ವರಮಹಾಲಕ್ಷ್ಮಿ ಹಬ್ಬ: ಈ ಬೈಕ್‌ಗಳನ್ನು ಮನೆಗೆ ತರಬಹುದು.. 90 ಕಿಲೋಮೀಟರ್‌ವರೆಗೆ ಮೈಲೇಜ್, ಬೆಲೆಯೂ ಕಮ್ಮಿ!

ವರಮಹಾಲಕ್ಷ್ಮಿ (Varamahalakshmi) ಹಬ್ಬಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಇದೇ 8ರಂದು ಹಬ್ಬ ಬಂದಿದೆ. ಅಂದು ಶ್ರದ್ಧಾ ಭಕ್ತಿಯಿಂದ ಸಂಪತ್ತನ್ನು ಕರುಣಿಸುವ ಮಹಾಲಕ್ಷ್ಮಿಯನ್ನು ಪೂಜಿಸಲಾಗುತ್ತದೆ. ನೀವು ಹಬ್ಬಕ್ಕೆ ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿ ಮಾಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಬಜಾಜ್ ಪ್ಲಾಟಿನಾ 100, ಹೋಂಡಾ ಶೈನ್ 100 ಡಿಎಕ್ಸ್, ಹೀರೋ ಸ್ಪ್ಲೆಂಡರ್ ಪ್ಲಸ್, ಟಿವಿಎಸ್ ರೇಡಿಯನ್ ಹಾಗೂ ಹೋಂಡಾ ಸಿಬಿ 125 ಹಾರ್ನೆಟ್ ಮೋಟಾರ್‌ಸೈಕಲ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

ಬಜಾಜ್ ಪ್ಲಾಟಿನಾ 100 (Bajaj Platina 100):

ಇದು ರೂ.70,611 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 102 ಸಿಸಿ ಏರ್-ಕೂಲ್ಡ್ ಪೆಟ್ರೋಲ್ ಎಂಜಿನ್ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 75 ರಿಂದ 90 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. ಬ್ಲ್ಯಾಕ್ & ರೆಡ್, ಬ್ಲ್ಯಾಕ್ & ಸಿಲ್ವರ್, ಬ್ಲ್ಯಾಕ್ & ಗೋಲ್ಡ್, ಬ್ಲ್ಯಾಕ್ & ಬ್ಲ್ಯೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Varamahalakshmi Festival Best Bikes For Buy Platina Shine 100 DX Splendor Radeon CB125 Hornet

ಈ ಬೈಕ್ ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 70 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಸವಾರರ ರಕ್ಷಣೆಗಾಗಿ ಸಿಬಿಎಸ್ (ಕಂಬೈನ್ಡ್ ಬ್ರೇಕ್ ಸಿಸ್ಟಮ್) ಮತ್ತು ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಶೈನ್ 100 ಡಿಎಕ್ಸ್ (Honda Shine 100 DX):

ಇದನ್ನು ಕೆಲವೇ ದಿನಗಳ ಹಿಂದೆಯಷ್ಟೇ ಬಿಡುಗಡೆಗೊಳಿಸಲಾಯಿತು. ಈ ಮೋಟಾರ್‌ಸೈಕಲ್‌ ರೂ.74,959 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 98.98 ಸಿಸಿ ಸಿಂಗಲ್-ಸಿಲಿಂಡರ್, ಫ್ಯುಯೆಲ್-ಇಂಜೆಕ್ಟೆಡ್ ಪೆಟ್ರೋಲ್ ಎಂಜಿನ್‌ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 70 ಕಿ.ಮೀ ವರೆಗೆ ಮೈಲೇಜ್ ನೀಡಬಹುದು. ಪರ್ಲ್ ಇಗ್ನಿಯಸ್ ಬ್ಲ್ಯಾಕ್ ಮತ್ತು ಇಂಪೀರಿಯಲ್ ರೆಡ್ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

Varamahalakshmi Festival Best Bikes For Buy Platina Shine 100 DX Splendor Radeon CB125 Hornet

ಈ ಬೈಕ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ & ಸೈಡ್-ಸ್ಟ್ಯಾಂಡ್ ಎಂಜಿನ್ ಕಟ್ ಆಫ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫ್ರಂಟ್ ಪೋರ್ಕ್ಸ್ ಮತ್ತು ಹಿಂಭಾಗ (ರೇರ್) 5-ಸ್ಟೆಪ್ ಅಡ್ಜಸ್ಟೇಬಲ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus):

ಇದು ರೂ.79,476 ರಿಂದ ರೂ.83,251 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97.2 ಸಿಸಿ ಏರ್-ಕೂಲ್ಡ್, ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ ಹಾಗೂ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 73 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Varamahalakshmi Festival Best Bikes For Buy Platina Shine 100 DX Splendor Radeon CB125 Hornet

ಟಿವಿಎಸ್ ರೇಡಿಯನ್ (Tvs Radeon):

ಈ ಮೋಟಾರ್‌ಸೈಕಲ್‌ ರೂ.73,518 ರಿಂದ ರೂ. 86,845 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 109.7 ಸಿಸಿ, ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹಾಗೂ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 73 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನಂತಹ ಹಲವು ವೈಶಿಷ್ಟ್ಯಗಳಿವೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಸಿಬಿ125 ಹಾರ್ನೆಟ್ (Honda CB125 Hornet):

ಇದೊಂದು ಸ್ಪೋರ್ಟಿ ಬೈಕ್ ಆಗಿದೆ. ರೂ.1.12 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123.94 ಸಿಸಿ, 4-ಸ್ಟ್ರೋಕ್ ಪೆಟ್ರೋಲ್ ಎಂಜಿನ್ & 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 48 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 4.2-ಇಂಚಿನ ಟಿಎಫ್‌ಟಿ ಡಿಸ್‌ಪ್ಲೇ ಹಾಗೂ ಬ್ಲೂಟೂತ್ ಕನೆಕ್ಟಿವಿಟಿಯಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

Article Published On: Monday, August 4, 2025, 10:47 [IST]
English summary
Varamahalakshmi festival best bikes for buy platina shine 100 dx splendor radeon cb125 hornet
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+