Bajaj: ಬಿಡುಗಡೆಗೂ ಮೊದಲೇ ಶೋರೂಂಗೆ ಬಂತು ಹೊಸ ಬಜಾಜ್ ಪಲ್ಸರ್ ಬೈಕ್.. ಬೆಲೆಯೂ ಕಮ್ಮಿ, ವಿಶೇಷತೆಗಳೇನು?
ಬಜಾಜ್ ಪಲ್ಸರ್ (Bajaj Pulsar) ಪ್ರಖ್ಯಾತ ಮೋಟಾರ್‌ಸೈಕಲ್ ಆಗಿ ಹೊರಹೊಮ್ಮಿದೆ. ಇದು ವಿವಿಧ ರೂಪದಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಿದೆ. ಸದ್ಯ ಈ ಬೈಕ್‌ನ ಲೈನ್ಅಪ್‌ನ್ನು ವಿಸ್ತರಿಸಲು ಕಂಪನಿಯು ಮುಂದಾಗಿದೆ. ಅತಿ ಶೀಘ್ರದಲ್ಲೇ ನವೀಕರಿಸಿದ 'ಪಲ್ಸರ್ 125'ನ್ನು ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹೊಸ ಮೋಟಾರ್‌ಸೈಕಲ್ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿರಲಿದ್ದು, ನಾನಾ ಬಗೆಯ ಹೊಸತನಗಳಿಗೂ ಸಾಕ್ಷಿಯಾಗಿರುವ ನಿರೀಕ್ಷೆಯಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ದೇಶಾದ್ಯಂತ ಹಲವು ಡೀಲರ್‌ಶಿಪ್‌ಗಳಿಗೆ 2026ರ ನೂತನ 'ಬಜಾಜ್ ಪಲ್ಸರ್ 125' ಬೈಕ್‌ನ್ನು ತಲುಪಿಸುವ ಕಾರ್ಯಕ್ಕೆ ಕಂಪನಿಯು ಚಾಲನೆ ನೀಡಿದೆ. ಈ ಬಗ್ಗೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಪ್ರಸ್ತುತ ಇದೇ ಮೋಟಾರ್‌ಸೈಕಲ್ ರೂ.86,278 ರಿಂದ ರೂ.94,995 (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಆದರೆ ಹೊಸ ಬೈಕ್ ರೂಪಾಂತರಗಳನ್ನು ಅವಲಂಭಿಸಿ, ರೂ.2,500 ರಿಂದ ರೂ.3,000 ವರೆಗೆ ದುಬಾರಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.

2026ರ 'ಬಜಾಜ್ ಪಲ್ಸರ್ 125' ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ನವೀಕೃತ ಫ್ಯಾಸಿಯಾವನ್ನು ಹೊಂದಿದೆ. ಗ್ರಾಫಿಕ್ಸ್ ಹೊಸದಾಗಿದ್ದು, ಫ್ರೆಶ್ ಲುಕ್ ನೀಡುತ್ತದೆ. ವಿನೂತನವಾದ ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಎಲ್ಇಡಿ ಟರ್ನ್ ಇಂಡಿಕೇಟರ್‌ಗಳನ್ನು ಒಳಗೊಂಡಿದೆ. ಸಿಗ್ನೇಚರ್ ಟೈಲ್‌ಲೈಟ್‌ನ್ನು ಯಾವುದೇ ರೀತಿಯಲ್ಲಿ ಮಾರ್ಪಾಡು ಮಾಡಿಲ್ಲ. 4 ಆಕರ್ಷಕವಾದ ಬಣ್ಣಗಳೊಂದಿಗೂ ಲಭ್ಯವಾಗಬಹುದು ಎನ್ನಲಾಗಿದೆ.
ಈ ಬೈಕ್ ಪವರ್‌ಟ್ರೇನ್‌ನಲ್ಲಿ ಯಾವುದೇ ಬದಲಾವಣಿಗಳಿರುವುದಿಲ್ಲ ಎಂಬ ವಿವರಗಳು ದೊರೆತಿವೆ. 124.4-ಸಿಸಿ 4-ಸ್ಟ್ರೋಕ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿರಲಿದೆ. 11.8 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿರಲಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿರಲಿದೆ. 55 ಕಿಲೋಮೀಟರ್‌ವರೆಗೆ ಮೈಲೇಜ್‌ನ್ನು ನೀಡಬಹುದು ಎಂದು ಹೇಳಲಾಗಿದೆ.
ಇದರಲ್ಲೂ ಈಗಿರುವ ಮಾಡೆಲ್‌ನಂತೆ ಫುಲ್ ಡಿಜಿಟಲ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಯಥಾಸ್ಥಿತಿಯಲ್ಲಿ ಮುಂದಿವರಿಸುವ ಸಾಧ್ಯತೆಯಿದೆ. 17-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ. 11.5 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.
ಹೊಸ 'ಬಜಾಜ್ ಪಲ್ಸರ್ 125' ಮೋಟಾರ್‌ಸೈಕಲ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಗ್ಯಾಸ್-ಚಾರ್ಜ್ಡ್ ಟ್ವಿನ್ ಸ್ಪ್ರಿಂಗ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
ಇತ್ತೀಚೆಗೆ ಮಾರಾಟಕ್ಕೆ ಬಂದ 'ಬಜಾಜ್ ಪಲ್ಸರ್ 150' ವಿಶೇಷತೆಗಳೇನು:
ಈ ಬೈಕ್ ರೂ.1.08 ಲಕ್ಷದಿಂದ ರೂ.1.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್‌ಇಡಿ ಟರ್ನ್ ಇಂಡಿಕೇಟರ್‌ಗಳು ಮತ್ತು ಎಲ್‌ಇಡಿ ಟೈಲ್ ಲ್ಯಾಂಪ್‌ನ್ನು ತನ್ನದಾಗಿಸಿಕೊಂಡಿದೆ. ಸ್ಪಾರ್ಕ್ಲಿ ಬ್ಲ್ಯಾಕ್ ರೆಡ್, ಸ್ಪಾರ್ಕ್ಲಿ ಬ್ಲ್ಯಾಕ್ ಬ್ಲೂ ಮತ್ತು ಸ್ಪಾರ್ಕ್ಲಿ ಬ್ಲ್ಯಾಕ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,345 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ಇದು 149.5-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 46 ರಿಂದ 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಅಲಾಯ್ ವೀಲ್‌ಗಳು & ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ. ಸಿಂಗಲ್-ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
Image Source link: Bikedekho


Click it and Unblock the Notifications








