Bajaj: ಬಡವರಿಗೆ ಬೆಸ್ಟ್ ಬೈಕ್‌ಯಿದು.. 100 Km ಮೈಲೇಜ್.. 91,566 ರೂಪಾಯಿಗೆ ಸಿಗುತ್ತೆ!

ಬಜಾಜ್ ಫ್ರೀಡಂ 125 (Bajaj Freedom 125) ಜನಪ್ರಿಯ ಸಿಎನ್‌ಜಿ ಮೋಟಾರ್‌ಸೈಕಲ್‌ ಎಂದೇ ಖ್ಯಾತಿ ಗಳಿಸಿದೆ. ಇದು ದಿನಬಳಕೆಗೆ ಹೆಚ್ಚು ಸೂಕ್ತವಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಇದೇ 'ಫ್ರೀಡಂ 125' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ನೂತನ 'ಬಜಾಜ್ ಫ್ರೀಡಂ' ಬೈಕ್ ಅಗ್ಗದ ದರದಲ್ಲಿ ಲಭ್ಯವಿದ್ದು, ಬಡ ಹಾಗೂ ಮಧ್ಯ ಮವರ್ಗದ ಜನರು ಸಹ ಕೊಂಡುಕೊಳ್ಳಬಹುದು. ಕಂಪನಿಯ ಅಧಿಕೃತ ವೆಬ್‌ಸೈಟ್‌ ವಿವರಗಳ ಪ್ರಕಾರ, ಕನಿಷ್ಠ ರೂ.91,566 ಹಾಗೂ ಗರಿಷ್ಠ ರೂ.1.07 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಎನ್‌ಜಿ04 ಡ್ರಮ್, ಎನ್‌ಜಿ04 ಡ್ರಮ್ ಎಲ್ಇಡಿ ಮತ್ತು ಎನ್‌ಜಿ04 ಡಿಸ್ಕ್ ಎಲ್ಇಡಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

Bajaj Freedom 125 Bike Price Design Colours Engine Mileage Features And All Details

ವಿನ್ಯಾಸ & ಬಣ್ಣಗಳು (Design & Colours):

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ರೌಂಡ್ ಎಲ್ಇಡಿ ಹೆಡ್‌ಲೈಟ್, ಎಲ್ಇಡಿ ಟೈಲ್ ಲ್ಯಾಂಪ್‌ ಮತ್ತು ಸಿಂಗಲ್-ಪೀಸ್ ಸೀಟ್‌ನ್ನು ಹೊಂದಿದೆ. ರೇಸಿಂಗ್ ರೆಡ್, ಸೈಬರ್ ವೈಟ್, ಎಬೊನಿ ಬ್ಯ್ಲಾಕ್, ಪ್ಯೂಟರ್ ಗ್ರೇ ಹಾಗೂ ಕೆರಿಬಿಯನ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimension):

ಈ ಬೈಕ್ ಮೋಟಾರ್‌ಸೈಕಲ್‌ ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 1,970 ಎಂಎಂ ಉದ್ದ, 730 ಎಂಎಂ ಅಗಲ ಹಾಗೂ 1,080 ಎಂಎಂ ಎತ್ತರವಿದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,340 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 149 ಕೆಜಿ ತೂಕವಿದೆ.

Bajaj Freedom 125 Bike Price Design Colours Engine Mileage Features And All Details

ಕಾರ್ಯಕ್ಷಮತೆ (Performance):

ಹೊಸ 'ಬಜಾಜ್ ಫ್ರೀಡಂ 125' ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 124.58-ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 9.5 ಪಿಎಸ್ ಅಶ್ವ ಶಕ್ತಿ ಮತ್ತು 9.7 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಮೈಲೇಜ್ (Mileage):

ಇದು ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ತಲಾ 2 ಲೀಟರ್/ ಕೆಜಿಯಷ್ಟು ಪೆಟ್ರೋಲ್/ ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. ಪೆಟ್ರೋಲ್ ಮೋಡ್‌ನಲ್ಲಿ 130 ಕಿಲೋಮೀಟರ್ ಹಾಗೂ ಸಿಎನ್‌ಜಿ ಮೋಡ್‌ನಲ್ಲಿ 200 ಕಿಲೋಮೀಟರ್ ಮೈಲೇಜ್ ನೀಡುತ್ತದೆ. ಒಮ್ಮೆ ಪೂರ್ತಿಯಾಗಿ ಫುಲ್ ಟ್ಯಾಂಕ್ ಮಾಡಿಸಿದರೆ, 330 ಕಿಲೋಮೀಟರ್‌ವರೆಗೆ ಕ್ರಮಿಸುತ್ತದೆ.

Bajaj Freedom 125 Bike Price Design Colours Engine Mileage Features And All Details

ವೈಶಿಷ್ಟ್ಯಗಳು (Features):

ಈ ಬೈಕ್ ಫುಲ್-ಎಲ್‌ಸಿಡಿ ಇನ್ಸ್ಟ್ರುಮೆಂಟ್ ಡಿಸ್‌ಪ್ಲೇ, ಮೊಬೈಲ್ ಚಾರ್ಜಿಂಗ್ ಪೋರ್ಟ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 7.85 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸೀಟ್ ಎತ್ತರವು 825 ಎಂಎಂ ಇದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):

'ಬಜಾಜ್ ಫ್ರೀಡಂ' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ನ್ನು ಹೊಂದಿದೆ. ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ.

ಪ್ರತಿಸ್ಪರ್ಧಿ ಬೈಕ್‌ಗಳು (Rival Bikes):

ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಹೋಂಡಾ ಎಸ್‌ಪಿ 125 (Honda SP 125), ಟಿವಿಎಸ್ ರೈಡರ್ 125 (TVS Raider 125) ಹಾಗೂ ಹೀರೋ ಎಕ್ಸ್‌ಟ್ರೀಮ್ 125ಆರ್ (Hero Xtreme 125R) ಮೋಟಾರ್‌ಸೈಕಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Thursday, January 29, 2026, 13:16 [IST]
English summary
Bajaj freedom 125 bike price design colours engine mileage features and all details
Read more on bajaj auto india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+