ಅಣ್ತಮ್ಮಾಸ್: ಲಕ್ಸುರಿ ಫೀಚರ್ಸ್.. ಮುಂಬರಲಿರುವ 5 ಎಲೆಕ್ಟ್ರಿಕ್ ಟೂ-ವೀಲರ್‌ಗಳಿವು, ಬೆಲೆಯೂ ತುಂಬಾ ಅಗ್ಗ!
ಭಾರತದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Electric Two Wheeler) ಮಾರುಕಟ್ಟೆ ವೇಗವಾಗಿ ಬೆಳವಣಿಗೆಯಾಗುತ್ತಿದೆ. ಇಲ್ಲಿ ಪ್ರತಿ ತಿಂಗಳು ಒಂದಿಲ್ಲೊಂದು ಇ-ಬೈಕ್ ಅಥವಾ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗುತ್ತದೆ. ಸದ್ಯ, ಜನಪ್ರಿಯ ವಾಹನ ತಯಾರಕ ಕಂಪನಿಗಳು ಹೆಚ್ಚು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ 5 ಹೊಚ್ಚ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ರಸ್ತೆಗಿಳಿಯಲು ಸಜ್ಜಾಗಿವೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.
ಸುಜುಕಿ ಇ ಆಕ್ಸೆಸ್ (Suzuki e Access): ಇದೊಂದು ಎಲೆಕ್ಟ್ರಿಕ್ ಸ್ಕೂಟರ್ ಆಗಿದ್ದು, ಇದೇ ವರ್ಷದ ಆಗಸ್ಟ್ ಅಥವಾ ಸೆಪ್ಟೆಂಬರ್‌ನಲ್ಲಿ ಅದ್ದೂರಿಯಾಗಿಯೂ ಬಿಡುಗಡೆಯಾಗಲಿದೆ. ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯವ ನಿರೀಕ್ಷೆಯಿದ್ದು, ರೂ.1 ಲಕ್ಷದಿಂದ ರೂ.1.20 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ.

ಈ ಸುಜುಕಿ ಇ ಆಕ್ಸೆಸ್ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 3.07 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 95 ಕಿ.ಮೀ ರೇಂಜ್ (ಮೈಲೇಜ್) ಕೊಡುತ್ತದೆ. 71 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.
ನೂತನ ಇ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಮನೆಯ ವಿದ್ಯುತ್ ಬಳಕೆಯಲ್ಲಿ 0 ರಿಂದ 100% ಚಾರ್ಜ್ ಆಗುವುದಕ್ಕೆ 6.42 ಗಂಟೆ ತೆಗೆದುಕೊಳ್ಳುತ್ತದೆ. ಎಲ್‌ಇಡಿ ಲೈಟಿಂಗ್ ಸೆಟಪ್, ಟಿಎಫ್‌ಟಿ ಡಿಸ್‌ಪ್ಲೇ, ಸುಜುಕಿ ರೈಡ್ ಕನೆಕ್ಟ್ ಇ-ಆ್ಯಪ್ ಮತ್ತು ನ್ಯಾವಿಗೇಷನ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ (Ultraviolette Tesseract): ಈ ಎಲೆಕ್ಟ್ರಿಕ್ ಸ್ಕೂಟರ್ ಅತಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ರೂ.1.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 3.5, 5 ಹಾಗೂ 6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ ಕ್ರಮವಾಗಿ 162, 220 ಮತ್ತು 261 ಕಿಲೋಮೀಟರ್ ಓಡುತ್ತದೆ.
ಈ ಟೆಸ್ಸೆರಾಕ್ಟ್ ಇ-ಸ್ಕೂಟರ್ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಹಾಗೂ ಫ್ಲೋಟಿಂಗ್ ಡಿಆರ್‌ಎಲ್‌ಗಳನ್ನು ಹೊಂದಿದೆ. ಡೆಸರ್ಟ್ ಬ್ಲ್ಯಾಕ್, ಸೋನಿಕ್ ಪಿಂಕ್ & ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿ ಕೂಡ ಗ್ರಾಹಕರ ಖರೀದಿಗೆ ಲಭ್ಯವಿದೆ.

ಹೊಸ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್, ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕೀಲೆಸ್ ಆಕ್ಸೆಸ್, ಪಾರ್ಕ್ ಅಸಿಸ್ಟ್, ಹಿಲ್-ಹೋಲ್ಡ್, ಕ್ರೂಸ್ ಕಂಟ್ರೋಲ್, ನ್ಯಾವಿಗೇಷನ್ ಮತ್ತು ಮ್ಯೂಸಿಕ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಫ್ರಂಟ್ & ರೇರ್ ಡ್ಯಾಶ್‌ಕ್ಯಾಮ್‌ಗಳನ್ನು ಪಡೆದಿದೆ. ಜೊತೆಗೆ ಎಆರ್‌ಎಎಸ್ (ಅಡ್ವಾನ್ಸ್ಡ್ ರೈಡರ್ ಅಸಿಸ್ಟೆನ್ಸ್ ಸಿಸ್ಟಮ್), ಡಿಸ್ಕ್ ಬ್ರೇಕ್‌ಗಳು, ಡುಯಲ್- ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್‌ನ್ನು ಪಡೆದಿದೆ.
ಅಲ್ಟ್ರಾವೈಲೆಟ್ ಶಾಕ್‌ವೇವ್ (Ultraviolette Shockwave): ಇದು ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ಆಗಿದ್ದು, ಮುಂಬರುವ ತಿಂಗಳಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಆಫ್-ರೋಡ್ ಬೈಕ್ ಆಗಿರುವುದರಿಂದ ಕೊಂಚ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದ್ದು, ರೂ.1.75 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ.

ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ 4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 165 ಕಿ.ಮೀ ಕ್ರಮಿಸುತ್ತದೆ. 120 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 2.9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ನೂತನ ಇ-ಬೈಕ್ ಉತ್ತಮವಾಗಿರುವ ಪ್ರೊಜೆಕ್ಟರ್ ಎಲ್ಇಡಿ ಹೆಡ್‌ಲೈಟ್‌ಗಳು ಮತ್ತು ಎತ್ತರವಿರುವ ಹ್ಯಾಂಡಲ್‌ಬಾರ್‌ನ್ನು ಪಡೆದಿದೆ. ಕಾಸ್ಮಿಕ್ ಬ್ಲ್ಯಾಕ್ & ಫ್ರಾಸ್ಟ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲಿಯಾ ಸಿ6 (Royal Enfield Flying Flea C6): ಈ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ 2026ರ ಜನವರಿಯಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ದೇಶೀಯ ಮಾರುಕಟ್ಟೆಯಲ್ಲಿ ನೂತನ ಇ-ಬೈಕ್ ರೂ.2 ಲಕ್ಷದಿಂದ ರೂ.3 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ.
ಹೊಸ ಎಲೆಕ್ಟ್ರಿಕ್ ಬೈಕ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಎಲ್ಇಡಿ ಲೈಟಿಂಗ್, ಸ್ಪ್ಲಿಟ್ ಸೀಟ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಈ ಮೋಟಾರ್‌ಸೈಕಲ್ ದೊಡ್ಡ ಗಾತ್ರದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ ಹೆಚ್ಚು ರೇಂಜ್ (ಮೈಲೇಜ್) ನೀಡುವ ಸಾಧ್ಯತೆಯಿದೆ.
ನೂತನ ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲಿಯಾ ಸಿ6 ಎಲೆಕ್ಟ್ರಿಕ್ ಬೈಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಪುಲ್- ಟಿಎಫ್‌ಟಿ ಕ್ಲಸ್ಟರ್, ಟ್ರಾಕ್ಷನ್ ಕಂಟ್ರೋಲ್, ಕಾರ್ನರಿಂಗ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಸ್ಮಾರ್ಟ್‌ಫೋನ್ ಅಪ್ಲಿಕೇಶನ್ ಕನೆಕ್ಟಿವಿಟಿಯಂತಹ ವಿವಿಧ ವೈಶಿಷ್ಟ್ಯಗಳಿರಲಿವೆ ಎನ್ನಲಾಗಿದೆ.
ಹೀರೋ ವಿಡಾ ಜಡ್ (Hero Vida Z): ಇದೊಂದು ಎಲೆಕ್ಟ್ರಿಕ್ ಆಗಿದ್ದು, ಅತಿ ಶೀಘ್ರದಲ್ಲಿ ದೇಶೀಯ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ತುಂಬಾ ಕಡಿಮೆ ಬೆಲೆಯಲ್ಲಿಯೂ ಮಾರಾಟಕ್ಕೆ ಬರುವ ನಿರೀಕ್ಷೆಯಿದ್ದು, ರೂ.1 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿರಬಹುದು ಎನ್ನಲಾಗಿದೆ.
ನೂತನ ವಿಡಾ ಜಡ್ ಇ-ಸ್ಕೂಟರ್ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 2.2 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 94 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡಬಹುದು ಎಂದು ಹೇಳಲಾಗಿದೆ. ಈ ಬಗ್ಗೆ ಕೆಲವೇ ದಿನಗಳಲ್ಲಿ ಎಲ್ಲ ವಿವರಗಳು ಬಹಿರಂಗಗೊಳ್ಳಲಿವೆ.
ಹೊಸ ಹೀರೋ ವಿಡಾ ಜಡ್ ಎಲೆಕ್ಟ್ರಿಕ್ ಸ್ಕೂಟರ್ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಪ್ರಮುಖವಾಗಿ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ನ್ನು ಒಳಗೊಂಡಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವೈಶಿಷ್ಟ್ಯಗಳನ್ನು ಹೊಂದಿದೆ.
ಒಟ್ಟಾರೆಯಾಗಿ ಹೊಸ ಸುಜುಕಿ ಇ ಆಕ್ಸೆಸ್, ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಮತ್ತು ರಾಯಲ್ ಎನ್‌ಫೀಲ್ಡ್ ಫ್ಲೈಯಿಂಗ್ ಫ್ಲಿಯಾ ಸಿ6 ಸೇರಿದಂತೆ ವಿವಿಧ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಅತಿ ಶೀಘ್ರ ದಲ್ಲೇ ಬಿಡುಗಡೆಯಾಗುತ್ತವೆ ಎಂಬ ವಿಚಾರವು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇವುಗಳು ಮಾರಾಟಕ್ಕೆ ಬಂದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ನೋಡಬೇಕಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications