Ather: ಜನಪ್ರಿಯ ಎಥರ್ ರಿಜ್ಟಾಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಜನ.. ಪ್ರತಿದಿನ 650 ಸ್ಕೂಟರ್‌ಗಳು ಸೇಲ್ಸ್!

ಎಥರ್ ರಿಜ್ಟಾ (Ather Rizta) ವಿಶ್ವಾಸಾರ್ಹ ಇ-ಸ್ಕೂಟರ್ ಎಂದೇ ಖ್ಯಾತಿ ಗಳಿಸಿದೆ. ಇದಕ್ಕೂ ಸಹ ಗ್ರಾಹಕರು ಮನಸೊತ್ತಿದ್ದಾರೆ. ಈ 2026ರ ಜನವರಿಯಲ್ಲಿಯೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 20,155 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 11,978 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ ಹಾಕಿದಾಗ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 68.27% ಪ್ರಗತಿಯಾಗಿದೆ.

'ಎಥರ್ ರಿಜ್ಟಾ' ಮಾರಾಟವು ದಿನದಿಂದ ದಿನಕ್ಕೆ ಅಧಿಕಗೊಳ್ಳುತ್ತಿರುವುದಕ್ಕೆ ಹಲವು ಕಾರಣಗಳಿವೆ. ಬಹುಮುಖ್ಯವಾಗಿ, ಇದೊಂದು ಫ್ಯಾಮಿಲಿ ಸ್ಕೂಟರ್ ಆಗಿದೆ. ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದ್ದು, ನೋಡುಗರ ಕಣ್ಮನ ಸೆಳೆಯುವಂತಿದೆ. ಹೀಗಾಗಿ 'ರಿಜ್ಟಾ' ದೊಡ್ಡ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Ather Rizta January 2026 Sales Report

'ಎಥರ್ ರಿಜ್ಟಾ' ವಿಶೇಷತೆಗಳೇನು:

ಇದು ಬಜೆಟ್ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.1.05 ಲಕ್ಷ ಹಾಗೂ ಗರಿಷ್ಠ ರೂ.1.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಮಧ್ಯಮ ವರ್ಗದವರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ರಿಜ್ಟಾ ಎಸ್ (Rizta S) ಹಾಗೂ ರಿಜ್ಟಾ ಝಡ್ (Rizta Z) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಎಲೆಕ್ಟ್ರಿಕ್ ಸ್ಕೂಟರ್ ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌, ಎಲ್ಇಡಿ ಟರ್ನ್ ಸಿಗ್ನಲ್ ಲೈಟ್‌ಗಳು ಹಾಗೂ ಎಲ್ಇಡಿ ಟೈಲ್‌ಲೈಟ್‌ನ್ನು ಪಡೆದಿದೆ. ರಸ್ತೆಯ ಮೇಲೆ ಗಟ್ಟಿಯಾದ ಹಿಡಿತ ಒದಗಿಸಲು 12-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ. ಡೆಕ್ಕನ್ ಗ್ರೇ, ಸಿಯಾಚಿನ್ ವೈಟ್, ಪ್ಯಾಂಗಾಂಗ್ ಬ್ಲೂ ಹಾಗೂ ಟೆರಾಕೋಟಾ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ 'ರಿಜ್ಟಾ' ಹೆಚ್ಚು ವಿಶಾಲವಾಗಿದೆ. 1,850 ಮಿ.ಮೀ ಉದ್ದ, 750 ಮಿ.ಮೀ ಅಗಲ ಮತ್ತು 1,140 ಮಿ.ಮೀ ಎತ್ತರವಿದೆ. 150 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 125 ಕೆಜಿ ತೂಕವಿದೆ.

ಇದು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 3.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಈ ಸ್ಕೂಟರ್‌ನಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 4.3 ಕೆಡಬ್ಲ್ಯೂ ಅಶ್ವ ಶಕ್ತಿ (ಹಾರ್ಸ್ ಪವರ್) & 22 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.

ನೂತನ 'ಎಥರ್ ರಿಜ್ಟಾ' 7-ಇಂಚಿನ ಎಲ್‌ಸಿಡಿ ಸ್ಕ್ರೀನ್ & ಮಲ್ಟಿ ಪರ್ಪಸ್ ಚಾರ್ಜರ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಸ್ಮಾರ್ಟ್, ಇಕೋ ಹಾಗೂ ಜಿಪ್ ಎಂಬ 3 ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 4.7 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 34 ಲೀಟರ್‌ನಷ್ಟು ಅಂಡರ್ ಸೀಟ್ ಸ್ಟೋರೇಜ್‌ನ್ನು ತನ್ನದಾಗಿಸಿಕೊಂಡಿದೆ.

ಈ ಎಲೆಕ್ಟ್ರಿಕ್ ಸ್ಕೂಟರ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಜೊತೆಗೆ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಓಲಾ ಎಸ್1 ಎಕ್ಸ್ (Ola S1 X) ಬಜಾಜ್ ಚೇತಕ್ (Bajaj Chetak), ಹೀರೋ ವಿಡಾ ವಿಎಕ್ಸ್2 (Hero Vida VX2), ಆಂಪಿಯರ್ ನೆಕ್ಸಸ್ (Ampere Nexus), ಟಿವಿಎಸ್ ಐಕ್ಯೂಬ್ (TVS iQube) ಮತ್ತು ರಿವರ್ ಇಂಡೀ (River Indie) ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Wednesday, February 25, 2026, 8:31 [IST]
English summary
Ather rizta january 2026 sales report
Read more on ather energy india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+