Yamaha: 48.58 ಕಿ.ಮೀ ಮೈಲೇಜ್! ಹೊಸ ರೆಟ್ರೋ ಸ್ಟೈಲ್ ಯಮಹಾ ಬೈಕ್ ಬಿಡುಗಡೆ.. ಬೆಲೆ ಇಷ್ಟೆನಾ, ವಿಶೇಷತೆಗಳೇನು?
ಬಹುನಿರೀಕ್ಷಿತ ಯಮಹಾ ಎಕ್ಸ್ಎಸ್ಆರ್ 155 (Yamaha XSR 155) ಮೋಟಾರ್‌ಸೈಕಲ್ ಮಂಗಳವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಈ ಬೈಕ್‌ನ್ನು ಯುವ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಸಿದ್ದಪಡಿಸಲಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಎಲ್ಲರ ಕಣ್ಣು ಕುಕ್ಕುವಂತಿದೆ. ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬನ್ನಿ, ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಹೊಚ್ಚ ಹೊಸ 'ಯಮಹಾ ಎಕ್ಸ್ಎಸ್ಆರ್ 155' ಬೈಕ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.1,49,990 (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಖರೀದಿದಾರರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ.

ಈ 'ಎಕ್ಸ್ಎಸ್ಆರ್ 155' ರೆಟ್ರೋ ಸ್ಪೋರ್ಟ್ ಸ್ಟೈಲ್ ವಿನ್ಯಾಸವನ್ನು ಹೊಂದಿದೆ. ರೌಂಡ್ ಎಲ್ಇಡಿ ಹೆಡ್‌ಲ್ಯಾಂಪ್, ಟಿಯರ್‌ಡ್ರಾಪ್ ಶೇಪ್ಡ್ ಫ್ಯುಯೆಲ್ ಟ್ಯಾಂಕ್, ಟೈಲ್‌ಲೈಟ್ ಹಾಗೂ ಫ್ಲಾಟ್ ಬೆಂಚ್ ಸೀಟ್‌ನ್ನು ಪಡೆದಿದೆ. ಮೆಟಾಲಿಕ್ ಗ್ರೇ, ವಿವಿಡ್ ರೆಡ್, ಗ್ರೇಯಿಶ್ ಗ್ರೀನ್ ಮೆಟಾಲಿಕ್ ಮತ್ತು ಮೆಟಾಲಿಕ್ ಬ್ಲೂ ಎಂಬ ನಾಲ್ಕು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು ಹೆಚ್ಚು ವಿಶಾಲ ಗಾತ್ರದಲ್ಲಿದೆ. 2005 ಮಿ.ಮೀ ಉದ್ದ, 805 ಮಿ.ಮೀ ಅಗಲ ಹಾಗೂ 180 ಮಿ.ಮೀ ಎತ್ತರವಿದೆ. ಜೊತೆಗಿದು 120 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1325 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 137 ಕೆಜಿ ತೂಕವಿದೆ.

ನೂತನ 'ಯಮಹಾ ಎಕ್ಸ್ಎಸ್ಆರ್ 155' ಮೋಟಾರ್‌ಸೈಕಲ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 155 ಸಿಸಿ ಲಿಕ್ವಿಡ್-ಕೂಲ್ಡ್, 4-ವಾಲ್ವ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 18.1 ಬಿಎಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 14.2 ಎನ್‌ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 48.58 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ಈ ಬೈಕ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಸ್ಮಾರ್ಟ್‌ಫೋನ್ ಬ್ಲ್ಯೂಟೂತ್ ಕನೆಕ್ಟಿವಿಟಿ ಹಾಗೂ ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್‌ನ್ನು ಹೊಂದಿದೆ. ಸರಿ ಸುಮಾರು 10 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ. ಸೀಟ್ ಎತ್ತರ 810 ಮಿ.ಮೀ ಇದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಮುಂಭಾಗ (ಫ್ರಂಟ್) ಯುಎಸ್‌ಡಿ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ. 17 ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ.
ಯಮಹಾ ಎಫ್‌ಝಡ್-ರೇವ್ (Yamaha FZ-RAVE) ಮೋಟಾರ್‌ಸೈಕಲ್ ಕೂಡ ಮಾರಾಟಕ್ಕೆ:
ಇದು ರೂ.1,17,218 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 149 ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್, 2-ವಾಲ್ವ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 12.2 ಬಿಎಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 13.3 ಎನ್‌ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಜೊತೆಗೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಯಮಹಾ ಏರೋಕ್ಸ್ ಎಲೆಕ್ಟ್ರಿಕ್ (Yamaha Aerox Electric) ಸಹ ಅನಾವರಣ:
ಈ ಸ್ಕೂಟರ್ ರೂ.2.90 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. 3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಡಿಟ್ಯಾಚೇಬಲ್ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 106 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ನವೀನ ಶೈಲಿಯ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








