ಬೆಂಗಳೂರಿನ Ultraviolette Tesseract ಇ-ಸ್ಕೂಟರ್‌ಗೆ 70,000 ಬುಕ್ಕಿಂಗ್.. ಬೆಲೆ ಎಷ್ಟು, ವಿಶೇಷತೆಗಳೇನು?

ಬೆಂಗಳೂರು ಮೂಲದ ಅಲ್ಟ್ರಾವೈಲೆಟ್ ಆಟೋಮೋಟಿವ್ (Ultraviolette Automotive) ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ಇದೇ ಮಾರ್ಚ್‌ನಲ್ಲಿ ಟೆಸ್ಸೆರಾಕ್ಟ್ (Tesseract) ಎಂಬ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಅದ್ದೂರಿಯಾಗಿ ಪರಿಚಯಿಸಿತ್ತು. ಇದು ಹೆಚ್ಚು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಸದ್ಯ, ಈ ಸ್ಕೂಟರ್‌ಗಾಗಿ ದಾಖಲೆ ಸಂಖ್ಯೆಯಲ್ಲಿ ಗ್ರಾಹಕರು ಬುಕ್ಕಿಂಗ್ ಮಾಡಿದ್ದಾರೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಈವರೆಗೆ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ (Ultraviolette Tesseract) ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಬರೋಬ್ಬರಿ 70,000 ಬುಕ್ಕಿಂಗ್‌ಗಳು ಆಗಿವೆ ಎಂದು ವರದಿಯಾಗಿದೆ. ನೂತನ ಸ್ಕೂಟರ್‌ನ ವಿತರಣೆಗಳು 2026ರ ಮೊದಲ ತ್ರೈಮಾಸಿಕದಲ್ಲಿ ಆರಂಭಗೊಳ್ಳುವ ಎಲ್ಲ ಸಾಧ್ಯತೆಯಿದೆ. ಈ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಆರಂಭದಲ್ಲಿ ರೂ.1.20 ಲಕ್ಷ ಪರಿಚಯಾತ್ಮಕ ಬೆಲೆಯಲ್ಲಿ ಬಿಡುಗಡೆಗೊಳಿಸಲಾಯಿತು. ಆ ದರವನ್ನು 50,000 ಬುಕ್ಕಿಂಗ್‌ಗಳಿಗೆ ಮಾತ್ರ ಸೀಮಿತಗೊಳಿಸಲಾಗಿತ್ತು. ಸದ್ಯ, ಇದೇ ಸ್ಕೂಟರ್ ರೂ.1.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

Ultraviolette Tesseract Electric Scooter Get 70 000 Bookings Details

ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ವಿಶೇಷತೆಗಳೇನು:

ಈ ಎಲೆಕ್ಟ್ರಿಕ್ ಸ್ಕೂಟರ್ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಅದು ನೋಡುಗರ ಕಣ್ಣು ಕುಕ್ಕುವಂತಿದ್ದು, ಉತ್ತಮವಾಗಿರುವ ಎಲ್ಇಡಿ ಹೆಡ್‌ಲೈಟ್‌ & ಡಿಆರ್‌ಎಲ್‌ಗಳನ್ನು ಪಡೆದಿದೆ. ಜೊತೆಗೆ 34-ಲೀ.ನಷ್ಟು ಅಂಡರ್ ಸೀಟ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಇದರೊಂದಿಗೆ ವಿವಿಧ ಅತ್ಯಾಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 3.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ ಕ್ರಮವಾಗಿ 162, 220 ಹಾಗೂ 261 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ.

Ultraviolette Tesseract Electric Scooter Get 70 000 Bookings Details

ನೂತನ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್, ಸಾಮಾನ್ಯ ಕಾರುಗಳಿಗೂ ಕಡಿಮೆಯಿಲ್ಲದಂತೆ ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬಹುಮುಖ್ಯವಾಗಿ ಟಿಎಫ್‌ಟಿ ಟಚ್‌ಸ್ಕ್ರೀನ್ ಕ್ಲಸ್ಟರ್, ಕೀಲೆಸ್ ಆಕ್ಸೆಸ್, ಪಾರ್ಕ್ ಅಸಿಸ್ಟ್, ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಡ್ಯಾಶ್‌ಕ್ಯಾಮ್‌ಗಳು, ಹಿಲ್ ಹೋಲ್ಡ್, ಕ್ರೂಸ್ ಕಂಟ್ರೋಲ್, ನ್ಯಾವಿಗೇಷನ್ ಮತ್ತು ಮ್ಯೂಸಿಕ್ ಕಂಟ್ರೋಲ್‌ನ್ನು ಒಳಗೊಂಡಿದೆ.

ಈ ಎಲೆಕ್ಟ್ರಿಕ್ ಸ್ಕೂಟರ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ಇದು ಮಾತ್ರವಲ್ಲದೆ, ಎಆರ್‌ಎಎಸ್ (ಅಡ್ವಾನ್ಸ್ಡ್ ರೈಡರ್ ಅಸಿಸ್ಟೆನ್ಸ್ ಸಿಸ್ಟಮ್), ಡುಯಲ್ - ಚಾನೆಲ್ ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಟ್ರಾಕ್ಷನ್ ಕಂಟ್ರೋಲ್ ಮತ್ತು ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್‌ನ್ನು ಪಡೆದಿದೆ.

Ultraviolette Tesseract Electric Scooter Get 70 000 Bookings Details

ಅಲ್ಟ್ರಾವೈಲೆಟ್ ಶಾಕ್‌ವೇವ್ ಮೋಟಾರ್‌ಸೈಕಲ್ ಕೂಡ ಮಾರಾಟಕ್ಕೆ ಬಂದಿದೆ:

ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್‌ನೊಂದಿಗೆ ಶಾಕ್‌ವೇವ್ ಇ-ಬೈಕ್‌ನ್ನು ಬಿಡುಗಡೆ ಮಾಡಲಾಯಿತು. ಇದೊಂದು ಆಫ್-ರೋಡ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಆಗಿದ್ದು, ಸರಿ ಸುಮಾರು ರೂ.1.75 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಪಡೆದಿದ್ದು, ಜೊತೆಗೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಎಲೆಕ್ಟ್ರಿಕ್ ಬೈಕ್ 4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 165 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರೊಂದಿಗೆ ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಜೊತೆಗೆ ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Friday, June 20, 2025, 10:58 [IST]
English summary
Ultraviolette tesseract electric scooter get 70000 bookings details
Read more on ultraviolette india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+