Ather: 1.05 ಲಕ್ಷ.. 160 Km ರೇಂಜ್, ಜನಪ್ರಿಯ ಎಥರ್ ರಿಜ್ಟಾಗೆ ಮನಸೋತ ಗ್ರಾಹಕರು.. ಪ್ರತಿದಿನ 460 ಸ್ಕೂಟರ್‌ಗಳು ಸೇಲ್ಸ್!

ಎಥರ್ ರಿಜ್ಟಾ (Ather Rizta) ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್-2025) ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 14,282 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 7,456 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 44.97% ಬೆಳವಣಿಗೆಯಾಗಿದೆ.

ಡಿಸೆಂಬರ್‌ನಲ್ಲಿ 'ಎಥರ್ ರಿಜ್ಟಾ' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಇದು ದಿನಬಳಕೆಗೂ ಹೆಚ್ಚು ಸೂಕ್ತವಾಗಿದೆ. ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. ಪುರುಷ ಹಾಗೂ ಮಹಿಳೆಯರು ಸುಲಭವಾಗಿ ಬಳಕೆ ಮಾಡಬಹುದು. ಹೀಗಾಗಿ, 'ರಿಜ್ಟಾ' ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

Ather Rizta December 2025 Sales Report

'ಎಥರ್ ರಿಜ್ಟಾ' ವಿಶೇಷತೆಗಳೇನು:

ಈ ಎಲೆಕ್ಟ್ರಿಕ್ ಸ್ಕೂಟರ್ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.1.05 ಲಕ್ಷದಿಂದ ರೂ.1.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ರಿಜ್ಟಾ ಎಸ್ ಮತ್ತು ರಿಜ್ಟಾ ಝಡ್ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಬಾಕ್ಸಿ ಆಕಾರದಲ್ಲಿದೆ. ಬಾರ್-ಟೈಪ್ ಎಲ್ಇಡಿ ಹೆಡ್‌ಲ್ಯಾಂಪ್‌, ಎಲ್ಇಡಿ ಟರ್ನ್ ಸಿಗ್ನಲ್ ಲೈಟ್‌ಗಳು ಮತ್ತು ಎಲ್ಇಡಿ ಟೈಲ್‌ಲೈಟ್‌ನ್ನು ಒಳಗೊಂಡಿದೆ. ಡೆಕ್ಕನ್ ಗ್ರೇ, ಸಿಯಾಚಿನ್ ವೈಟ್, ಪ್ಯಾಂಗಾಂಗ್ ಬ್ಲೂ ಮತ್ತು ಟೆರಾಕೋಟಾ ರೆಡ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ 'ಎಥರ್ ರಿಜ್ಟಾ' ದೊಡ್ಡ ಗಾತ್ರದಲ್ಲಿರುವ ಇ-ಸ್ಕೂಟರ್ ಆಗಿದೆ. 1,850 ಎಂಎಂ ಉದ್ದ, 750 ಎಂಎಂ ಅಗಲ ಹಾಗೂ 1,140 ಎಂಎಂ ಎತ್ತರವಿದೆ. 150 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,285 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 125 ಕೆಜಿ ತೂಕವಿದೆ.

ಈ ಎಲೆಕ್ಟ್ರಿಕ್ ಸ್ಕೂಟರ್ ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 2.9 ಹಾಗೂ 3.7 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯ ಬ್ಯಾಟರಿ ಪ್ಯಾಕ್‌ಗಳನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡುತ್ತದೆ.

ಇದು 7 ಇಂಚಿನ ಎಲ್‌ಸಿಡಿ ಸ್ಕ್ರೀನ್, ಮಲ್ಟಿ ಪರ್ಪಸ್ ಚಾರ್ಜರ್ ಮತ್ತು ಪಿಲಿಯನ್ ಬ್ಯಾಕ್‌ರೆಸ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸ್ಮಾರ್ಟ್, ಇಕೋ & ಜಿಪ್ ಎಂಬ 3 ರೈಡಿಂಗ್ ಮೋಡ್‌ಗಳನ್ನು ಪಡೆದಿದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 4.7 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ 'ಎಥರ್ ರಿಜ್ಟಾ' ಬ್ಯಾಟರಿ ಪ್ಯಾಕ್‌, ಮನೆಯ ಪೋರ್ಟಬಲ್ ಚಾರ್ಜರ್‌ ಬಳಕೆಯಲ್ಲಿ ಸರಿ ಸುಮಾರು 8 ಗಂಟೆ 30 ನಿಮಿಷಗಳಲ್ಲಿ ಪೂರ್ತಿಯಾಗಿ ಚಾರ್ಜ್ ಆಗಿ ಬಿಡುತ್ತದೆ. 34 ಲೀಟರ್‌ನಷ್ಟು ಅಂಡರ್ ಸೀಟ್ ಸ್ಟೋರೇಜ್‌ನ್ನು ಹೊಂದಿದೆ. 12-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.

ಈ ಎಲೆಕ್ಟ್ರಿಕ್ ಸ್ಕೂಟರ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಇದರೊಂದಿಗೆ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ನೂತನ 'ಎಥರ್ ರಿಜ್ಟಾ' ಇ-ಸ್ಕೂಟರ್‌ಗೆ ಹಲವು ಪ್ರತಿಸ್ಪರ್ಧಿಗಳಿವೆ. ಓಲಾ ಎಸ್1 ಎಕ್ಸ್, ಬಜಾಜ್ ಚೇತಕ್, ಹೀರೋ ವಿಡಾ ವಿಎಕ್ಸ್2, ಆಂಪಿಯರ್ ನೆಕ್ಸಸ್, ಟಿವಿಎಸ್ ಐಕ್ಯೂಬ್ ಹಾಗೂ ರಿವರ್ ಇಂಡೀಗಳು ನೇರವಾದ ಎದುರಾಳಿಯಾಗಿವೆ.

More from DriveSpark

Article Published On: Wednesday, January 28, 2026, 13:33 [IST]
English summary
Ather rizta december 2025 sales report
Read more on ather energy india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+