ವರಮಹಾಲಕ್ಷ್ಮಿ ಹಬ್ಬ.. ಮನೆಗೆ ಹೊಸ ಸ್ಕೂಟರ್ ತರಬೇಕೇ.. ಇವು ಬೆಸ್ಟ್ ಚಾಯ್ಸ್, ಬೆಲೆಯೂ ಅಗ್ಗ!
ಇದೇ ಆಗಸ್ಟ್ 8ಕ್ಕೆ ವರಮಹಾಲಕ್ಷ್ಮಿ (Varalakshmi) ಹಬ್ಬ ಬಂದಿದೆ. ಈ ದಿನ ಚಿನ್ನದ ಬದಲಿಗೆ ದಿನಬಳಕೆಗಾಗಿ ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ ರೂ.1 ಲಕ್ಷಕ್ಕಿಂತ ಕಡಿಮೆ (ಎಕ್ಸ್-ಶೋರೂಂ) ಬೆಲೆಯಲ್ಲಿ ಸಿಗುವ ಹೋಂಡಾ ಆಕ್ಟಿವಾ 125, ಸುಜುಕಿ ಆಕ್ಸೆಸ್ 125, ಟಿವಿಎಸ್ ಜುಪಿಟರ್ 125, ಹೀರೋ ಡೆಸ್ಟಿನಿ 125 ಹಾಗೂ ಹೋಂಡಾ ಕ್ಯೂಸಿ1 ಸ್ಕೂಟರ್‌ಗಳು ಅತ್ಯುತ್ತಮವಾದ ಆಯ್ಕೆಯಾಗಲಿವೆ. ನಾವಿಲ್ಲಿ ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಹೋಂಡಾ ಆಕ್ಟಿವಾ 125 (Honda Activa 125):
ಇದು ವಿಶ್ವಾಸಾರ್ಹ ಸ್ಕೂಟರ್ ಆಗಿದ್ದು, ವರಮಹಾಲಕ್ಷ್ಮಿ ಹಬ್ಬದಂದು ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ಕಡಿಮೆ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದ್ದು, ಕನಿಷ್ಠ ರೂ.94,000 ಹಾಗೂ ಗರಿಷ್ಠ ರೂ.97,000 (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್, ಪರ್ಲ್ ಡೀಪ್ ಗ್ರೌಂಡ್ ಗ್ರೇ, ಪರ್ಲ್ ಇಗ್ನಿಯಸ್ ಬ್ಲಾಕ್, ಪರ್ಲ್ ಪ್ರೆಷಿಯಸ್ ವೈಟ್ ಹಾಗೂ ಪರ್ಲ್ ಸೈರನ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಸ್ಕೂಟರ್ 123.92 ಪೆಟ್ರೋಲ್ ಎಂಜಿನ್ ಪಡೆದಿದ್ದು, 47 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಟಿಎಫ್‌ಟಿ ಕನ್ಸೋಲ್, ಚಾರ್ಜಿಂಗ್ ಪೋರ್ಟ್, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 109 ಕೆಜಿ ತೂಕವಿದ್ದು, 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಸುಜುಕಿ ಆಕ್ಸೆಸ್ 125 (Suzuki Access 125):
ಇದೊಂದು ಜನಪ್ರಿಯ ಸ್ಕೂಟರ್ ಎಂದೇ ಹೆಸರುವಾಗಿದ್ದು, ಹಬ್ಬಕ್ಕೆ ಮನೆಗೆ ತರಬಹುದಾಗಿದೆ. ಅಗ್ಗದ ದರದಲ್ಲೂ ಸಿಗಲಿದ್ದು, ರೂ.87,000 ರಿಂದ ರೂ.98,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಶೈನಿ ಬೀಜ್, ಮೆಟಾಲಿಕ್ ಮ್ಯಾಟ್ ಸ್ಟೆಲ್ಲರ್ ಬ್ಲೂ, ಪರ್ಲ್ ಗ್ರೇಸ್ ವೈಟ್ ಮತ್ತು ಮೆಟಾಲಿಕ್ ಮ್ಯಾಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ ಆಕ್ಸೆಸ್ ಸ್ಕೂಟರ್ 125 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 45 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 106 ಕೆಜಿ ತೂಕವಿದ್ದು, 5 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಟಿವಿಎಸ್ ಜೂಪಿಟರ್ 125 (TVS Jupiter 125):
ಈ ಸ್ಕೂಟರ್ ಕನಿಷ್ಠ ರೂ.81,000 ಮತ್ತು ಗರಿಷ್ಠ ರೂ.92,000 (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ವರಮಹಾಲಕ್ಷ್ಮಿ ಹಬ್ಬಕ್ಕೆ ತೆಗೆದುಕೊಳಬಹುದಾಗಿದೆ. ಅತ್ಯಾಧುನಿಕ ವಿನ್ಯಾಸವನ್ನು ಒಳಗೊಂಡಿದೆ. 124 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 57 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೀರೋ ಡೆಸ್ಟಿನಿ 125 (Hero Destini 125):
ಇದು ನಂಬಿಕಾರ್ಹ ಬೈಕ್ ಆಗಿದ್ದು, ಬಜೆಟ್ ಬೆಲೆಯಲ್ಲಿಯೂ ಸಿಗಲಿದೆ. ಹಬ್ಬಕ್ಕೂ ಖರೀದಿ ಮಾಡಬಹುದು. ರೂ.99,000 ರಿಂದ ರೂ.1.13 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 59 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಡಿಸ್‌ಪ್ಲೇ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 115 ಕೆಜಿ ತೂಕವಿದ್ದು, 5.3 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.
ಹೋಂಡಾ ಕ್ಯೂಸಿ1 (Honda QC1)
ಈ ಸ್ಕೂಟರ್‌ನ್ನು ವರಮಹಾಲಕ್ಷ್ಮಿ ಹಬ್ಬಕ್ಕೆ ಮನೆಗೆ ತರಬಹುದು. ರೂ.90,000 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 80 ಕಿ.ಮೀ ಓಡುತ್ತದೆ. ಎಲ್‌ಸಿಡಿ ಡಿಸ್‌ಪ್ಲೇ & ಅನಲಾಗ್ ಕೀ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications