ಹಳ್ಳಿಗಾಡಿನ ರೈತರ ಮಕ್ಕಳ ನೆಚ್ಚಿನ ಬೈಕ್‌ಗಳಿವು.. ದೀರ್ಘಕಾಲ ಬಾಳಿಕೆ, ಬೆಲೆಯೂ ಅಗ್ಗ!

ಭಾರತವು ಕೃಷಿ ಪ್ರಧಾನ ದೇಶವಾಗಿದ್ದು, ಹಳ್ಳಿಗಳ ಸಂಖ್ಯೆ ಹೆಚ್ಚಿದೆ. ಹೊಲಕ್ಕೆ ಹೋಗಲು.. ಡೈರಿಗೆ ಹಾಲು ಹಾಕಲು ಸೇರಿದಂತೆ ಇನ್ನಿತರೆ ಕೆಲಸ ಕಾರ್ಯಗಳಿಗೆ ದ್ವಿಚಕ್ರ ವಾಹನಗಳು ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಬೈಕ್‌ಗಳು ಬೇಕೇ ಬೇಕು. ಪ್ರಮುಖವಾಗಿ ಗ್ರಾಮೀಣ ಭಾಗದ ಜನರು ಕಡಿಮೆ ನಿರ್ವಹಣಾ ವೆಚ್ಚ ಹೊಂದಿರುವ ಹೋಂಡಾ ಸಿಡಿ 110 ಡ್ರೀಮ್, ಬಜಾಜ್ ಸಿಟಿ 110ಎಕ್ಸ್, ಹೀರೋ ಸ್ಪ್ಲೆಂಡರ್ ಪ್ಲಸ್, ಹೀರೋ ಹೆಚ್ಎಫ್ ಡಿಲಕ್ಸ್ & ಬಜಾಜ್ ಪ್ಲಾಟಿನಾ 100 ಮೋಟಾರ್‌ಸೈಕಲ್‌ಗಳನ್ನು ಇಷ್ಟಪಟ್ಟು ಖರೀದಿ ಮಾಡುತ್ತಾರೆ. ಬನ್ನಿ, ಈ ಬೈಕ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮೊದಲಿಗೆ ಹೋಂಡಾ ಸಿಡಿ 110 ಡ್ರೀಮ್ (Honda CD 110 Dream) ಬೈಕ್ ಬಗ್ಗೆ ಮಾತನಾಡೋಣ. ಈ ಮೋಟಾರ್‌ಸೈಕಲ್‌ನ್ನು ಎಂತಹ ರಸ್ತೆಯಲ್ಲಿ ಬೇಕಾದರೂ ಸುಲಭವಾಗಿ ಓಡಿಸಬಹುದು. ಇದು ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಕೇವಲ ರೂ.76,401 (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

Village People Like This Bikes CD 110 Dream CT 110X Splendor HF Deluxe Platina

ಈ ಹೋಂಡಾ ಸಿಡಿ 110 ಡ್ರೀಮ್ ಮೋಟಾರ್‌ಸೈಕಲ್‌ ಬೆಲೆಗೆ ತಕ್ಕಂತೆ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಕೊಂಚ ಹೆಚ್ಚಿನ ಸಾಮರ್ಥ್ಯದ 109.51 ಸಿಸಿ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. ಜೊತೆಗೆ 65 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟೂ-ಪಾಡ್ ಅನಲಾಗ್ ಇನ್ಸ್ಟ್ರುಮೆಂಟ್ ಸೆಟಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಬಜಾಜ್ ಸಿಟಿ 110ಎಕ್ಸ್ (Bajaj CT 110X) ಬಗ್ಗೆ ಹೇಳುವುದಾದರೆ, ಇದನ್ನು ಬಡವರ ಬೈಕ್ ಎಂದು ಕರೆದರೂ ತಪ್ಪಾಗುವುದಿಲ್ಲ. ಅಷ್ಟೊಂದು ಕಡಿಮೆ ಬೆಲೆಯಲ್ಲಿ ಹಳ್ಳಿಗಾಡಿನ ಗ್ರಾಹಕರಿಗೆ ಲಭ್ಯವಿದೆ. ರೂ.70,381 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಜೊತೆಗೆ ನೋಡಲು ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ.

Village People Like This Bikes CD 110 Dream CT 110X Splendor HF Deluxe Platina

ಹೊಸ ಬಜಾಜ್ ಸಿಟಿ 110ಎಕ್ಸ್ ಸಾಕಷ್ಟು ಶಕ್ತಿಯುತವಾದ ಪವರ್‌ಟ್ರೇನ್‌ ಆಯ್ಕೆಯನ್ನೇ ಪಡೆದಿದೆ ಎಂದು ಹೇಳಬಹುದು. ಈ ಮೋಟಾರ್‌ಸೈಕಲ್‌, 115.45 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಮತ್ತು 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 70 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಹಾಗೆಯೇ ಆಕರ್ಷಕ ಬಣ್ಣಗಳೊಂದಿಗೂ ದೊರೆಯಲಿದ್ದು, ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಮೋಟಾರ್‌ಸೈಕಲ್‌ ಕುರಿತಂತೆ ಸಾಮಾನ್ಯ ಕುಗ್ರಾಮದಲ್ಲಿರುವವರಿಗೂ ತಿಳಿದಿದೆ. ಇದು ದೇಶೀಯ ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಮಾರಾಟವಾಗುವ ಬೈಕ್ ಆಗಿ ಹೊರಹೊಮ್ಮಿದೆ. ರೂ.79,096 ರಿಂದ ರೂ.85,001 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 70 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Village People Like This Bikes CD 110 Dream CT 110X Splendor HF Deluxe Platina

ಹೀರೋ ಹೆಚ್ಎಫ್ ಡಿಲಕ್ಸ್ (Hero HF Deluxe) ಈ ಬೈಕ್ ಸಹ ಭಾರೀ ಸಂಖ್ಯೆಯಲ್ಲಿ ಮಾರಾಟವಾಗಲಿದ್ದು, ರೈತರು ಮೆಚ್ಚಿದ್ದಾರೆ. ತೀರಾ ಕಡಿಮೆ ಬೆಲೆಗೂ ಖರೀದಿಗೆ ಲಭ್ಯವಿದೆ. ರೂ.62,500 ರಿಂದ ರೂ.70,400 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97.2 ಸಿಸಿ ಪೆಟ್ರೋಲ್ ಹೊಂದಿದ್ದು, 70 ಕೆಎಂಪಿಎಲ್‌ವರೆಗೆ ಕೊಡುತ್ತದೆ.

ಕಡೆಯದಾಗಿ ಬಜಾಜ್ ಪ್ಲಾಟಿನಾ 100 (Bajaj Platina 100) ಮೋಟಾರ್‌ಸೈಕಲ್‌ ಕುರಿತಂತೆ ಮಾತನಾಡೋಣ. ಇದನ್ನು ಗ್ರಾಮೀಣ ಭಾಗದ ಜನರು ತಾಮುಂದು - ನಾಮುಂದು ಎಂಬಂತೆ ಕೊಂಡುಕೊಳ್ಳುತ್ತಾರೆ. ಈ ಬೈಕ್ ರೂ.69,400 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 102 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 70 ಕೆಎಂಪಿಎಲ್‌ವರೆಗೆ ನೀಡುತ್ತದೆ.

Village People Like This Bikes CD 110 Dream CT 110X Splendor HF Deluxe Platina

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, April 22, 2025, 17:40 [IST]
English summary
Village people like this bikes cd 110 dream ct 110x splendor hf deluxe platina
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+