ಬೆಂಗಳೂರಿನ ಅಲ್ಟ್ರಾವೈಲೆಟ್‌ನಿಂದ ಮೊದಲ ಇ-ಸ್ಕೂಟರ್ ಬಿಡುಗಡೆ.. 261 Km ರೇಂಜ್, ರಿಯಾಯಿತಿ ದರದಲ್ಲಿ ಮಾರಾಟಕ್ಕೆ!
ಬೆಂಗಳೂರು ಮೂಲದ ಅಲ್ಟ್ರಾವೈಲೆಟ್ (Ultraviolette), ಬಹುನಿರೀಕ್ಷಿತ ಎ77 ಸೀರೀಸ್ ಇ-ಬೈಕ್‌ನ್ನು ಮಾರಾಟ ಮಾಡುವುದರೊಂದಿಗೆ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿತ್ತು. ಬುಧವಾರ ಕಂಪನಿಯು ತನ್ನ ಮೊದಲ 'ಟೆಸ್ಸೆರಾಕ್ಟ್' ಎಲೆಕ್ಟ್ರಿಕ್ ಸ್ಕೂಟರ್‌ನ್ನು ಆದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಈ ನೂತನ ಸ್ಕೂಟರ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಬಜೆಟ್ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ.. ಹೊಚ್ಚ ಹೊಸ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆಗಳೇನು ಎಂಬುದನ್ನು ತಿಳಿಯೋಣ.
ನೂತನ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್ (Ultraviolette Tesseract Electric Scooter), ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. ಇದು ರೂ.1.45 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. ಆದರೆ, ಮೊದಲ 10,000 ಗ್ರಾಹಕರಿಗೆ ಈ ಸ್ಕೂಟರ್ 1.20 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಲಭ್ಯವಾಗಲಿದೆ.

ಹೊಸ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಇ-ಸ್ಕೂಟರ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಇದು ಕಾಂಬ್ಯಾಟ್ ಅಂದರೆ ಯುದ್ಧ ಹೆಲಿಕಾಪ್ಟರ್‌ಗಳಿಂದ ಪ್ರೇರಿತವಾಗಿದೆ. ಉತ್ತಮವಾಗಿರುವ ಡುಯಲ್ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಮತ್ತು ಫ್ಲೋಟಿಂಗ್ ಡಿಆರ್‌ಎಲ್‌ಗಳನ್ನು ಒಳಗೊಂಡಿದೆ. ಜೊತೆಗೆ ಡೆಸರ್ಟ್ ಬ್ಲ್ಯಾಕ್, ಸೋನಿಕ್ ಪಿಂಕ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳನ್ನು ಪಡೆದಿದೆ.
ಈ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್ 3.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಜೊತೆಗೆ ಬ್ಯಾಟರಿ ಪ್ಯಾಕ್‌ಗಳಿಗೆ ಅನುಗುಣವಾಗಿ ಸಂಪೂರ್ಣ ಚಾರ್ಜ್‌ನಲ್ಲಿ 261 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡುತ್ತದೆ.

ನೂತನ ಇ-ಸ್ಕೂಟರ್ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 20.1 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹೊರಹಾಕುತ್ತದೆ. ಕೇವಲ 2.9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಇದು 14-ಇಂಚಿನ ವೀಲ್‌ಗಳು ಹಾಗೂ 34-ಲೀಟರ್ ಸಾಮರ್ಥ್ಯದ ಅಂಡರ್ ಸೀಟ್ ಸ್ಟೋರೇಜ್ ಅನ್ನು ಒಳಗೊಂಡಿದೆ.
ಹೊಸ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ದೊಡ್ಡ ಗಾತ್ರದ ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ವಯೋಲೆಟ್ ಎಐ ಕನೆಕ್ಟಿವಿಟಿ ಸೂಟ್, ಕೀಲೆಸ್ ಆಕ್ಸೆಸ್, ಪಾರ್ಕ್ ಅಸಿಸ್ಟ್, ಹಿಲ್ ಹೋಲ್ಡ್, ಕ್ರೂಸ್ ಕಂಟ್ರೋಲ್, ನ್ಯಾವಿಗೇಷನ್ ಮತ್ತು ಮ್ಯೂಸಿಕ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಸ್ಕೂಟರ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಹಾಗೂ ಹಿಂಭಾಗ (ರೇರ್) ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಇದು ಮಾತ್ರವಲ್ಲದೆ, ಡುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್ ಹಾಗೂ ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್‌ನ್ನು ತನ್ನದಾಗಿಸಿಕೊಂಡಿದೆ.
ಒಟ್ಟಾರೆಯಾಗಿ ನೂತನ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಇ-ಸ್ಕೂಟರ್ ಬಿಡುಗಡೆಯಾಗಿರುವುದು ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ನ ಪ್ರಿ-ಬುಕ್ಕಿಂಗ್ ಸಹ ಶುರುವಾಗಿದ್ದು, ಆಸಕ್ತ ಗ್ರಾಹಕರು ರೂ.999 ಪಾವತಿಸುವ ಮೂಲಕ ಆರ್ಡರ್ ಮಾಡಬಹುದು. 2026ರ ಮೊದಲ ತ್ರೈಮಾಸಿಕದಲ್ಲಿ ವಿತರಣೆಗಳು ಕೂಡ ಪ್ರಾರಂಭವಾಗುವ ನಿರೀಕ್ಷೆಯಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








