Bajaj: ಪವರ್ ತೋರಿಸಿದ ಬಜಾಜ್.. ಈ ಬೈಕ್‌ಗಾಗಿ ಶೋರೂಂ ಎಡತಾಕಿದ ಗ್ರಾಹಕರು.. 90 ಕಿ.ಮೀ ಮೈಲೇಜ್‌!

ಬಜಾಜ್ ಪ್ಲಾಟಿನಾ (Bajaj Platina) ಜನಪ್ರಿಯ ಮೋಟಾರ್‌ಸೈಕಲ್‌ ಎಂದೇ ಮನೆ ಮಾತಾಗಿದೆ. ಈ ಬೈಕ್‌ಗೆ ಉತ್ತಮವಾದ ಬೇಡಿಕೆಯಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) ದೊಡ್ಡ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 33,520 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 27,336 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 22.62% ಪ್ರಗತಿಯಾಗಿದೆ.

'ಬಜಾಜ್ ಪ್ಲಾಟಿನಾ' ಮಾರಾಟವು ಅಧಿಕಗೊಳ್ಳಲು ಹಲವು ಕಾರಣಗಳಿವೆ. ಇದು ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ದೀರ್ಘಕಾಲ ಬಾಳಿಕೆಯೂ ಬರುತ್ತದೆ. ಜೊತೆಗೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ಹೀಗಾಗಿ, 'ಪ್ಲಾಟಿನಾ' ಮಾರಾಟ ಸಂಖ್ಯೆಯು ಹೆಚ್ಚಳಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Bajaj Platina Bike January 2026 Sales Details

ನೂತನ 'ಬಜಾಜ್ ಪ್ಲಾಟಿನಾ' 2 ವಿಧದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿವೆ. ಅವುಗಳೆಂದರೆ, ಪ್ಲಾಟಿನಾ 100 ಹಾಗೂ ಪ್ಲಾಟಿನಾ 110 ಎಂದು. ಇವುಗಳು ನೋಡಲು ತುಂಬಾ ಚೆನ್ನಾಗಿದ್ದು, ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಹಾಗೆಯೇ ಅತಿ ಕಡಿಮೆ ಬೆಲೆಯಲ್ಲಿಯೂ ಸಿಗುತ್ತವೆ.

ಬಜಾಜ್ ಪ್ಲಾಟಿನಾ 100 (Bajaj Platina 100) ವಿಶೇಷತೆಗಳೇನು:

ಇದು ರೂ.66,015 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ವಿನ್ಯಾಸದ ದೃಷ್ಟಿಯಿಂದ ಉತ್ತಮವಾದ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಬ್ಲ್ಯಾಕ್-ರೆಡ್, ಬ್ಲ್ಯಾಕ್-ಸಿಲ್ವರ್, ಬ್ಲ್ಯಾಕ್-ಗೋಲ್ಡ್ ಮತ್ತು ಬ್ಲ್ಯಾಕ್-ಬ್ಲ್ಯೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಸಾಕಷ್ಟು ವಿಶಾಲವಾಗಿದ್ದು, 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 1,255 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Bajaj Platina Bike January 2026 Sales Details

ಈ ಮೋಟಾರ್‌ಸೈಕಲ್‌ ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 102 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 75 ರಿಂದ 90 ಕಿಲೋಮಿಟರ್‌ವರೆಗೆ ಮೈಲೇಜ್ ನೀಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 9 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ 'ಪ್ಲಾಟಿನಾ 100' ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಎಲೆಕ್ಟ್ರಿಕ್ ಸ್ಟಾರ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಬರೋಬ್ಬರಿ 117 ಕೆಜಿ ತೂಕವಿದೆ. ಸವಾರರ ರಕ್ಷಣೆಗಾಗಿ ಮುಂಭಾಗ ಟೆಲಿಸ್ಕೋಪಿಕ್ & ಹಿಂಭಾಗ ಡುಯಲ್-ಸ್ಪ್ರಿಂಗ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

Bajaj Platina Bike January 2026 Sales Details

ಬಜಾಜ್ ಪ್ಲಾಟಿನಾ 110 (Bajaj Platina 110) ಹೇಗಿದೆ:

ಈ ಬೈಕ್ ರೂ.71,558 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ವಿನ್ಯಾಸದ ಸಲುವಾಗಿ ಅತ್ಯಾಕರ್ಷಕವಾದ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಹೊಂದಿದೆ. ಎಬೊನಿ ಬ್ಲ್ಯಾಕ್-ಬ್ಲ್ಯೂ, ಎಬೊನಿ ಬ್ಲ್ಯಾಕ್-ರೆಡ್, ಕಾಕ್‌ಟೈಲ್ ಮತ್ತು ವೈನ್ ರೆಡ್-ಆರೆಂಜ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. ಹೆಚ್ಚು ವಿಶಾಲವಾಗಿದ್ದು, 200 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,255 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

ಇದು ದರಕ್ಕೆ ಅನುಗುಣವಾಗಿ ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 115.45 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 70 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 15.49 ಸೆಕೆಂಡುಗಳಲ್ಲಿ 0 ರಿಂದ 80 ಕೆಎಂಪಿಹೆಚ್ ಪಡೆಯಲಿದೆ.

ನೂತನ 'ಪ್ಲಾಟಿನಾ 110' ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಎಲೆಕ್ಟ್ರಿಕ್ ಸ್ಟಾರ್ಟರ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸರಿ ಸುಮಾರು 119 ಕೆಜಿ ತೂಕವಿದೆ. ಸುರಕ್ಷತೆಗಾಗಿ ಮುಂಭಾಗ ಟೆಲಿಸ್ಕೋಪಿಕ್ & ಹಿಂಭಾಗ ಟ್ವಿನ್-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

More from DriveSpark

Article Published On: Tuesday, February 24, 2026, 13:36 [IST]
English summary
Bajaj platina bike january 2026 sales details
Read more on bajaj auto india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+