Ather: ರೂ.1.05 ಲಕ್ಷ.. 160 Km ರೇಂಜ್.. ಜನಪ್ರಿಯ ಎಥರ್ ರಿಜ್ಟಾ ಕುರಿತ ಪ್ರಮುಖಾಂಶಗಳು!

ಎಥರ್ ರಿಜ್ಟಾ (Ather Rizta) ಜನಮೆಚ್ಚಿದ ಎಲೆಕ್ಟ್ರಿಕ್ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಇದು ಅಗ್ಗದ ನಿರ್ವಹಣಾ ವೆಚ್ಚ ಹೊಂದಿದ್ದು, ದೀರ್ಘಕಾಲ ಬಾಳಿಕೆ ಬರುತ್ತದೆ ಎಂಬ ನಂಬಿಕೆಯೂ ಗ್ರಾಹಕರಿಗೆ ಬಂದಿದೆ. ನೀವು ದಿನಬಳಕೆಗಾಗಿ ಹೊಚ್ಚ ಹೊಸ ಇ-ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ರಿಜ್ಟಾ' ಅತ್ಯುತ್ತಮವಾದ ಆಯ್ಕೆಯಾಗಲಿದೆ. ಬನ್ನಿ, ಈ ನೂತನ ಸ್ಕೂಟರ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ಹೊಚ್ಚ ಹೊಸ 'ಎಥರ್ ರಿಜ್ಟಾ' ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ರೂ.1.05 ಲಕ್ಷದಿಂದ ರೂ.1.30 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಅದೇ ರೀತಿಯಲ್ಲಿ ರೂ.1.21 ಲಕ್ಷದಿಂದ ರೂ.1.70 ಲಕ್ಷವರೆಗೆ ಆನ್-ರೋಡ್ ಬೆಲೆಯನ್ನು ಹೊಂದಿದೆ. ರಿಜ್ಟಾ ಎಸ್ ಮತ್ತು ರಿಜ್ಟಾ ಝಡ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ.

Ather Rizta Price Design Colours Range Features And All Details

ವಿನ್ಯಾಸ (Design):

ಈ ಎಲೆಕ್ಟ್ರಿಕ್ ಸ್ಕೂಟರ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ನೋಡುಗರ ಕಣ್ಮನ ಸೆಳೆಯುವಂತಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌, ಎಲ್ಇಡಿ ಟರ್ನ್ ಸಿಗ್ನಲ್ ಲೈಟ್‌ಗಳು & ಎಲ್ಇಡಿ ಟೈಲ್‌ಲೈಟ್‌ನ್ನು ಹೊಂದಿದೆ. ಹಾಗೆಯೇ ಸ್ಟೈಲಿಶ್ ಆಗಿರುವ 12-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ.

ಸುತ್ತಳತೆ & ಬಣ್ಣಗಳು (Dimensions & Colours):

ಇದು ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 1,850 ಎಂಎಂ ಉದ್ದ, 750 ಎಂಎಂ ಅಗಲ ಹಾಗೂ 1,140 ಎಂಎಂ ಎತ್ತರವಿದೆ. 150 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,285 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 125 ಕೆಜಿ ತೂಗುತ್ತದೆ. ಡೆಕ್ಕನ್ ಗ್ರೇ, ಸಿಯಾಚಿನ್ ವೈಟ್, ಪ್ಯಾಂಗಾಂಗ್ ಬ್ಲೂ ಮತ್ತು ಟೆರಾಕೋಟಾ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಕಾರ್ಯಕ್ಷಮತೆ (Performance):

ನೂತನ 'ಎಥರ್ ರಿಜ್ಟಾ' 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) & 3.7 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಇದರಲ್ಲಿ ಶಕ್ತಿಯುತವಾದ ಪರ್ಮನೆಂಟ್ ಮ್ಯಾಗ್ನೆಟ್ ಸಿಂಕ್ರೊನಸ್ ಮೋಟಾರ್ (ಪಿಎಂಎಸ್ಎಂ) ಉಪಯೋಗಿಸಲಾಗಿದ್ದು, 4.3 ಕೆಡಬ್ಲ್ಯೂ ಅಶ್ವ ಶಕ್ತಿ ಮತ್ತು 22 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.

ಈ ಎಲೆಕ್ಟ್ರಿಕ್ ಸ್ಕೂಟರ್ 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 4.7 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. 2.9 ಕೆಡಬ್ಲ್ಯೂಹೆಚ್ ಬ್ಯಾಟರಿಯು ಶೇಕಡ 0 ರಿಂದ 100% ಚಾರ್ಜ್ ಆಗಲು 8 ಗಂಟೆ 30 ನಿಮಿಷ ತೆಗೆದುಕೊಳ್ಳುತ್ತದೆ. ಅದೇ ರೀತಿಯಲ್ಲಿ 3.7 ಕೆಡಬ್ಲ್ಯೂಹೆಚ್ ಬ್ಯಾಟರಿಯು ಶೇಕಡ 0 ರಿಂದ 100% ಚಾರ್ಜ್ ಆಗುವುದಕ್ಕೆ 6 ಗಂಟೆ 10 ನಿಮಿಷಗಳು ಮಾತ್ರ ಸಾಕಾಗುತ್ತದೆ.

ವೈಶಿಷ್ಟ್ಯಗಳು (Features):

ಇದು ಎಲ್‌ಸಿಡಿ ಸ್ಕ್ರೀನ್ (7-ಇಂಚು) ಮತ್ತು ಮಲ್ಟಿ ಪರ್ಪಸ್ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸ್ಮಾರ್ಟ್ (Smart), ಇಕೋ (Eco) ಮತ್ತು ಜಿಪ್ (Zip) ಎಂಬ 3 ಆಕರ್ಷಕ ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 34 ಲೀಟರ್‌ನಷ್ಟು ಅಂಡರ್ ಸೀಟ್ ಸ್ಟೋರೇಜ್‌ನ್ನು ಹೊಂದಿದೆ. ಸೀಟ್ ಎತ್ತರವು 780 ಎಂಎಂ ಇದೆ.

ಸಸ್ಪೆನ್ಷನ್ ಸೆಟಪ್‌ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):

ಹೊಸ 'ಎಥರ್ ರಿಜ್ಟಾ' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಜೊತೆಗೆ ಸಿಬಿಎಸ್ (ಕಂಬೈನ್ಡ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

More from DriveSpark

Article Published On: Friday, March 6, 2026, 16:05 [IST]
English summary
Ather rizta price design colours range features and all details
Read more on ather energy india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+