ಕಷ್ಟಪಟ್ಟು ದುಡಿಯುವ ಜನರಿಗೆ ಈ ಟೂ ವೀಲರ್‌ಗಳು ಸೂಪರ್.. 60,000ಕ್ಕಿಂತ ಅಗ್ಗ, 65+ ಮೈಲೇಜ್!
ಭಾರತದಲ್ಲಿ ದುಡಿಯುವ ವರ್ಗದವರು ಹೆಚ್ಚಿದ್ದು, ಹಳ್ಳಿಯಿಂದ ದಿಲ್ಲಿವರೆಗಿನ ಜನರಿಗೆ ದ್ವಿಚಕ್ರ ವಾಹನಗಳು (Two Wheelers) ತೀರಾ ಅನಿವಾರ್ಯವಾಗಿವೆ. ಆದರೆ, ಬಹುತೇಕರಿಗೆ ಹೆಚ್ಚಿನ ಹಣ ಪಾವತಿ ಮಾಡಿ, ಹೊಸ ಬೈಕ್ ಹಾಗೂ ಸ್ಕೂಟರ್‌ಗಳನ್ನು ಖರೀದಿ ಮಾಡಲು ಸಾಧ್ಯವಾಗುವುದಿಲ್ಲ. ಅಂತಹವರಿಗೆ ಟಿವಿಎಸ್ ಸ್ಪೋರ್ಟ್, ಹೀರೋ ಎಚ್‌ಎಫ್ 100 ಹಾಗೂ ಟಿವಿಎಸ್ ಎಕ್ಸ್‌ಎಲ್ 100 ಹೆಚ್ಚು ಸೂಕ್ತವಾಗಲಿವೆ. ನಾವಿಲ್ಲಿ ಇವುಗಳ ಬೆಲೆ, ಮೈಲೇಜ್ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ಮಾಹಿತಿಯನ್ನು ತಿಳಿಸಿಕೊಟ್ಟಿದ್ದೇವೆ.
ಟಿವಿಎಸ್ ಸ್ಪೋರ್ಟ್ (TVS Sport): ಇದೊಂದು ಜನಪ್ರಿಯ ಬೈಕ್ ಆಗಿದ್ದು, ರೂ.67,722 ರಿಂದ ರೂ.72,435 ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. 109.7 ಸಿಸಿ-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 8.19 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ನೂತನ ಟಿವಿಎಸ್ ಸ್ಪೋರ್ಟ್ ಮೋಟಾರ್‌ಸೈಕಲ್ 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಬಲ್ಬ್ ಟೈಪ್ ಹೆಡ್‌ಲೈಟ್, ಎಲ್‌ಇಡಿ ಡಿಆರ್‌ಎಲ್‌ಗಳು ಮತ್ತು ಸೆಲ್ಫ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 112 ಕೆಜಿ ತೂಕವಿದ್ದು, 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹೀರೋ ಎಚ್‌ಎಫ್ 100 (Hero HF 100): ಇದು ಪ್ರಖ್ಯಾತ ಬೈಕ್ ಎಂದೇ ಹೆಸರುವಾಗಿಯಾಗಿದೆ. ರೂ.49,999 ಎಕ್ಸ್-ಶೋರೂಂ ದರವನ್ನು ಹೊಂದಿದೆ. 97.2 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8.02 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

ಹೊಸ ಹೀರೋ ಎಚ್‌ಎಫ್ 100 ಮೋಟಾರ್‌ಸೈಕಲ್ 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ರೆಡ್ ವಿತ್ ಬ್ಲ್ಯಾಕ್ & ಬ್ಲೂ ವಿತ್ ಬ್ಲ್ಯಾಕ್ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಎಂಜಿನ್ ಕಟ್-ಆಫ್, ಸೈಡ್ ಸ್ಟ್ಯಾಂಡ್ ಎಂಜಿನ್ ಕಟ್-ಆಫ್ ಮತ್ತು ಡುಯಲ್-ಪಾಡ್ ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಟಿವಿಎಸ್ ಎಕ್ಸ್‌ಎಲ್ 100 (TVS XL 100): ಇದೊಂದು ಮೊಪೆಡ್ ಆಗಿದೆ. ರೂ.45,999 ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. 99.7 ಸಿಸಿ ಸಿಂಗಲ್ ಸಿಲಿಂಡರ್ ಏರ್ ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 4.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ.

ನೂತನ ಎಕ್ಸ್‌ಎಲ್ 100 ಮೊಪೆಡ್, 65 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಡುಯಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications