Women's day: ನಿಮ್ಮ ಮೆಚ್ಚಿನ ಅಮ್ಮ & ಸಹೋದರಿಗೆ ಗಿಫ್ಟ್ ನೀಡಬೇಕೇ.. ಈ ಎಲೆಕ್ಟ್ರಿಕ್ ಸ್ಕೂಟರ್‌ಗಳು ಬೆಸ್ಟ್!
ಪ್ರತಿವರ್ಷ ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ (International Women's Day) ಆಚರಿಸಲಾಗುತ್ತದೆ. ಈ ದಿನ ಮಹಿಳೆಯರ ಹಕ್ಕಿನ ಸಂಬಂಧ ಜಾಗೃತಿಯನ್ನು ಮೂಡಿಸಲಾಗುತ್ತದೆ. ನೀವು ಮಹಿಳಾ ದಿನಾಚರಣೆಯಂದು ನಿಮ್ಮ ತಾಯಿ, ಸಹೋದರಿ ಅಥವಾ ಮಡದಿಗೆ ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಉಡುಗೊರೆಯಾಗಿ ನೀಡಲು ಆಲೋಚಿಸಿದ್ದೀರಾ.. ಹಾಗಾದರೆ, ಹೀರೋ ವಿಡಾ ವಿ2, ಎಥರ್ ರಿಜ್ಟಾ, ಓಲಾ ಎಸ್1ಎಕ್ಸ್, ಟಿವಿಎಸ್ ಐಕ್ಯೂಬ್ ಹಾಗೂ ಬಜಾಜ್ ಚೇತಕ್ ಮಾಡೆಲ್‌ಗಳು ಹೆಚ್ಚು ಸೂಕ್ತವಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮೊದಲಿಗೆ ಹೀರೋ ವಿಡಾ ವಿ2 (Hero Vida V2) ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಮಾತನಾಡೋಣ. ಇದು ವಿ2 ಲೈಟ್, ವಿ2 ಪ್ಲಸ್ ಮತ್ತು ವಿ2 ಪ್ರೊ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿಗೆ ದೊರೆಯುತ್ತದೆ. ಕ್ರಮವಾಗಿ ರೂ.96,000, ರೂ.1.15 ಲಕ್ಷ ಮತ್ತು ರೂ.1.35 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಈ ವಿಡಾ ವಿ2 ಇ-ಸ್ಕೂಟರ್ 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 3.44 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 3.94 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 94 ರಿಂದ 165 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 7-ಇಂಚಿನ ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಎಥರ್ ರಿಜ್ಟಾ (Ather Rizta) ಕುರಿತಂತೆ ಹೇಳುವುದಾದರೆ, ಈ ನೂತನ ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್ ಕನಿಷ್ಠ ರೂ.1.10 ಲಕ್ಷ ಮತ್ತು ಗರಿಷ್ಠ ರೂ.1.46 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 2.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 3.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್ ಕ್ರಮಿಸುತ್ತದೆ. ಎಲ್‌ಸಿಡಿ ಸ್ಕ್ರೀನ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಓಲಾ ಎಸ್1 ಎಕ್ಸ್ (Ola S1X) ಅಗ್ಗದ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. 2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. 4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ರೂ.79,999 ರಿಂದ ರೂ.99,999 (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಸಂಪೂರ್ಣ ಚಾರ್ಜ್‌ನಲ್ಲಿ 108 ರಿಂದ 242 ಕಿಲೋಮೀಟರ್ ಕ್ರಮಿಸುತ್ತದೆ.
ಟಿವಿಎಸ್ ಐಕ್ಯೂಬ್ (TVS iQube) ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಹೇಳುವುದಾದರೆ, ಇದು ಕನಿಷ್ಠ ರೂ.1.07 ಹಾಗೂ ರೂ.1.37 ಲಕ್ಷ (ಎಕ್ಸ್- ಶೋರೂಂ) ದರವನ್ನು ಹೊಂದಿದೆ. 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 3.04 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 5.1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 75 ರಿಂದ 150 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 7-ಇಂಚಿನ ಫುಲ್ ಕಲರ್ ಟಿಎಫ್‌ಟಿ ಸ್ಕ್ರೀನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಕಡೆಯದಾಗಿ ಬಜಾಜ್ ಚೇತಕ್ 35 ಸೀರೀಸ್ (Bajaj Chetak 35 Series) ಎಲೆಕ್ಟ್ರಿಕ್ ಸ್ಕೂಟರ್‌ಗಳ ಕುರಿತಂತೆ ಮಾತನಾಡುವುದಾದರೆ, ಇವು ರೂ.1.20 ರಿಂದ ರೂ.1.27 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿವೆ. 3501 & 3502 ಎಂಬ ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದ್ದು, ಭರ್ತಿ ಚಾರ್ಜ್‌ನಲ್ಲಿ 150 ಕಿಲೋಮೀಟರ್ ಕ್ರಮಿಸಬಲ್ಲವು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications