನಲ್ಲಿ 8.19 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 4500 ಆರ್‌ಪಿಎಂನಲ್ಲಿ 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಇದು ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. 83 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 10 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 3.7 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ವೈಶಿಷ್ಟ್ಯಗಳು (Features):

ಈ ಬೈಕ್ ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸೀಟ್ ಎತ್ತರವು 785 ಮಿ.ಮೀ ಇದೆ. 17 - ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು ಅತ್ಯಾಧುನಿಕವಾದ ಟೈರ್‌ಗಳನ್ನು ಒಳಗೊಂಡಿದೆ.

ಸಸ್ಪೆನ್ಷನ್ ಸೆಟಪ್‌ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):

ನೂತನ 'ಟಿವಿಎಸ್ ಸ್ಟಾರ್ ಸಿಟಿ ಪ್ಲಸ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಆಯಿಲ್-ಡ್ಯಾಂಪ್ಡ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) 5 ಸ್ಟೆಪ್ ಹೈಡ್ರಾಲಿಕ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್ ಮತ್ತು ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಪ್ರತಿಸ್ಪರ್ಧಿ ಬೈಕ್‌ಗಳು (Rival Bikes):

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಹೋಂಡಾ ಸಿಡಿ 110 ಡ್ರೀಮ್, ಟಿವಿಎಸ್ ರೇಡಿಯನ್, ಹೋಂಡಾ ಲಿವೋ, ಹೀರೋ ಪ್ಯಾಶನ್ ಪ್ಲಸ್, ಹೋಂಡಾ ಶೈನ್, ಹೀರೋ ಸ್ಪ್ಲೆಂಡರ್ ಪ್ಲಸ್, ಹೀರೋ ಎಚ್‌ಎಫ್ ಡಿಲಕ್ಸ್ ಹಾಗೂ ಬಜಾಜ್ ಪ್ಲಾಟಿನಾ 110ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

Article Published On: Sunday, November 16, 2025, 14:21 [IST]
English summary
Tvs star city plus bike price design mileage features and all top things
Read more on tvs motor india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+