Women’s Day: ಈ ಸ್ಕೂಟರ್‌ಗಳು ಗಿಫ್ಟ್ ನೀಡಲು ಬೆಸ್ಟ್.. 50+ Km ಮೈಲೇಜ್.. 85,000 ಬೆಲೆ!
ಇಂದು ಅಂತರರಾಷ್ಟ್ರೀಯ ಮಹಿಳಾ ದಿನ (International Women's Day) ಆಚರಿಸಲಾಗುತ್ತದೆ. ಈ ದಿನ ಮಹಿಳೆಯರ ಹಕ್ಕುಗಳ ಸಂಬಂಧ ಜಾಗೃತಿ ಮೂಡಿಸಲಾಗುತ್ತದೆ. ನೀವು ಮಹಿಳಾ ದಿನದಂದು ನಿಮ್ಮ ತಾಯಿ, ಸಹೋದರಿ ಅಥವಾ ಪತ್ನಿಗೆ ನೂತನ ಸ್ಕೂಟರ್‌ವೊಂದನ್ನು ಗಿಫ್ಟ್ ನೀಡಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಹೋಂಡಾ ಆಕ್ಟಿವಾ 110 (Honda Activa 110), ಟಿವಿಎಸ್ ಜೂಪಿಟರ್ 110 (TVS Jupiter 110), ಸುಜುಕಿ ಆಕ್ಸೆಸ್ 125 (Suzuki Access 125), ಟಿವಿಎಸ್ ಎನ್‌ಟಾರ್ಕ್ (TVS Ntorq) ಹಾಗೂ ಹೀರೋ ಜೂಮ್ 125 (Hero Xoom 125) ಮಾಡೆಲ್‌ಗಳು ಹೆಚ್ಚು ಸೂಕ್ತವಾಲಿವೆ.
ಹೋಂಡಾ ಆಕ್ಟಿವಾ 110: ಇದು ರೂ.80,950 ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 109.51 ಸಿಸಿ ಏರ್-ಕೋಲ್ಡ್ ಸಿಂಗಲ್-ಸಿಂಗಲ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 59.5 ಕೆಎಂಪಿಎಲ್‌ವರೆಗೆ ಕೊಡಬಹುದು ಎಂದು ಅಂದಾಜಿಸಲಾಗಿದೆ. ಡಿಸೆಂಟ್ ಬ್ಲೂ ಮೆಟಾಲಿಕ್, ರೆಬೆಲ್ ರೆಡ್ ಮೆಟಾಲಿಕ್ & ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಎಂಬ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಆಕ್ಟಿವಾ 110 ಸ್ಕೂಟರ್ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಹಾಗೂ ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಫ್ರಂಟ್ ಟೆಲಿಸ್ಕೋಪಿಕ್ ಫೋರ್ಕ್ & ರೇರ್ ಸಿಂಗಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಟಿವಿಎಸ್ ಜೂಪಿಟರ್ 110: ಈ ಸ್ಕೂಟರ್ ರೂ.78,391 ರಿಂದ ರೂ.92,366 ಎಕ್ಸ್-ಶೋರೂಂ ದರವನ್ನು ಪಡೆದಿದೆ. 113.3 ಸಿಸಿ, 4-ಸ್ಟ್ರೋಕ್, ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್ ಒಬಿಡಿ-2ಬಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 53 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ ಎಂದು ಹೇಳಲಾಗಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುಜುಕಿ ಆಕ್ಸೆಸ್ 125: ಇದೊಂದು ಜನಪ್ರಿಯ ಸ್ಕೂಟರ್ ಆಗಿದೆ. ರೂ.81,700 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 125 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 45 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಕೊಂಡಿದೆ.
ಟಿವಿಎಸ್ ಎನ್‌ಟಾರ್ಕ್: ಈ ಸ್ಕೂಟರ್ ರೂ.93,126 ರಿಂದ ರೂ.1.09 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 47 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್ ಬ್ರೇಕ್ ಆಯ್ಕೆಯನ್ನು ಪಡೆದಿದೆ.

ಹೀರೋ ಜೂಮ್ 125: ಇದು ರೂ.86,900 ಎಕ್ಸ್-ಶೋರೂಂ ಬೆಲೆಯನ್ನು ಪಡೆದಿದೆ. 124.6 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 45 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡಬಹುದು ಎನ್ನಲಾಗಿದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications