ಇದು ರಸ್ತೆ ಮೇಲಿನ ಅಂಬಾರಿ.. ಹೊಸ Yezdi Adventure ಮೋಟಾರ್‌ಸೈಕಲ್ ಕುರಿತ ಪ್ರಮುಖಾಂಶಗಳಿವು!
ಬಹುನಿರೀಕ್ಷಿತ 2025ರ ಯೆಜ್ಡಿ ಅಡ್ವೆಂಚರ್ (Yezdi Adventure) ಬೈಕ್‌ನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಇದು ನವೀಕರಿಸಿದ ಮಾಡೆಲ್ ಆಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ನೋಡುಗರ ಸೆಳೆಯುವ ವಿನ್ಯಾಸ ಹೊಂದಿದ್ದು, ಐಷಾರಾಮಿ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಹಾಗೆಯೇ ಬಜೆಟ್ ಬೆಲೆಯಲ್ಲೂ ಸಿಗುತ್ತದೆ. ನೀವು ಹೊಚ್ಚ ಹೊಸ ಯೆಜ್ಡಿ ಅಡ್ವೆಂಚರ್ ಮೋಟಾರ್‌ಸೈಕಲ್‌ನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ನಾವಿಲ್ಲಿ ಈ ನೂತನ ಬೈಕ್‌ನ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ (Price): ಹೊಸ ಯೆಜ್ಡಿ ಅಡ್ವೆಂಚರ್ ಮೋಟಾರ್‌ಸೈಕಲ್ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ರೂ.2.15 ಲಕ್ಷ ಎಕ್ಸ್-ಶೋರೂಂ ದರವನ್ನು ಹೊಂದಿದೆ. ಬಿಡುಗಡೆಯಾದ ದಿನದಿಂದಲೇ ವಿತರಣೆಯನ್ನು ಕೂಡ ಶುರು ಮಾಡಲಾಗಿದೆ. ಆಸಕ್ತ ಗ್ರಾಹಕರು ಸಮೀಪದ ಶೋರೂಂಗೆ ಭೇಟಿ ನೀಡಿ, ಕೊಂಡುಕೊಳ್ಳಬಹುದು.

ವಿನ್ಯಾಸ & ಬಣ್ಣಗಳು (Design & Colors): ನೂತನ ಬೈಕ್ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಟ್ವಿನ್ - ಎಲ್ಇಡಿ ಹೆಡ್‌ಲೈಟ್‌ಗಳು ಹಾಗೂ ಡುಯಲ್ - ಎಲ್ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ. ಫಾರೆಸ್ಟ್ ಗ್ರೀನ್, ವುಲ್ಫ್ ಗ್ರೇ, ಟೊರ್ನಾಡೊ ಬ್ಲ್ಯಾಕ್ ಹಾಗೂ ಗ್ಲೇಸಿಯರ್ ವೈಟ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಕಾರ್ಯಕ್ಷಮತೆ (Permanence): ಈ ಮೋಟಾರ್‌ಸೈಕಲ್ 334 ಸಿಸಿ ಒಬಿಡಿ-2ಬಿ ಸಿಂಗಲ್-ಸಿಲಿಂಡರ್, ಲಿಕ್ವಿಡ್-ಕೂಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 29.60 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 29.60 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 33 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡಬಲ್ಲದು.

ವೈಶಿಷ್ಟ್ಯಗಳು (Features): ಇದು ನಾನಾ ರೀತಿಯ ವೈಶಿಷ್ಟ್ಯಗಳನ್ನು ಪಡೆದಿದೆ. ಎಲ್ಇಡಿ ಡಿಸ್‌ಪ್ಲೇ, ಅಡ್ಜಸ್ಟಬಲ್ ವೈಸರ್, ಟ್ರಾಕ್ಷನ್ ಕಂಟ್ರೋಲ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿಯನ್ನು ಒಳಗೊಂಡಿದೆ. ರೋಡ್, ರೈನ್ & ಆಫ್-ರೋಡ್ ಎಂಬ 3 ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮೋಡ್‌ಗಳನ್ನು ಹೊಂದಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System): ಹೊಸ ಬೈಕ್ ಸವಾರರಿಗೆ ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು ಮುಂದೆ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂದೆ (ರೇರ್) 7-ಸ್ಟೆಪ್ ಪ್ರಿಲೋಡ್ ಅಡ್ಜಸ್ಟಬಲ್ ಮಾನೋಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಜೊತೆಗೆ ಡಬಲ್ ಡಿಸ್ಕ್ ಬ್ರೇಕ್ ಆಯ್ಕೆಯನ್ನು ಒಳಗೊಂಡಿದೆ.

ಯೆಜ್ಡಿ ಅಡ್ವೆಂಚರ್‌ಗೆ ಎದುರಾಳಿ ಬೈಕ್‌ಗಳಿವು..
ರಾಯಲ್ ಎನ್‌ಫೀಲ್ಡ್ ಹಿಮಾಲಯನ್ (Royal Enfield Himalayan): ಇದು ರೂ.2.85 ಲಕ್ಷದಿಂದ ರೂ.2.98 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 452 ಸಿಸಿ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 30 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.
ಸುಜುಕಿ ವಿ-ಸ್ಟ್ರೋಮ್ ಎಸ್‌ಎಕ್ಸ್ (Suzuki V-Strom SX): ಈ ಮೋಟಾರ್‌ಸೈಕಲ್ ರೂ.2.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 249 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಪಡೆದಿದೆ. 32 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಇದು ಬರೊಬ್ಬರಿ 167 ಕೆಜಿ ತೂಕವಿದ್ದು, ಡಬಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








