ಸ್ಟೈಲಿಶ್ ಲುಕ್: ರೂ.92,000ಕ್ಕೆ ಸಿಗುತ್ತೆ.. 600 Km ಮೈಲೇಜ್.. ಈ ಪಲ್ಸರ್ ಅಂದ್ರೆ ಎಲ್ಲರಿಗೂ ಇಷ್ಟ!
ಬಜಾಜ್ ಪಲ್ಸರ್ ಎನ್ಎಸ್ 125 (Bajaj Pulsar NS 125) ಜನಪ್ರಿಯ ಬೈಕ್ ಆಗಿದೆ. ಇದರ ಸ್ಟೈಲಿಶ್ ಲುಕ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವ ಗ್ರಾಹಕರೇ ಮನಸೊತ್ತಿದ್ದಾರೆ. ಈ ಮೋಟಾರ್‌ಸೈಕಲ್ ಉತ್ತಮ ಇಂಧನ ದಕ್ಷತೆ ಹಾಗೂ ಕಡಿಮೆ ನಿರ್ವಹಣಾ ವೆಚ್ಚಕ್ಕೂ ಹೆಸರುವಾಸಿಯಾಗಿದೆ. ನೀವು ದಿನಬಳಕೆಗಾಗಿ ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ಪಲ್ಸರ್ ಎನ್ಎಸ್ 125' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು, ಹೇಗೆ ಕಾರ್ಯ ನಿರ್ವಹಿಸುತ್ತದೆ ಹಾಗೂ ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಹೊಚ್ಚ ಹೊಸ 'ಬಜಾಜ್ ಪಲ್ಸರ್ ಎನ್ಎಸ್ 125' ಬೈಕ್ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.92,182 ಹಾಗೂ ಗರಿಷ್ಠ ರೂ.1.03 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್, ಎಲ್ಇಡಿ ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಎಲ್ಇಡಿ ಬ್ಲೂಟೂತ್ ಕನೆಕ್ಟಿವಿಟಿ ಎಬಿಎಸ್ ಎಂಬ 3 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ವಿಶೇಷವಾಗಿ ಈ ಮೋಟಾರ್‌ಸೈಕಲ್‌ನ್ನು ಯುವ ಖರೀದಿದಾರರಿಗಾಗಿಯೇ ವಿನ್ಯಾಸಗೊಳಿಸಲಾಗಿದೆ. ಅತ್ಯುತ್ತಮವಾದ ಎಲ್‌ಇಡಿ ಹೆಡ್‌ಲ್ಯಾಂಪ್ ಮತ್ತು ಎಲ್‌ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಫೆರಿ ಆರೆಂಜ್, ಬರ್ನ್ಟ್ ರೆಡ್, ಬೀಚ್ ಬ್ಲೂ, ಪ್ಯೂಟರ್ ಗ್ರೇ ಹಾಗೂ ಪರ್ಲ್ ಮೆಟಾಲಿಕ್ ವೈಟ್ ಎಂಬ ಆಕರ್ಷಕ ಬಣ್ಣದೊಂದಿಗೆ ಲಭ್ಯವಿದೆ.
ಸುತ್ತಳತೆ (Dimension):
ಇದು ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 2,018 ಮಿ.ಮೀ ಉದ್ದ, 810 ಮಿ.ಮೀ ಅಗಲ ಹಾಗೂ 1,078 ಮಿ.ಮೀ ಎತ್ತರವಿದೆ. ಜೊತೆಗೆ 179 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,353 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 144 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ನೂತನ 'ಬಜಾಜ್ ಪಲ್ಸರ್ ಎನ್ಎಸ್ 125' ಬೈಕ್ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 124.45-ಸಿಸಿ 4 ಸ್ಟ್ರೋಕ್ ಏರ್-ಕೋಲ್ಡ್, ಸಿಂಗಲ್- ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8,500 ಆರ್‌ಪಿಎಂನಲ್ಲಿ 12 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 7,000 ಆರ್‌ಪಿಎಂನಲ್ಲಿ 11 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.
ಮೈಲೇಜ್ (Mileage):
ಈ ಮೋಟಾರ್‌ಸೈಕಲ್ 1 ಲೀಟರ್ ಪೆಟ್ರೋಲ್ ಹಾಕಿಸಿದರೆ, ಸರಿ ಸುಮಾರು 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 12 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. ಒಮ್ಮೆ ಪೂರ್ತಿಯಾಗಿ ತುಂಬಿಸಿದರೆ 600 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು. 103 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 25.85 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ವೈಶಿಷ್ಟ್ಯಗಳು (Features):
ಇದು ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಎಲೆಕ್ಟ್ರಿಕ್ ಸ್ಟಾರ್ಟ್ ಹಾಗೂ ಸರ್ವಿಸ್ ಡ್ಯೂ ಇಂಡಿಕೇಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಸಾಧಿಸಲು 17-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. ಸೀಟ್ ಎತ್ತರವು 805 ಮಿ.ಮೀ ಇದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System):
ಹೊಸ 'ಬಜಾಜ್ ಪಲ್ಸರ್ ಎನ್ಎಸ್ 125' ಬೈಕ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಮೊನೊ-ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಸಿಂಗಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








