ಯುವಕರ ನೆಚ್ಚಿನ ಬೈಕ್‌ಗಳಿವು.. ನೋಡೋಕೆ ಸುಂದರ, ಕೈಗೆಟುಕುವ ಬೆಲೆ.. ಮೈಲೇಜ್ ಕೂಡ ಜಾಸ್ತಿ!

ಯುವಕರಿಗೆ ಬೈಕ್‌ಗಳೆಂದರೆ ಪಂಚಪ್ರಾಣ.. ಬಹುತೇಕರು ಬಜೆಟ್ ಬೆಲೆಯಲ್ಲಿ ಸಿಗುವ ಪ್ರೀಮಿಯಂ·ಮೋಟಾರ್‌ಸೈಕಲ್‌ಗಳನ್ನು ಖರೀದಿಸಲು ಹುಡುಕಾಟವನ್ನು ನಡೆಸುತ್ತಿರುತ್ತಾರೆ. ಆದರೆ, ಯಾವ ಬೈಕ್ ತೆಗೆದುಕೊಂಡರೆ ಹೆಚ್ಚು ಉತ್ತಮವಾಗಿರುತ್ತದೆ ಎಂಬ ಗೊಂದಲದಲ್ಲಿರುತ್ತಾರೆ. ನೀವು ಹೊಚ್ಚ ಹೊಸ ಪ್ರೀಮಿಯಂ·ಮೋಟಾರ್‌ಸೈಕಲ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿಸುತ್ತೀರಾ.. ಹಾಗಾದರೆ, ಟಿವಿಎಸ್ ಅಪಾಚೆ ಆರ್‌ಟಿಆರ್ 160, ರಾಯಲ್ ಎನ್‌ಫೀಲ್ಡ್ ಹಂಟರ್ 350, ಬಜಾಜ್ ಪಲ್ಸರ್ ಎನ್160 ಹಾಗೂ ಹೀರೋ ಕರಿಜ್ಮಾ ಎಕ್ಸ್‌ಎಂಆರ್ ಮಾಡೆಲ್‌ಗಳು ಹೆಚ್ಚು ಸೂಕ್ತವಾಗಲಿವೆ.

ಮೊದಲಿಗೆ ಟಿವಿಎಸ್ ಅಪಾಚೆ ಆರ್‌ಟಿಆರ್ 160 (TVS Apache RTR 160) ಬೈಕ್ ಕುರಿತಂತೆ ಮಾತನಾಡುವುದಾದರೆ, ಕನಿಷ್ಠ ರೂ.1.10 ಲಕ್ಷ ಹಾಗೂ ಗರಿಷ್ಠ ರೂ.1.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 159.7 ಸಿಸಿ ಏರ್-ಕೋಲ್ಡ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 16.04 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 13.85 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

Youth Like This Bikes Affordable Price Good Mileage Apache Hunter Pulsar Karizma

ಈ ಮೋಟಾರ್‌ಸೈಕಲ್‌ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಕೇವಲ 17.37 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಎಲ್‌ವರೆಗೆ ವೇಗವನ್ನು ಹೊಂದಲಿದೆ. ಪುಲ್ ಡಿಜಿಟಲ್ ಕನ್ಸೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 137 ಕೆಜಿ ತೂಕವಾಗಿದ್ದು, ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

ರಾಯಲ್ ಎನ್‌ಫೀಲ್ಡ್ ಹಂಟರ್ 350 (Royal Enfield Hunter 350)·ಮೋಟಾರ್‌ಸೈಕಲ್‌ ಕುರಿತಂತೆ ಹೇಳುವುದಾದರೆ, ಇದು ರೂ.1.50 ಲಕ್ಷದಿಂದ ರೂ.1.72 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 349 ಸಿಸಿ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್ ಹೊಂದಿದೆ. 20.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 27 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

Youth Like This Bikes Affordable Price Good Mileage Apache Hunter Pulsar Karizma

ಹೊಸ ರಾಯಲ್ ಎನ್‌ಫೀಲ್ಡ್ ಹಂಟರ್ 350 ಬೈಕ್ 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 36.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡಬಲ್ ಡಿಸ್ಕ್ ಬ್ರೇಕ್ ಮತ್ತು ಸಿಂಗಲ್-ಚಾನೆಲ್ ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್) ಆಯ್ಕೆಯನ್ನು ಹೊಂದಿದೆ. ಇದು 81 ಕೆಜಿ ತೂಕವಿದ್ದು, 13 ಲೀ. ಫ್ಯುಯೆಲ್ ಟ್ಯಾಂಕ್‌ನ್ನು ಒಳಗೊಂಡಿದೆ.

ಬಜಾಜ್ ಪಲ್ಸರ್ ಎನ್160 (Bajaj Pulsar N160) ಮೋಟಾರ್‌ಸೈಕಲ್‌ ಬಗ್ಗೆ ತಿಳಿಸುವುದಾದರೆ, ಇದು ಕನಿಷ್ಠ ರೂ.1.22 ಲಕ್ಷದಿಂದ ರೂ.1.43 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 164.82 ಸಿಸಿ ಪೆಟ್ರೋಲ್ ಎಂಜಿನ್ ಪಡೆದಿದ್ದು, 59.11 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Youth Like This Bikes Affordable Price Good Mileage Apache Hunter Pulsar Karizma

ಕಡೆಯದಾಗಿ ಹೀರೋ ಕರಿಜ್ಮಾ ಎಕ್ಸ್‌ಎಂಆರ್ (Hero Karizma XMR) ಕುರಿತಂತೆ ಮಾತನಾಡುವುದಾದರೆ, ಈ ಬೈಕ್ ರೂ.1.81 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 210 ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 41.55 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಸವಾರರ ರಕ್ಷಣೆಗಾಗಿ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

Youth Like This Bikes Affordable Price Good Mileage Apache Hunter Pulsar Karizma

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, March 16, 2025, 13:16 [IST]
English summary
Youth like this bikes affordable price good mileage apache hunter pulsar karizma
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+