ಕರ್ನಾಟಕದ ಅಲ್ಟ್ರಾವೈಲೆಟ್‌ನ ಮೊದಲ ಇ-ಸ್ಕೂಟರ್‌ಗೆ 48 ಗಂಟೆಗಳಲ್ಲಿಯೇ 20,000 ಬುಕ್ಕಿಂಗ್: ಅಗ್ಗದ ದರಕ್ಕೆ ಲಭ್ಯ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯ ಕಚೇರಿ ಹೊಂದಿರುವ ಅಲ್ಟ್ರಾವೈಲೆಟ್ ಆಟೋಮೋಟಿವ್ (Ultraviolette Automotive), ವಿಶ್ವಾಸಾರ್ಹತೆಗೆ ಹೆಸರುವಾಸಿಯಾಗಿರುವ ಜನಪ್ರಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ಬುಧವಾರ ಕಂಪನಿಯು ಹೊಚ್ಚ ಹೊಸ 'ಟೆಸ್ಸೆರಾಕ್ಟ್' ಎಲೆಕ್ಟ್ರಿಕ್ ಸ್ಕೂಟರ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದೀಗ ಈ ನೂತನ ಸ್ಕೂಟರ್‌ಗಾಗಿ ಗ್ರಾಹಕರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ಉಂಟಾಗಿದ್ದು, ತಾಮುಂದು - ನಾಮುಂದು ಎಂಬಂತೆ ಬುಕ್ಕಿಂಗ್ ಮಾಡುತ್ತಿದ್ದಾರೆ.
ನೂತನ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ (Ultraviolette Tesseract) ಇ-ಸ್ಕೂಟರ್, 48 ಗಂಟೆಯೊಳಗೆ ಬರೋಬ್ಬರಿ 20,000ಕ್ಕೂ ಹೆಚ್ಚು ಬುಕ್ಕಿಂಗ್‌ಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ನ್ನು ರೂ.1.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಆದರೆ, ಮೊದಲ 10,000 ಖರೀದಿದಾರರಿಗೆ ರಿಯಾಯತಿ ದರದಲ್ಲಿ ಅಂದರೆ, 1.20 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಮಾರಾಟಗೊಳಿಸಲು ಕಂಪನಿಯು ನಿರ್ಧರಿಸಿತ್ತು.

ಸದ್ಯ ಭಾರೀ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ, ಇನ್ಮುಂದೆ ಈ ರಿಯಾಯಿತಿ ದರದ ಕೊಡುಗೆ 50,000 ಗ್ರಾಹಕರಿಗೆ ಲಭ್ಯವಾಗಲಿದೆ. ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಇ-ಸ್ಕೂಟರ್‌ಗಾಗಿ ಬುಕ್ಕಿಂಗ್‌ಗಳನ್ನು ತೆರೆಯಲಾಗಿದ್ದು, ಆಸಕ್ತ ಖರೀದಿದಾರರು ರೂ.999 ಮುಂಗಡ ಹಣವನ್ನು ಪಾವತಿ ಮಾಡಿ, ಕಂಪನಿಯ ಅಧಿಕೃತ ವೆಬ್‌ಸೈಟ್ ಅಥವಾ ಡೀಲರ್‌ಶಿಪ್‌ಗಳಿಗೆ ಭೇಟಿ ನೀಡಿ ಆರ್ಡರ್ ಮಾಡಬಹುದು.
ಈ ಬಗ್ಗೆ ಮಾತನಾಡಿರುವ ಅಲ್ಟ್ರಾವೈಲೆಟ್ ಸಿಇಒ ನಾರಾಯಣ್ ಸುಬ್ರಮಣಿಯಂ (Narayan Subramaniam) ಅವರು, 'ದೇಶದ್ಯಾಂತ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಗ್ರಾಹಕರಿಂದ ದೊರೆತ ಅಭೂತಪೂರ್ವವಾದ ಪ್ರತಿಕ್ರಿಯೆ ಕಂಡು ನಾವು ರೋಮಾಂಚನಗೊಂಡಿದ್ದೇವೆ. ಇಷ್ಟು ಕಡಿಮೆ ಅವಧಿಯಲ್ಲಿ ಈ ಪರಿಪ್ರಮಾಣದ ಬೇಡಿಕೆಯು ಭವಿಷ್ಯದ ವಾಹನಗಳ ಮೇಲೆ ಖರೀದಿದಾರರು ಹೊಂದಿರುವ ಅಭಿರುಚಿಯನ್ನು ಎತ್ತಿ ತೋರಿಸುತ್ತದೆ' ಎಂದು ಹೇಳಿದ್ದಾರೆ.

ಹೊಸ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಇ-ಸ್ಕೂಟರ್, ವಿವಿಧ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ದೊರೆಯುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 261 ಕಿಲೋಮೀಟರ್‌ವರೆಗೂ ಓಡುತ್ತದೆ. ಇದು ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಡೆಸರ್ಟ್ ಬ್ಲ್ಯಾಕ್, ಸೋನಿಕ್ ಪಿಂಕ್ ಮತ್ತು ಸ್ಟೆಲ್ತ್ ಬ್ಲ್ಯಾಕ್ ಎಂಬ ಆಕರ್ಷಕವಾದ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಈ ಎಲೆಕ್ಟ್ರಿಕ್ ಸ್ಕೂಟರ್ ಟಚ್‌ಸ್ಕ್ರೀನ್ - ಡಿಸ್‌ಪ್ಲೇ, ಕೀಲೆಸ್ ಆಕ್ಸೆಸ್ ಹಾಗೂ ಮ್ಯೂಸಿಕ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಜೊತೆಗೆ 34 - ಲೀಟರ್ ಸಾಮರ್ಥ್ಯದ ಅಂಡರ್ - ಸೀಟ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳು, ಡುಯಲ್- ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್‌ನ್ನು ಒಳಗೊಂಡಿದೆ.

ಒಟ್ಟಾರೆಯಾಗಿ ನೂತನ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಇ-ಸ್ಕೂಟರ್‌ಗೆ ಗ್ರಾಹಕರಿಂದ ಈ ಮಟ್ಟದಲ್ಲಿ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಂಪನಿಯು ಲೆಕ್ಕಹಾಕಿರಲಿಲ್ಲ. ಮುಂಬರುವ ದಿನಗಳಲ್ಲಿ ಹೊಸ ಸ್ಕೂಟರ್ ಮತ್ತಷ್ಟು ಸಂಖ್ಯೆಯಲ್ಲಿ ಬುಕ್ಕಿಂಗ್‌ಗಳನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, 2026ರ ಮೊದಲ ತ್ರೈಮಾಸಿಕದೊಳಗೆ ಈ ಸ್ಕೂಟರ್ ವಿತರಣೆಗಳು ಶುರುವಾಗಬಹುದು ಎಂದು ಅಂದಾಜಿಸಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








