ಬುಕ್ಕಿಂಗ್‌ನಲ್ಲಿ ಅಬ್ಬರ.. 261 Km ರೇಂಜ್, 1.45 ಲಕ್ಷ.. ಆದರೂ ಹೊಸ ಅಲ್ಟ್ರಾವೈಲೆಟ್ ಇ-ಸ್ಕೂಟರ್ ವಿತರಣೆ ಮತ್ತಷ್ಟು ವಿಳಂಬ!

ಬೆಂಗಳೂರು ಮೂಲದ ಅಲ್ಟ್ರಾವೈಲೆಟ್ ಆಟೋಮೋಟಿವ್ (Ultraviolette Automotive) ಜಗಮೆಚ್ಚಿದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ಇದೇ ವರ್ಷದ ಮಾರ್ಚ್‌ನಲ್ಲಿ ಹೊಚ್ಚ ಹೊಸ ಟೆಸ್ಸೆರಾಕ್ಟ್ (Tesseract) ಹೆಸರಿನ ಇ-ಸ್ಕೂಟರ್‌ನ್ನು ಬಿಡುಗಡೆಗೊಳಿಸಲಾಗಿತ್ತು. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಇದಕ್ಕೆ ಗ್ರಾಹಕರು ಕೂಡ ಮನಸೋತಿದ್ದು, 70,000ಕ್ಕೂ ಅಧಿಕ ಸಂಖ್ಯೆಯಲ್ಲಿ ಬುಕ್ಕಿಂಗ್‌ಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ನೂತನ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ (Ultraviolette Tesseract) ಎಲೆಕ್ಟ್ರಿಕ್ ಸ್ಕೂಟರ್‌ನ ವಿತರಣೆಗಳು 2026ರ ಮೊದಲ ತ್ರೈಮಾಸಿಕದಲ್ಲಿ (ಜನವರಿಯಿಂದ ಮಾರ್ಚ್) ಶುರುವಾಗಬೇಕಿತ್ತು. ಆದರೀಗ ಎರಡನೇ ತ್ರೈಮಾಸಿಕದಲ್ಲಿ ಅಂದರೆ ಏಪ್ರಿಲ್‌ನಿಂದ ಜೂನ್ ಅವಧಿಯಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಈ ಕುರಿತ ವಿವರಗಳನ್ನು ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲೂ ನಮೂದಿಸಲಾಗಿದೆ.

Ultraviolette Tesseract Electric scooter Deliveries Delayed Details

ಹೊಸ 'ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್' ಇ-ಸ್ಕೂಟರ್‌ನ್ನು ಕೇವಲ ರೂ.1.20 ಲಕ್ಷ ಪರಿಚಯಾತ್ಮಕ ಬೆಲೆಯಲ್ಲಿ ಮಾರಾಟಕ್ಕೆ ತರಲಾಗಿತ್ತು. ಆ ದರವನ್ನು 50,000 ಬುಕ್ಕಿಂಗ್‌ಗಳಿಗೆ ಸೀಮಿತಗೊಳಿಸಲಾಗಿತ್ತು. ಪ್ರಸ್ತುತ ಈ ಎಲೆಕ್ಟ್ರಿಕ್ ಸ್ಕೂಟರ್ ರೂ.1.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಆಸಕ್ತ ಖರೀದಿದಾರರು ರೂ.5,000 ಮುಂಗಡ ಹಣ ಪಾವತಿಸುವ ಮೂಲಕ ಪ್ರಿ-ಬುಕ್ಕಿಂಗ್ ಮಾಡಬಹುದು.

ಇದು ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಹಾಗೂ ಎಲ್ಇಡಿ ಫ್ಲೋಟಿಂಗ್ ಡಿಆರ್‌ಎಲ್‌ಗಳನ್ನು ಪಡೆದಿದೆ. ಡೆಸರ್ಟ್ ಬ್ಲ್ಯಾಕ್, ಸೋನಿಕ್ ಪಿಂಕ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಗ್ರಾಹಕರ ಖರೀದಿಗೆ ಲಭ್ಯವಿದೆ.

Ultraviolette Tesseract Electric scooter Deliveries Delayed Details

ನೂತನ ಎಲೆಕ್ಟ್ರಿಕ್ ಸ್ಕೂಟರ್ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 3.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್), 5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 162 ರಿಂದ 261 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. ಇದರ ಬ್ಯಾಟರಿಯು ಫಾಸ್ಟ್ ಚಾರ್ಜಿಂಗ್ ಬಳಕೆಯಲ್ಲಿ ಕೇವಲ 1 ಗಂಟೆಯೊಳಗೆ ಶೇಕಡ 80% ವರೆಗೆ ಚಾರ್ಜ್ ಆಗುತ್ತದೆ.

ಈ 'ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್' ಎಲೆಕ್ಟ್ರಿಕ್ ಸ್ಕೂಟರ್ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ದೊಡ್ಡ ಗಾತ್ರದ ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕೀಲೆಸ್ ಆಕ್ಸೆಸ್, ಪಾರ್ಕ್ ಅಸಿಸ್ಟ್, ಹಿಲ್ ಹೋಲ್ಡ್, ಕ್ರೂಸ್ ಕಂಟ್ರೋಲ್, ನ್ಯಾವಿಗೇಷನ್ & ಮ್ಯೂಸಿಕ್ ಕಂಟ್ರೋಲ್‌ನ್ನು ಒಳಗೊಂಡಿದೆ. ದೂರದ ಸ್ಥಳಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 34 ಲೀ.ನಷ್ಟು ಅಂಡರ್ ಸೀಟ್ ಸ್ಟೋರೇಜ್ ಆಯ್ಕೆಯನ್ನು ಪಡೆದಿದೆ.

Ultraviolette Tesseract Electric scooter Deliveries Delayed Details

ಇದು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ ಎಆರ್‌ಎಎಸ್ (ಅಡ್ವಾನ್ಸ್ಡ್ - ರೈಡರ್ ಅಸಿಸ್ಟೆನ್ಸ್ ಸಿಸ್ಟಮ್), ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಡಿಸ್ಕ್ ಬ್ರೇಕ್‌ಗಳು, ಡ್ಯಾಶ್‌ಕ್ಯಾಮ್‌, ಡುಯಲ್ ಚಾನೆಲ್ ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್ ಮತ್ತು ಡೈನಾಮಿಕ್ - ಸ್ಟೆಬಿಲಿಟಿ ಕಂಟ್ರೋಲ್‌ನ್ನು ಹೊಂದಿದೆ.

ಈಚೆಗೆ ಬಿಡುಗಡೆಯಾದ ಅಲ್ಟ್ರಾವೈಲೆಟ್ ಎಕ್ಸ್47 (Ultraviolette X47) ಇ-ಬೈಕ್ ವಿಶೇಷತೆಗಳೇನು:

ನೂತನ 'ಅಲ್ಟ್ರಾವೈಲೆಟ್ ಎಕ್ಸ್47' ಎಲೆಕ್ಟ್ರಿಕ್ ಮೋಟಾರ್‌ಸೈಕಲ್‌ ರೂ.2.74 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್, ವಿಂಡ್‌ಸ್ಕ್ರೀನ್, ನಕಲ್ ಗಾರ್ಡ್‌ಗಳು ಮತ್ತು ಸಿಂಗಲ್-ಪೀಸ್ ಸೀಟ್‌ನ್ನು ಪಡೆದಿದೆ. ಲೇಸರ್ ಟರ್ಬೊ ರೆಡ್, ಶಾಡೋ ಕಾಸ್ಮಿಕ್ ಬ್ಲ್ಯಾಕ್ ಹಾಗೂ ಏರ್‌ಸ್ಟ್ರೈಕ್ ಸ್ಟೆಲ್ಲರ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಈ ಬೈಕ್ 7.1 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) & 10.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 211 ರಿಂದ 323 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಫುಲ್ ಕಲರ್ ಟಿಎಫ್‌ಟಿ ಡಿಸ್‌ಪ್ಲೇ ಕೀಲೆಸ್ ಸ್ಟಾರ್ಟ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡುಯಲ್ ಚಾನೆಲ್ ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Thursday, October 9, 2025, 13:28 [IST]
English summary
Ultraviolette tesseract electric scooter deliveries delayed details
Read more on ultraviolette india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+