ಅಲ್ಟ್ರಾವೈಲೆಟ್‌ನ ಮೊದಲ ಇ-ಸ್ಕೂಟರ್‌ನ್ನು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಬೆಂಗಳೂರು ಮೂಲದ ಅಲ್ಟ್ರಾವೈಲೆಟ್ ಆಟೋಮೋಟಿವ್ (Ultraviolette Automotive), ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Electric Two Wheeler) ತಯಾರಕ ಕಂಪನಿಯಾಗಿದೆ. ಇತ್ತೀಚೆಗೆ ದೇಶೀಯ ಮಾರುಕಟ್ಟೆಯಲ್ಲಿ ಹೊಚ್ಚ ಹೊಸ ಟೆಸ್ಸೆರಾಕ್ಟ್ (Tesseract) ಇ-ಸ್ಕೂಟರ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ನೀವು ನೂತನ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ನೂತನ 'ಟೆಸ್ಸೆರಾಕ್ಟ್' ಹೆಚ್ಚು ಸೂಕ್ತವಾಗಲಿದೆ. ನಾವಿಲ್ಲಿ ಈ ಸ್ಕೂಟರ್‌ನ ನಿರೀಕ್ಷಿತ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಸಂಕ್ಷಿಪ್ತವಾಗಿ ತಿಳಿಸಿಕೊಟ್ಟಿದ್ದೇವೆ.

ಸದ್ಯ, ಹೊಸ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ (Ultraviolette Tesseract) ಇ-ಸ್ಕೂಟರ್‌ಗೆ ಖರೀದಿದಾರರಿಂದ ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಬುಕ್ಕಿಂಗ್‌ನ್ನು ಪಡೆದುಕೊಳ್ಳುತ್ತಿದೆ. ಅದಕ್ಕೆ ಸಾಕ್ಷಿ ಎಂಬಂತೆ ಆರ್ಡರ್ ತೆಗೆದುಕೊಳ್ಳುವುದನ್ನು ಶುರು ಮಾಡಿದ 8 ಗಂಟೆಯೊಳಗೆ ಸರಿ ಸುಮಾರು 20,000ಕ್ಕೂ ಅಧಿಕ ಗ್ರಾಹಕರು ಈ ಸ್ಕೂಟರ್‌ಗಾಗಿ ಬುಕ್ಕಿಂಗ್ ಮಾಡಿದ್ದರು.

Ultraviolette Tesseract Expected On-Road Price And Emi Details

ಅಲ್ಟ್ರಾವೈಲೆಟ್ ಕಂಪನಿಯು ಆರಂಭಿಕ ಕೊಡುಗೆಯಾಗಿ ಮೊದಲ 10,000 ಗ್ರಾಹಕರಿಗೆ ಈ ಸ್ಕೂಟರ್‌ನ್ನು ರಿಯಾಯತಿ ದರದಲ್ಲಿ ಅಂದರೆ, ರೂ.1.20 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಮಾರಾಟಗೊಳಿಸಲು ತೀರ್ಮಾನಿಸಿತ್ತು. ಖರೀದಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಆರ್ಡರ್ ಮಾಡಿದ ಹಿನ್ನೆಲೆ, ಈ ಆಫರ್‌ನ್ನು ಒಟ್ಟಾರೆ 50,000 ಬುಕ್ಕಿಂಗ್‌ಗಳವರೆಗೆ ವಿಸ್ತರಿಸುವುದಾಗಿ ಕಂಪನಿಯೇ ಘೋಷಣೆ ಮಾಡಿದೆ. ಆ ಬಳಿಕ ಇದೇ ಸ್ಕೂಟರ್‌ಗಾಗಿ ಗ್ರಾಹಕರು ರೂ.1.45 ಲಕ್ಷ (ಎಕ್ಸ್-ಶೋರೂಂ) ಪಾವತಿಸಬೇಕು.

ಈ ನೂತನ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್, ರೂ.1.50 ಲಕ್ಷವರೆಗೆ ಆನ್-ರೋಡ್ ಬೆಲೆಯಲ್ಲಿ ಖರೀದಿಗೆ ದೊರೆಯುವ ನೀರಿಕ್ಷೆಯಿದೆ. ನೀವು ರೂ.50,000 ಡೌನ್-ಪೇಮೆಂಟ್ ಪಾವತಿ ಮಾಡಿ, ಈ ಸ್ಕೂಟರ್‌ನ್ನು ಕೊಂಡುಕೊಂಡರೆ, ರೂ.1 ಲಕ್ಷವರೆಗೆ ಸಾಲವಿರುತ್ತದೆ. ಅದಕ್ಕೆ ಶೇಕಡ 10% ಬಡ್ಡಿ ದರದಲ್ಲಿ ಮಾಸಿಕ ರೂ.3,200 ವರೆಗೆ ಇಎಂಐ ಕಟ್ಟಬೇಕು.

Ultraviolette Tesseract Expected On-Road Price And Emi Details

ಹೊಸ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಇ-ಸ್ಕೂಟರ್, 3.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್), 5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ದೊರೆಯುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 162, 220 ಹಾಗೂ 261 ಕಿಲೋಮೀಟರ್ (ರೇಂಜ್) ನೀಡುತ್ತದೆ.

ಈ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್, ಕೇವಲ 2.9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕೀಲೆಸ್ ಆಕ್ಸೆಸ್, ಪಾರ್ಕ್ ಅಸಿಸ್ಟ್, ಹಿಲ್ ಹೋಲ್ಡ್, ಕ್ರೂಸ್ ಕಂಟ್ರೋಲ್, ನ್ಯಾವಿಗೇಷನ್, ಮ್ಯೂಸಿಕ್ ಕಂಟ್ರೋಲ್, ಡಿಸ್ಕ್ ಬ್ರೇಕ್‌ಗಳು ಡುಯಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ನೂತನ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಇ-ಸ್ಕೂಟರ್ ವಿತರಣೆಗಳು 2026ರ ಮೊದಲ ತ್ರೈಮಾಸಿಕದಲ್ಲಿ ಶುರುವಾಗುವ ನಿರೀಕ್ಷೆಯಿದೆ. ನೀವು ಈ ಸ್ಕೂಟರ್‌ನ್ನು ಖರೀದಿ ಮಾಡಬೇಕು ಅಂದುಕೊಂಡಿದ್ದರೆ, ರೂ.999 ಮುಂಗಡ ಹಣವನ್ನು ಪಾವತಿ ಮಾಡಿ, ಕಂಪನಿಯ ಅಧಿಕೃತ ವೆಬ್‌ಸೈಟ್‌ ಅಥವಾ ಡೀಲರ್‌ಶಿಪ್‌ಗಳಿಗೆ ಭೇಟಿ ನೀಡಿ ಆರ್ಡರ್ ಮಾಡಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, March 17, 2025, 12:59 [IST]
English summary
Ultraviolette tesseract expected on road price and emi details
Read more on ultraviolette india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+