ಪೆಟ್ರೋಲ್‌ಗೆ ಹೇಳಿ ಬೈ ಬೈ.. ಹೊಸ ಅಲ್ಟ್ರಾವೈಲೆಟ್‌ ಶಾಕ್‌ವೇವ್ ಇ-ಬೈಕ್ ಕುರಿತ ಪ್ರಮುಖಾಂಶಗಳಿವು, ಯಾರು ಹೇಳಲ್ಲ!

ಬೆಂಗಳೂರಿನ ಅಲ್ಟ್ರಾವೈಲೆಟ್ (Ultraviolette), ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಬುಧವಾರ ಹೊಚ್ಚ ಹೊಸ ಆಫ್-ರೋಡ್ ಇ-ಮೋಟಾರ್‌ಸೈಕಲ್ 'ಶಾಕ್‌ವೇವ್'ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ.. ಈ ನೂತನ 'ಅಲ್ಟ್ರಾವೈಲೆಟ್ ಶಾಕ್‌ವೇವ್' ಎಲೆಕ್ಟ್ರಿಕ್ ಬೈಕ್‌ನ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.

ಬೆಲೆ & ಬುಕ್ಕಿಂಗ್ (Price & Booking): ಅಲ್ಟ್ರಾವೈಲೆಟ್ ಶಾಕ್‌ವೇವ್ (Ultraviolette Shockwave) ಎಲೆಕ್ಟ್ರಿಕ್ ಮೋಟಾರ್‌ಸೈಕಲ್, ರೂ.1.75 ಲಕ್ಷ ಬೆಲೆಯನ್ನು ಒಳಗೊಂಡಿದೆ. ಆದರೆ, ಮೊದಲ 1,000 ಖರೀದಿದಾರರಿಗೆ ರೂ.1.50 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಸಿಗುತ್ತದೆ. ಈಗಾಗಲೇ ಬುಕ್ಕಿಂಗ್‌ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತರು ಕಂಪನಿಯ ಅಧಿಕೃತ ವೆಬ್‌ಸೈಟ್ ಅಥವಾ ಡೀಲರ್‌ಶಿಪ್‌ಗಳಿಗೆ ಭೇಟಿ ನೀಡಿ ಕಾಯ್ದಿರಿಸಬಹುದು.

Ultraviolette Shockwave Electric Bike Top Things You Should Must Know

ವಿನ್ಯಾಸ & ಬಣ್ಣಗಳು (Design & Colors): ಈ ಎಲೆಕ್ಟ್ರಿಕ್ ಬೈಕ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲೈಟ್‌ಗಳು ಹಾಗೂ ಎತ್ತರವಿರುವ ಹ್ಯಾಂಡಲ್‌ಬಾರ್‌ನ್ನು ಒಳಗೊಂಡಿದೆ. ಕಾಸ್ಮಿಕ್ ಬ್ಲ್ಯಾಕ್ ಮತ್ತು ಫ್ರಾಸ್ಟ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಕಾರ್ಯಕ್ಷಮತೆ (Performance): ನೂತನ ಅಲ್ಟ್ರಾವೈಲೆಟ್ ಶಾಕ್‌ವೇವ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್, ಶಕ್ತಿಯುತವಾದ 4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 165 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡುತ್ತದೆ. 120 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

Ultraviolette Shockwave Electric Bike Top Things You Should Must Know

ಈ ಎಲೆಕ್ಟ್ರಿಕ್ ಬೈಕ್‌ನಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 14.5 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 505 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಕೇವಲ 2.9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ನೂತನ ಶಾಕ್‌ವೇವ್ ಇ-ಮೋಟಾರ್‌ಸೈಕಲ್, ಫ್ರಂಟ್ ಟೆಲಿಸ್ಕೋಪಿಕ್ ಫೋರ್ಕ್ & ರೇರ್ ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಅನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಆಯ್ಕೆಯನ್ನು ಪಡೆದಿದೆ. 19/17-ಇಂಚಿನ ವೈರ್ ಸ್ಪೋಕ್ ವೀಲ್‌ಗಳು, 90/90 ಆರ್19 & 110/90 ಆರ್17 ಅಳತೆಯ ಡುಯಲ್ ಪರ್ಪಸ್ ಟೈರ್‌ಗಳನ್ನು ತನ್ನದಾಗಿಸಿಕೊಂಡಿದೆ.

Ultraviolette Shockwave Electric Bike Top Things You Should Must Know

ಒಟ್ಟಾರೆಯಾಗಿ ಅಲ್ಟ್ರಾವೈಲೆಟ್ ಶಾಕ್‌ವೇವ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆಯಾಗಿರುವುದು ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಪೆಟ್ರೋಲ್ ಚಾಲಿತ ಆಫ್-ರೋಡ್ ಮೋಟಾರ್‌ಸೈಕಲ್‌ಗಳಿಗೆ ಪರ್ಯಾಯವಾಗಲಿದೆ ಎನ್ನಲಾಗಿದೆ. ಜೊತೆಗೆ ಹೆಚ್ಚು ಆಕರ್ಷಕವಾಗಿರುವುದಾರಿಂದ ಹೆಚ್ಚಿನ ಸಂಖ್ಯೆಯ ಗ್ರಾಹಕರ ಆಯ್ಕೆಯ ದ್ವಿಚಕ್ರ ವಾಹನವಾಗುವುದರಲ್ಲಿ ಎರಡು ಮಾತಿಲ್ಲ. ಮುಂಬರುವ ದಿನಗಳಲ್ಲಿ ಈ ಬೈಕ್‌ಗೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, March 7, 2025, 21:32 [IST]
English summary
Ultraviolette shockwave electric bike top things you should must know
Read more on ultraviolette india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+