Bajaj: ನಿನ್ನೆ ಬಿಡುಗಡೆ.. 89,910 ರೂಪಾಯಿ, ಹೊಸ ಬಜಾಜ್ ಪಲ್ಸರ್ 125ಗೆ 3 ಪರ್ಯಾಯ ಬೈಕ್‌ಗಳಿವು.. ಬೆಲೆ ಎಷ್ಟು?

2026ರ ಹೊಸ ಬಜಾಜ್ ಪಲ್ಸರ್ 125 (Bajaj Pulsar 125) ಮೋಟಾರ್‌ಸೈಕಲ್‌ ಮಂಗಳವಾರ ಬಿಡುಗಡೆಗೊಂಡಿದೆ. ರೂ.89,910 ರಿಂದ ರೂ.92,046 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸಿಂಗಲ್ ಸೀಟ್ ಹಾಗೂ ಸ್ಪ್ಲಿಟ್ ಸೀಟ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಬ್ಲ್ಯಾಕ್ ಗ್ರೇ, ಬ್ಲ್ಯಾಕ್ ರೇಸಿಂಗ್ ರೆಡ್, ಬ್ಲ್ಯಾಕ್ ಸಯಾನ್ ಬ್ಲ್ಯೂ ಹಾಗೂ ರೇಸಿಂಗ್ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 165 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,320 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಪಲ್ಸರ್ 125' ಬೈಕ್ 124.4-ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 11.6 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. ಸರಿ ಸುಮಾರು 50 ಕಿಲೋಮೀಟರ್‌ವರೆಗೂ ಕೊಡುತ್ತದೆ. ಫುಲ್ ಡಿಜಿಟಲ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

Best 3 alternative bikes for 2026 New Bajaj Pulsar 125 Glamour SP 125 And Xtreme 125R

ನೀವು ಇದೇ 'ಬಜಾಜ್ ಪಲ್ಸರ್ 125'ಗೆ ಬದಲಾಗಿ ಹೀರೋ ಗ್ಲಾಮರ್, ಹೋಂಡಾ ಎಸ್‌ಪಿ 125 ಹಾಗೂ ಹೀರೋ ಎಕ್ಸ್‌ಟ್ರೀಮ್ 125ಆರ್ ಬೈಕ್‌ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಹೀರೋ ಗ್ಲಾಮರ್ (Hero Glamour):

ಇದು ಜನಪ್ರಿಯ ಬೈಕ್ ಎಂದೇ ಹೆಸರುವಾಸಿಯಾಗಿದೆ. 'ಬಜಾಜ್ ಪಲ್ಸರ್ 125'ಗೆ ಪರ್ಯಾಯ ಆಯ್ಕೆಯಾಗಿದ್ದು, ರೂ.82,398 ರಿಂದ ರೂ.86,085 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಬ್ಲ್ಯಾಕ್ ಮೆಟಾಲಿಕ್ ಸಿಲ್ವರ್, ಕ್ಯಾಂಡಿ ಬ್ಲೇಜಿಂಗ್ ರೆಡ್, ಬ್ಲ್ಯಾಕ್ ಸ್ಪೋರ್ಟ್ಸ್ ರೆಡ್ ಮತ್ತು ಟೆಕ್ನೋ ಬ್ಲೂ ಮೆಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,267 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Best 3 alternative bikes for 2026 New Bajaj Pulsar 125 Glamour SP 125 And Xtreme 125R

ಹೊಸ 'ಗ್ಲಾಮರ್' 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 55 ಕಿಲೋಮೀಟರ್‌ವರೆಗೂ ಮೈಲೇಜ್ ನೀಡುತ್ತದೆ. ಡಿಜಿಟಲ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಎಸ್‌ಪಿ 125 (Honda SP 125):

ಈ ಬೈಕ್‌ನ್ನು 'ಬಜಾಜ್ ಪಲ್ಸರ್ 125'ಗೆ ಬದಲಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.87,653 ರಿಂದ ರೂ.92,571 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಇಗ್ನಿಯಸ್ ಬ್ಲ್ಯಾಕ್, ಇಂಪೀರಿಯಲ್ ರೆಡ್ ಮೆಟಾಲಿಕ್, ಮ್ಯಾಟ್ ಆಕ್ಸಿಸ್ ಗ್ರೇ ಮೆಟಾಲಿಕ್ ಹಾಗೂ ಪರ್ಲ್ ಸೈರನ್ ಬ್ಲೂ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 160 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,285 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Best 3 alternative bikes for 2026 New Bajaj Pulsar 125 Glamour SP 125 And Xtreme 125R

ನೂತನ 'ಎಸ್‌ಪಿ 125' ಮೋಟಾರ್‌ಸೈಕಲ್‌ 123.94-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 60 ಕಿಲೋಮೀಟರ್‌ವರೆಗೂ ಮೈಲೇಜ್ ಕೊಡುತ್ತದೆ. ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ & ಸೈಲೆಂಟ್ ಸ್ಟಾರ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಹೀರೋ ಎಕ್ಸ್‌ಟ್ರೀಮ್ 125ಆರ್ (Hero Xtreme 125R):

ಇದೊಂದು ಪ್ರಖ್ಯಾತ ಬೈಕ್‌ ಎಂದೇ ಹೆಸರುವಾಸಿಯಾಗಿದ್ದು, 'ಬಜಾಜ್ ಪಲ್ಸರ್ 125'ಗೆ ಪರ್ಯಾಯವಾಗಿದೆ. ರೂ.92,500 ರಿಂದ ರೂ.1.04 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಸ್ಟಾಲಿಯನ್ ಬ್ಲ್ಯಾಕ್, ಅಬ್ರಾಕ್ಸ್ ಆರೆಂಜ್, ಫೈರ್‌ಸ್ಟಾರ್ಮ್ ರೆಡ್, ಬ್ಲ್ಯಾಕ್ ಪರ್ಲ್ ರೆಡ್ ಮತ್ತು ಕೋಬಾಲ್ಟ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1319 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Best 3 alternative bikes for 2026 New Bajaj Pulsar 125 Glamour SP 125 And Xtreme 125R

ಹೊಸ 'ಎಕ್ಸ್‌ಟ್ರೀಮ್ 125ಆರ್' ಮೋಟಾರ್‌ಸೈಕಲ್‌ 124.7-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 66 ಕಿಲೋಮೀಟರ್‌ವರೆಗೂ ಮೈಲೇಜ್ ನೀಡುತ್ತದೆ. 4.2-ಇಂಚಿನ ಎಲ್‍ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್ ಹಾಗೂ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ.

More from DriveSpark

Article Published On: Wednesday, January 21, 2026, 17:49 [IST]
English summary
Best 3 alternative bikes for 2026 new bajaj pulsar 125 glamour sp 125 and xtreme 125r
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+